Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಯಕರ್ತರನ್ನು ನಿಯಂತ್ರಿಸದಿದ್ದರೆ...

ಕಾರ್ಯಕರ್ತರನ್ನು ನಿಯಂತ್ರಿಸದಿದ್ದರೆ ಸಿಎಂ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ: ಬಿಜೆಪಿ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರಿಂದ ಮೊಟ್ಟೆ ಎಸೆತ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ19 Aug 2022 5:15 PM IST
share
ಕಾರ್ಯಕರ್ತರನ್ನು ನಿಯಂತ್ರಿಸದಿದ್ದರೆ ಸಿಎಂ ಕಾರ್ಯಕ್ರಮಗಳಲ್ಲಿ ಪ್ರತಿಭಟನೆ: ಬಿಜೆಪಿ ನಾಯಕರಿಗೆ ಡಿಕೆಶಿ ಎಚ್ಚರಿಕೆ

ಚಳ್ಳಕೆರೆ, ಆ.19: ರಾಜ್ಯ ಸರಕಾರ ಹಾಗೂ ಬಿಜೆಪಿ ಪಕ್ಷ ತಮ್ಮ ಕಾರ್ಯಕರ್ತರನ್ನು ನಿಯಂತ್ರಣದಲ್ಲಿಟ್ಟುಕೊಂಡರೆ ಸರಿ, ಇಲ್ಲದಿದ್ದರೆ ಮುಖ್ಯಮಂತ್ರಿ ಸೇರಿದಂತೆ ಎಲ್ಲ ಸಚಿವರ ಕಾರ್ಯಕ್ರಮಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಶುಕ್ರವಾರ ಚಳ್ಳಕೆರೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕೇವಲ ನಮ್ಮ ಪಕ್ಷದ ನಾಯಕರಲ್ಲ. ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಹಕ್ಕಿನಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನ ನೀಡಲಾಗಿದೆ. ಅವರ ಯಾವುದಾದರೂ ಹೇಳಿಕೆ ಸರಿ ಇಲ್ಲ ಎನಿಸಿದ್ದಲ್ಲಿ ಅದನ್ನು ಟೀಕೆ ಮಾಡಬಹುದು. ಅದು ಪ್ರಜಾಪ್ರಭುತ್ವದ ಭಾಗ ಎಂದರು.

ಆದರೆ ನೆರೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ವಿರೋಧ ಪಕ್ಷದ ನಾಯಕರು ಸರಕಾರದ ಕಣ್ಣು ತೆರೆಸಲು ಹಾನಿಯಾಗಿರುವ ಪ್ರದೇಶಕ್ಕೆ ಭೇಟಿ ನೀಡುತ್ತಿರುವಾಗ ಈ ರೀತಿ ಕಪ್ಪು ಬಾವುಟ ಪ್ರದರ್ಶಿಸಿ, ಮೊಟ್ಟೆ ಹೊಡೆದಿರುವುದು ಸರಿಯಲ್ಲ. ಸರಕಾರ ಮಾಡಿದ ಅನೇಕ ತಪ್ಪುಗಳನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ತಮಗೆ ಅನ್ಯಾಯ ಆಗಿದೆ ಎಂದು ಪ್ರತಿಭಟಿಸಿದ್ದಾರೆ. ಇದು ಚರ್ಚೆಗೆ ಅವರು ನಮಗೆ ಕೊಟ್ಟಿರುವ ಅಸ್ತ್ರಗಳು ಎಂದು ಅವರು ಹೇಳಿದರು.

ವಾರ್ತಾಭಾರತಿಯ ನ್ಯೂಸ್ ಅಪ್ಡೇಟ್ಸ್ ನಿಮ್ಮ ವಾಟ್ಸ್ ಆಪ್ ಗೆ  ತಲುಪಬೇಕೇ ? ಈ ಲಿಂಕ್ https://bit.ly/3Cd3adz ಕ್ಲಿಕ್ ಮಾಡಿ ನಮ್ಮ ಗ್ರೂಪ್ Join ಆಗಿ.

ರಾಜ್ಯದ ಜನ ಸಮಸ್ಯೆಗಳಿಂದ ಪರದಾಡುತ್ತಿರುವಾಗ ಸರಕಾರವನ್ನು ಎಚ್ಚರಿಸುವ ಜವಾಬ್ದಾರಿ ವಿರೋಧ ಪಕ್ಷದ್ದಾಗಿದೆ. ಅದನ್ನು ಮಾಡಲು ಮುಂದಾದರೆ ಕಪ್ಪು ಬಾವುಟ ಹಾರಿಸಿ, ಮೊಟ್ಟೆ ಹೊಡೆಯುತ್ತಿದ್ದಾರೆ. ಈ ರೀತಿ ಸಿದ್ದರಾಮಯ್ಯ ಅವರನ್ನಾಗಲಿ, ಕಾಂಗ್ರೆಸ್ ಪಕ್ಷವನ್ನಾಗಲಿ ಹೆದರಿಸಲು ಸಾಧ್ಯವೇ? ನಾವು ಕಾಂಗ್ರೆಸ್ ಪಕ್ಷದವರು. ನಮಗೆ ಹೋರಾಟದ ಇತಿಹಾಸ ಇದೆ. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದು ಕಾಂಗ್ರೆಸ್ ಎಂದು ಶಿವಕುಮಾರ್ ತಿಳಿಸಿದರು.

ವಿರೋಧ ಪಕ್ಷದ ನಾಯಕರು ತಮ್ಮ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಮುಖ್ಯಮಂತ್ರಿ ಬೊಮ್ಮಾಯಿ ಸಾಹೇಬರೆ, ಕಟೀಲ್ ಸಾಹೇಬರೇ ನಾನು ಯಾವುದೇ ಕರೆ ನೀಡದಿದ್ದರೂ ಅನೇಕ ಕಡೆಗಳಲ್ಲಿ ನಮ್ಮ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಒಂದು ವೇಳೆ ನಾನು ಅಧಿಕೃತವಾಗಿ ಕರೆ ನೀಡಿ ಮಂತ್ರಿಗಳ ಕಾರ್ಯಕ್ರಮದ ಕಡೆಗಳಲ್ಲಿ ನಿಮ್ಮ ಲಂಚ ಹಾಗೂ 40 ಪರ್ಸೆಂಟ್ ಕಮಿಷನ್ ವಿರೋಧಿಸಿ ಅದೇ ಕಪ್ಪು ಬಾವುಟ ಹಿಡಿದು ಅಡ್ಡಿ ಮಾಡಲು ಹೊರಟರೆ ನಿಮ್ಮ ಕಾನೂನು ವ್ಯವಸ್ಥೆ ಏನಾಗುತ್ತದೆ ಎಂದು ಯೋಚಿಸಿದ್ದೀರಾ? ಎಂದು ಅವರು ಎಚ್ಚರಿಕೆ ನೀಡಿದರು.

ನೀವು ಈ ಹಿಂದೆ ನೈತಿಕ ಪೊಲೀಸ್ ಗಿರಿಯಲ್ಲಿ ತಪ್ಪೇನಿದೆ ಎಂದು ಹೇಳಿದ್ದಿರಿ. ಮತ್ತೊಂದು ಕಡೆ ನಾವು ಪ್ರತಿಭಟನೆ ಮಾಡಿದ ಸಂದರ್ಭದಲ್ಲಿ 30-40 ಪ್ರಕರಣ ದಾಖಲಿಸಿದ್ದೀರಿ. ನಾವು ಅದಕ್ಕೆ ಹೆದರಲಿಲ್ಲ. ಸರಕಾರ ಇದನ್ನು ತಡೆಯದಿದ್ದರೆ ನಮ್ಮ ನಾಯಕರ ಜತೆ ಚರ್ಚೆ ಮಾಡಿ ಮುಂದಿನ ಹೋರಾಟದ ಹೆಜ್ಜೆ ಇಡಬೇಕಾಗುತ್ತದೆ ಎಂದು ಶಿವಕುಮಾರ್ ಹೇಳಿದರು.

ಭಾರತ್ ಜೋಡೋ ಕಾರ್ಯಕ್ರಮ ಸ್ಥಳ ಪರಿಶೀಲನೆಗೆ ಪ್ರವಾಸ: ಕೆಂಪೇಗೌಡ ಜಯಂತಿ ಕಾರ್ಯಕ್ರಮಕ್ಕೆ ಮಾಜಿ ಶಾಸಕ ಸುಧಾಕರ್ ಅವರ ಆಹ್ವಾನದ ಮೇರೆಗೆ ಹಾಗೂ ರಾಹುಲ್ ಗಾಂಧಿ ಅವರ ಭಾರತ ಜೋಡೋ ಪಾದಯಾತ್ರೆ ಹಿನ್ನೆಲೆಯಲ್ಲಿ ಈ ಮಾರ್ಗದ ಹಾಗೂ ವ್ಯವಸ್ಥೆ ಕಲ್ಪಿಸಲು ಪರಿಶೀಲಿಸಲು ಚಿತ್ರದುರ್ಗ ಜಿಲ್ಲೆಗೆ ಆಗಮಿಸಿದ್ದೇನೆ ಎಂದು ಅವರು ತಿಳಿಸಿದರು.

ಭಾರತ್ ಜೋಡೋ ಪಾದಯಾತ್ರೆ ರಾಜ್ಯದಲ್ಲಿ ಸುಮಾರು 510 ಕಿ.ಮೀ. ನಡೆಯಲಿದ್ದು, ಗುಂಡ್ಲುಪೇಟೆಯಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ, ನಾಗಮಂಗಲ, ತುರುವೇಕೆರೆ, ಹಿರಿಯೂರು, ಚಳ್ಳಕೆರೆ, ಬಳ್ಳಾರಿ ಮೂಲಕ ರಾಯಚೂರು ಮಾರ್ಗವಾಗಿ ತೆಲಂಗಾಣ ತಲುಪುತ್ತಾರೆ. ಒಟ್ಟು 21 ದಿನಗಳ ಕಾಲ ಈ ಯಾತ್ರೆ ನಡೆಯಲಿದೆ. ರಾಜ್ಯದ ಗಡಿ ಪ್ರವೇಶಿಸುವಾಗ ಅರಣ್ಯ ಪ್ರದೇಶವಿದ್ದು, ಈ ಭಾಗದಲ್ಲಿ ಮಾಡುವುದು ಬೇಡ ಎಂದು ಕೇರಳ ಪೊಲೀಸರು ಮನವಿ ಮಾಡಿದ್ದಾರೆ. ಅದೇ ರೀತಿ ರಾಜ್ಯದ ಭಾಗದಲ್ಲಿ ಯಾವುದಾದರೂ ಸಮಸ್ಯೆಗಳಿವೆಯೇ ಎಂದು ಚರ್ಚೆ ಮಾಡುತ್ತೇವೆ ಎಂದು ಅವರು ತಿಳಿಸಿದರು.

ಇದೆಲ್ಲದರ ಪರಿಶೀಲನೆಗೆ ದಿಲ್ಲಿಯಿಂದ ಒಂದು ತಂಡ ಆಗಮಿಸುತ್ತಿದ್ದು, ಅವರು ಬರುವ ಮುನ್ನ ನಾನು ಕಣ್ಣಾರೆ ಸ್ಥಳ ಪರಿಸ್ಥಿತಿ ಪರಿಶೀಲಿಸುತ್ತಿದ್ದೇನೆ. ಈ ಭಾಗದಲ್ಲಿ ನಾನು ಪಾದಯಾತ್ರೆ ಮಾಡಿದ್ದು, ನಮ್ಮ ನಾಯಕರ ಜತೆ ಚರ್ಚೆ ಮಾಡುತ್ತಿದ್ದೇನೆ. ಇದು ಪಕ್ಷದ ವಿಚಾರ ಅಷ್ಟೇ ಅಲ್ಲ. ದೇಶ ವಿಭಜನೆ ಆಗುತ್ತಿರುವ ಸಮಯದಲ್ಲಿ ದೇಶವನ್ನು ಒಗ್ಗೂಡಿಸುವ ಸಲುವಾಗಿ ಈ ಪಾದಯಾತ್ರೆ ಮಾಡಲಾಗುತ್ತಿದೆ. ನಮ್ಮ ರಾಜ್ಯದ ಒಂದೊಂದು ಜಿಲ್ಲೆಯವರು ಒಂದೊಂದು ದಿನ ಪಾದಯಾತ್ರೆಗೆ ಬಂದು ಹೆಜ್ಜೆ ಹಾಕಲಿದ್ದಾರೆ ಎಂದು ಶಿವಕುಮರ್ ಹೇಳಿದರು.

ಮೊಟ್ಟೆ ಹೊಡೆದಿರುವವರು ಕಾಂಗ್ರೆಸ್ ಕಾರ್ಯಕರ್ತರು ಎಂಬ ಬಿಜೆಪಿ ಶಾಸಕ ಕೆ.ಜಿ.ಬೋಪಯ್ಯ ಅವರ ಹೇಳಿಕೆ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ‘ಮೊದಲು ಬೋಪಯ್ಯ ಅವರನ್ನು ಬಂಧಿಸಬೇಕು. ಸುಳ್ಳಿಗೆ ಮತ್ತೊಂದು ಹೆಸರೇ ಬಿಜೆಪಿ. ನಾವು ಮಾಡಿದ ಕೆಲಸವನ್ನು ನಮ್ಮ ಕೆಲಸ ಎಂದು ಹೇಳಿಕೊಳ್ಳಬೇಕು. ತಾವು ಮಾಡಿದ ಕೆಲಸವನ್ನು ಬೇರೆಯವರ ಮೇಲೆ ಹಾಕುವುದು ಹೇಡಿತನ ಎಂದು ತಿರುಗೇಟು ನೀಡಿದರು.

ಸರಕಾರ ಎಲ್ಲ ವಿಚಾರಗಳಲ್ಲೂ ವಿಫಲವಾಗಿದ್ದು, ಅವರ ವೈಫಲ್ಯ ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ. ನಾನು ಪಕ್ಷದ ಅಧ್ಯಕ್ಷನಾಗಿ ಮುಖ್ಯಮಂತ್ರಿಗಳಿಗೆ ನಮ್ಮ ನೋವು, ಭಾವನೆಯನ್ನು ತಿಳಿಸುತ್ತಿದ್ದೇನೆ. ಬೇರೆಯವರ ಹೇಳಿಕೆಗೆ ಉತ್ತರ ನೀಡುವುದಿಲ್ಲ ಎಂದು ಶಿವಕುಮಾರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X