ಅ.20: ದೇವರಾಜ ಅರಸು ಜನ್ಮ ದಿನಾಚರಣೆ

ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಪಂ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಆ.20ರಂದು ಮಧ್ಯಾಹ್ನ 2.30ಕ್ಕೆ ನಗರದ ಕುದ್ಮಲ್ ರಂಗರಾವ್ ಪುರಭವನದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
*ಆ.20 ರಿಂದ 22ರ ವರೆಗೆ ವಸ್ತು ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ. ಆ.21ರ ಬೆಳಗ್ಗೆ 10.30ಕ್ಕೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳ, ವಸತಿ ಶಾಲೆಗಳ ವಿದ್ಯಾರ್ಥಿಗಳಿಗೆ ಡಿ. ದೇವರಾಜ ಅರಸು ಅವರ ಜೀವನ ಹಾಗೂ ಸಾಧನೆಗಳ ಕುರಿತ ಭಾಷಣ ಹಾಗೂ ಪ್ರಬಂಧ ಸ್ಪರ್ಧೆ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಆ.22ರ ಅಪರಾಹ್ನ 3ಕ್ಕೆ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.
Next Story