Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತದ...

ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತದ ಮೂಲಕ ಸಾಗುತ್ತಿವೆ: ಎಸ್.ಜೈಶಂಕರ್

ವಾರ್ತಾಭಾರತಿವಾರ್ತಾಭಾರತಿ19 Aug 2022 9:43 PM IST
share
ಭಾರತ-ಚೀನಾ ಸಂಬಂಧಗಳು ಅತ್ಯಂತ ಕಠಿಣ ಹಂತದ ಮೂಲಕ ಸಾಗುತ್ತಿವೆ: ಎಸ್.ಜೈಶಂಕರ್

ಹೊಸದಿಲ್ಲಿ,ಆ.19: ಲಡಾಖ್ ನ ವಾಸ್ತವಿಕ ನಿಯಂತ್ರಣ ರೇಖೆಯಲ್ಲಿ ಯಥಾಸ್ಥಿತಿಯನ್ನು ಬದಲಿಸಲು ಚೀನಾದ ಏಕಪಕ್ಷೀಯ ಪ್ರಯತ್ನಗಳ ನಂತರ ಆ ದೇಶದೊಂದಿಗಿನ ಭಾರತದ ಸಂಬಂಧವು ಅತ್ಯಂತ ಕಠಿಣ ಹಂತದ ಮೂಲಕ ಸಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಹೇಳಿದ್ದಾರೆ.

ಗುರುವಾರ ಥೈಲಂಡ್ ರಾಜಧಾನಿ ಬ್ಯಾಂಕಾಂಕ್ನ ಚುಲಾಲಂಗಕರ್ನ್ ವಿವಿಯಲ್ಲಿ ‘ಇಂಡಿಯಾಸ್ ವಿಷನ್ ಆಫ್ ಇಂಡೋ-ಪೆಸಿಫಿಕ್ ’ ಉಪನ್ಯಾಸದ ವೇಳೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದ ಜೈಶಂಕರ, ಚೀನಾ ಮತ್ತು ಭಾರತ ಒಟ್ಟಿಗೆ ಸೇರಿದಾಗ ಮಾತ್ರ ವಿಶ್ವವು ಏಶ್ಯನ್ ಶತಮಾನವನ್ನು ನೋಡಲಿದೆ ಎಂದರು. ಏಶ್ಯನ್ ಶತಮಾನವು 21ನೇ ಶತಮಾನದಲ್ಲಿ ಏಶ್ಯಾ ನಿರ್ವಹಿಸಲಿದೆ ಎಂದು ನಿರೀಕ್ಷಿಸಲಾಗಿರುವ ಪ್ರಮುಖ ಪಾತ್ರವನ್ನು ಸೂಚಿಸುತ್ತದೆ.

ಭಾರತ ಮತ್ತು ಚೀನಾ ಒಟ್ಟಿಗೆ ಸೇರಬೇಕಿದ್ದರೆ ಅದಕ್ಕಾಗಿ ಹಲವಾರು ಕಾರಣಗಳಿವೆ, ಶ್ರೀಲಂಕಾ ಒಂದೇ ಕಾರಣವಾಗಿರುವ ಅಗತ್ಯವಿಲ್ಲ ಎಂದು ತಾನು ಭಾವಿಸಿದ್ದೇನೆ ಎಂದು ಜೈಶಂಕರ್ ಹೇಳಿದರು. 1948ರಿಂದಲೂ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಶ್ರೀಲಂಕಾಕ್ಕೆ ಭಾರತ ಮತ್ತು ಚೀನಾ ಇವೆರಡೂ ಹಣಕಾಸು ನೆರವನ್ನು ಒದಗಿಸಿವೆ.

‌ದ್ವೀಪರಾಷ್ಟ್ರಕ್ಕೆ ನೆರವಾಗಲು ಭಾರತವು ತನ್ನ ಅತ್ಯುತ್ತಮ ಪ್ರಯತ್ನಗಳನ್ನು ಮಾಡಿದೆ ಎಂದ ಅವರು,’ಅಂತರರಾಷ್ಟ್ರೀಯ ಹಣಕಾಸು ನಿಧಿ (ಎಎಂಎಫ್)ಯಲ್ಲಿ ಶ್ರೀಲಂಕಾಕ್ಕೆ ನಾವು ನೀಡಬಹುದಾದ ಯಾವುದೇ ನೆರವನ್ನು ನಾವು ಸಹಜವಾಗಿಯೇ ಮಾಡುತ್ತೇವೆ ’ಎಂದು ಹೇಳಿದರು.

ಭಾರತವು ರಶ್ಯಾದಿಂದ ತೈಲವನ್ನು ಖರೀದಿಸುತ್ತಿರುವ ಕುರಿತು ಟೀಕೆಗಳನ್ನು ತಳ್ಳಿಹಾಕಿದ ಅವರು,‘ನಾವು ಹಾಗೆ ಮಾಡುತ್ತಿರುವ ಏಕಮಾತ್ರ ದೇಶವಲ್ಲ,ತೈಲದ ಮೇಲೆ ಯಾವುದೇ ನಿರ್ಬಂಧವನ್ನು ವಿಧಿಸಲಾಗಿಲ್ಲ’ ಎಂದು ಹೇಳಿದರು.

  ಉಕ್ರೇನ್ ಮೇಲೆ ರಶ್ಯದ ಆಕ್ರಮಣ ಕುರಿತು ಅತ್ಯಂತ ಸ್ಪಷ್ಟ ದೃಷ್ಟಿಕೋನವನ್ನು ಹೊಂದಿರುವ ಇತರ ದೇಶಗಳು ಮತ್ತು ಪ್ರದೇಶಗಳಿವೆ,ಆದರೆ ಅವು ತಮ್ಮ ಹಿತಾಸಕ್ತಿಗಳ ಬಗ್ಗೆ ಕಾಳಜಿ ವಹಿಸಿವೆ ಎಂದು ಹೇಳಿದ ಜೈಶಂಕರ್,‘ನಮ್ಮ ಹಿತಾಸಕ್ತಿಗಳ ಬಗ್ಗೆ ಕಾಳಜಿ ವಹಿಸಲು,ವಿಶೇಷವಾಗಿ ನಾವು ಕಡಿಮೆ ಆದಾಯದ ದೇಶವಾಗಿರುವುದರಿಂದ,ನಮಗೂ ಅವಕಾಶ ನೀಡುವುದು ಸಮಂಜಸವಾಗಿದೆ ಎಂದು ನಾನು ಭಾವಿಸಿದ್ದೇನೆ. ಇಂಧನ ಬೆಲೆಗಳಲ್ಲಿ ಏರಿಕೆಯು ನಿಜಕ್ಕೂ ನಮಗೆ ನೋವನ್ನುಂಟು ಮಾಡುತ್ತದೆ ’ಎಂದು ಹೇಳಿದರು.

‌ಭಾರತವು ರಶ್ಯಾದಿಂದ ಕಚ್ಚಾತೈಲವನ್ನು ಖರೀದಿಸುವುದನ್ನು ಬುಧವಾರ ಟೀಕಿಸಿದ್ದ ಉಕ್ರೇನ್,ಭಾರತ ಸರಕಾರದಿಂದ ಹೆಚ್ಚು ಪ್ರಾಯೋಗಿಕ ಬೆಂಬಲವನ್ನು ತಾನು ನಿರೀಕ್ಷಿಸಿದ್ದೇನೆ ಎಂದು ಹೇಳಿತ್ತು. ಈ ಹಿನ್ನೆಲೆಯಲ್ಲಿ ಸಚಿವರ ಈ ಹೇಳಿಕೆ ಹೊರಬಿದ್ದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X