Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು...

ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು ಮಾರಕ: ಕುಮಾರಸ್ವಾಮಿ ಆಕ್ರೋಶ

''ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಂದಿಲ್ಲ, ವಿಧಾನಸೌಧಕ್ಕೆ ಹೋದರೆ ಸಾಕು''

ವಾರ್ತಾಭಾರತಿವಾರ್ತಾಭಾರತಿ19 Aug 2022 9:42 PM IST
share
ನೆಲ, ಜಲ, ಭಾಷೆಗೆ ರಾಷ್ಟ್ರೀಯ ಪಕ್ಷಗಳು ಮಾರಕ: ಕುಮಾರಸ್ವಾಮಿ ಆಕ್ರೋಶ

ಮಾನ್ವಿ (ರಾಯಚೂರು), ಆ.19: ನೆಲ, ಜಲ, ಭಾಷೆಯಂಥ ಸೂಕ್ಷ್ಮ ವಿಚಾರದಲ್ಲಿ ರಾಷ್ಟ್ರೀಯ ಪಕ್ಷಗಳು ರಾಜ್ಯದ ಹಿತಾಸಕ್ತಿಗೆ ಮಾರಕವಾಗಿ ಪರಿಣಮಿಸಿವೆ. ತನ್ನ ವೈಫಲ್ಯಗಳನ್ನು ಮುಚ್ಚಿಟ್ಟುಕೊಳ್ಳಲು ಬಿಜೆಪಿ ಸರಕಾರವು ರಾಯಚೂರನ್ನು ತೆಲಂಗಾಣಕ್ಕೆ ಸೇರುವಂಥ ಆಘಾತಕಾರಿ ಹೇಳಿಕೆಯನ್ನು ತನ್ನ ಶಾಸಕರಿಂದಲೆ ಕೊಡಿಸುತ್ತಿದೆ. ಇದಕ್ಕಿಂತ ಕನ್ನಡ ದ್ರೋಹ, ನಾಡದ್ರೋಹ ಇನ್ನೊಂದಿದೆಯೇ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದ ಜಾತ್ಯತೀತ ಜನತಾದಳ ಪಕ್ಷದ ಬೃಹತ್ ಸಮಾವೇಶ ಹಾಗೂ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಜನ್ಮದಿನ ಕಾರ್ಯವನ್ನು ಉದ್ದೇಶಿಸಿ ಅವರು ಭಾಷಣ ಮಾಡಿದರು.

ಸ್ಥಳೀಯ ಬಿಜೆಪಿ ಶಾಸಕರು ಕ್ಷೇತ್ರಕ್ಕೆ ಬಂದ ಎಲ್ಲ ಅನುದಾನವನ್ನು ಲೂಟಿ ಹೊಡೆದು, ಏನನ್ನೂ ಜನರ ಕೆಲಸ ಮಾಡದೇ ಈಗ ಜನರ ಗಮನ ಬೇರೆಡೆಗೆ ಸೆಳೆಯುವ ಉದ್ದೇಶದಿಂದ ರಾಯಚೂರನ್ನು ತೆಲಂಗಾಣಕ್ಕೆ ಸೇರ್ಪಡೆ ಮಾಡುವ ಕನ್ನಡ ದ್ರೋಹಿ ಹೇಳಿಕೆ ನೀಡಿದ್ದಾರೆ. ಇಂಥ ಹೇಳಿಕೆಗಳನ್ನು ನಮ್ಮ ದೌರ್ಬಲ್ಯ ಎಂದು ನಂಬಿ ತೆಲಂಗಾಣ ಮುಖ್ಯಮಂತ್ರಿ ಹೇಳಿಕೆ ನೀಡಿದ್ದಾರೆ. ಅಂಥ ಹೇಳಿಕೆಗೆ ಮೂಲ ಕಾರಣರು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ನಾನು ರಾಯಚೂರು ಶಾಸಕರ ಹೇಳಿಕೆಯನ್ನೂ ಗಮನಿಸಿದ್ದೇನೆ, ಅದೇ ರೀತಿ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ಹೇಳಿಕೆಯ ಪೂರ್ಣಪಾಠವನ್ನೂ ಕೇಳಿದ್ದೇನೆ. ಆದರೆ, ಸ್ಥಳೀಯ ಶಾಸಕರ ಬೇಜವಾಬ್ದಾರಿ ಹೇಳಿಕೆಯಿಂದ ಗೊಂದಲ ಉಂಟಾಗಿದೆ. ಆ ಶಾಸಕನಿಗೆ ಛೀಮಾರಿ ಹಾಕುವ ಕೆಲಸವನ್ನು ಬಿಜೆಪಿ ರಾಜ್ಯ ನಾಯಕರು ಈವರೆಗೂ ಮಾಡಿಲ್ಲ ಎಂದು ಅವರು ಕಿಡಿಕಾರಿದರು.

ಕನ್ನಡಿಗರು, ತೆಲುಗರು ಗಡಿ ಪ್ರದೇಶದಲ್ಲಿ ಸಹೋದರ ಭಾವದಿಂದ ನೆಮ್ಮದಿಯ ಜೀವನ ಮಾಡುತ್ತಿದ್ದಾರೆ. ಆದರೆ, ರಾಷ್ಟ್ರೀಯ ಪಕ್ಷಗಳ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಯನ್ನು ಕಾಪಾಡಿಕೊಳ್ಳಲು ಇಂಥ ವಿಘಟನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ನಮ್ಮ ಪಕ್ಷ ಇಂಥ ಹೇಳಿಕೆಗಳನ್ನು ಖಂಡಿಸುತ್ತದೆ ಎಂದ ಕುಮಾರಸ್ವಾಮಿ ಅವರು; ನೂರಾರು ತೆಲುಗು ಕುಟುಂಬಗಳು ರಾಯಚೂರು ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೇಸಾಯ ಮಾಡಿಕೊಂಡು ಜೀವನ ಮಾಡುತ್ತಿವೆ. ಅವರೆಲ್ಲರೂ ಈಗ ಕನ್ನಡಿಗರೇ ಆಗಿದ್ದಾರೆ. ಆದರೆ, ಬಿಜೆಪಿ ಶಾಸಕರು ಇದರಲ್ಲಿಯೂ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಯಚೂರು ಜಿಲ್ಲೆಯಲ್ಲಿಯೂ ಬರಡು ಭೂಮಿಗಳಿವೆ. ಕೃಷ್ಣಾ  ನದಿ ನೀರನ್ನೇ ಕಾಣದ ಪ್ರದೇಶಗಳಿವೆ. ಅಂಥ ಪ್ರದೇಶಗಳಿಗೆ ಕೃಷ್ಣೆಯ ನೀರನ್ನು ಹರಿಸುವುದು ನಮ್ಮ ಪಕ್ಷದ ಬದ್ಧತೆಯಾಗಿದೆ. ಇಂಥ ಪ್ರಯತ್ನಕ್ಕೆ ತೆಲಂಗಾಣ ಮುಖ್ಯಮಂತ್ರಿ ಸಹಕಾರ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು. 

ತೆಲಂಗಾಣ ಮುಖ್ಯಮಂತ್ರಿ ನನ್ನ ಜತೆ ಆತ್ಮೀಯರಾಗಿದ್ದಾರೆ. ಹಾಗೆಂದ ಮಾತ್ರಕ್ಕೆ ನೆಲ ಜಲದ ಬಗ್ಗೆ ರಾಜಿ ಮಾತೇ ಇಲ್ಲ. ರಾಷ್ಟ್ರೀಯ ಪಕ್ಷಗಳಿಗೆ ಇಂಥ ಬದ್ಧತೆ ಇಲ್ಲ. ರಾಯಚೂರು ಶಾಸಕರ ಅಸಂಬದ್ಧ ಹೇಳಿಕೆಯನ್ನು ಖಂಡಿಸುತ್ತೇನೆ. ಮತ್ತೆ ಇಂಥ ಹೇಳಿಕೆಗಳು ಬೇಡ ಎಂದು ತೆಲಂಗಾಣ ಮುಖ್ಯಮಂತ್ರಿಯನ್ನು ಕೋರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದರು.

ನನ್ನನ್ನು ಒಮ್ಮೆ ನಂಬಿ, ನಮ್ಮ ಪಕ್ಷಕ್ಕೆ ಸಂಪೂರ್ಣ ಬಹುಮತ ನೀಡಿ. ಯಾವ ಪಕ್ಷದ ಹಂಗಿಲ್ಲದೆ ಸ್ವತಂತ್ರ ಸರಕಾರ ಮಾಡುವ ಅವಕಾಶ ನೀಡಿ. ಆರೋಗ್ಯ, ಶಿಕ್ಷಣ, ಕೃಷಿ, ನೀರಾವರಿ, ಮಹಿಳಾ-ಯುವಜನ ಸಬಲೀಕರಣ, ವಸತಿ ಸೇರಿರುವ ಪಂಚರತ್ನ ಯೋಜನೆಗಳನ್ನು ಜಾರಿ ಮಾಡಲಾಗುವುದು. ನೆಲ, ಜಲ, ಭಾಷೆಯ ಹಿತಾಸಕ್ತಿಗೆ ಧಕ್ಕೆ ಆಗದಂತೆ ಕನ್ನಡ ಆಸ್ಮಿತೆಗೆ ಅಪಚಾರ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಅವರು ಘೋಷಿಸಿದರು.

ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮುಂತಾದವರು ಉಪಸ್ಥಿತರಿದ್ದರು.

----------------------------

ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿಂದಿಲ್ಲ, ವಿಧಾನಸೌಧಕ್ಕೆ ಹೋದರೆ ಸಾಕು: ಕುಮಾರಸ್ವಾಮಿ ವ್ಯಂಗ್ಯ

ಮೊದಲು ಡಕಾಯಿತರನ್ನು ನೋಡಲು ಚಂಬಲ್ ಕಣಿವೆಗೆ ಹೋಗಬೇಕಿತ್ತು. ಈಗ ವಿಧಾನಸೌಧಕ್ಕೆ ಹೋದರೆ ಸಾಕು. ಅಷ್ಟರಮಟ್ಟಿಗೆ ಜನರ ದುಡ್ಡು ಲೂಟಿಯಾಗುತ್ತಿದೆ. ನಮ್ಮ ರಾಜ್ಯ ಸಂಪದ್ಭರಿತವಾಗಿದೆ. ಆದರೆ, ಇವರು (ಬಿಜೆಪಿಯವರು) ರಾಜ್ಯವನ್ನು ದಿವಾಳಿ ಅಂಚಿಗೆ ತಂದು ನಿಲ್ಲಿಸಿದ್ದಾರೆ. ಜನರ ತೆರಿಗೆ ಹಣವನ್ನು ಕೊಳ್ಳೆ ಹೊಡೆಯುತ್ತಿದ್ದಾರೆ.

-ಎಚ್.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X