ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ತೆರವು

ಉಡುಪಿ: ನಗರದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿದ್ದ ಸಾವರ್ಕರ್ ಭಾವಚಿತ್ರವಿರುವ ಕಟೌಟ್ ಅನ್ನು ಇಂದು ತೆರವುಗೊಳಿಸಲಾಯಿತು.
ಸಾಕಷ್ಟು ವಿವಾದಕ್ಕೆ ಕಾರಣವಾಗಿದ್ದ ಈ ಕಟೌಟನ್ನು ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವಕ್ಕೆ ಶುಭ ಕೋರಲು ಹಾಕಲಾಗಿತ್ತು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಎಸ್ ಡಿಪಿಐ ಮುಖಂಡರು ಆಕ್ಷೇಪ ವ್ಯಕ್ತಪಡಿಸಿದರು.
ಈ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಜಿಲ್ಲಾ ಯುವ ಮೋರ್ಚಾ ಕಾರ್ಯಕರ್ತರು ಈ ಕಟೌಟ್ ಗೆ ಮಾಲಾರ್ಪಣೆ ಮಾಡಿ ಕಾಂಗ್ರೆಸ್ ಹಾಗೂ ಎಸ್ ಡಿಪಿಐ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಅಲ್ಲದೆ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ ಕೂಡ ನಡೆಸಲಾಗಿತ್ತು.
ಕಳೆದ ನಾಲ್ಕೈದು ದಿನಗಳಿಂದ ಬ್ರಹ್ಮಗಿರಿ ಸರ್ಕಲ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಇದೀಗ ಅಷ್ಟಮಿ ನಡೆಯುತ್ತಿರುವುದರಿಂದ ಭದ್ರತೆಯ ಕಾರಣಕ್ಕಾಗಿ ಪೊಲೀಸರ ಸೂಚನೆಯಂತೆ ಸಂಘಪರಿವಾರದ ಕಾರ್ಯಕರ್ತರು ಈ ಕಟೌಟನ್ನು ತೆರವುಗೊಳಿಸಿದರು.
Next Story