Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಆರೋಪಿತ ಅಧಿಕಾರಿಗಳಿಬ್ಬರನ್ನು...

ಆರೋಪಿತ ಅಧಿಕಾರಿಗಳಿಬ್ಬರನ್ನು ದೋಷಮುಕ್ತಗೊಳಿಸಲು ಲೋಕೋಪಯೋಗಿ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವ

ವಿಕಾಸಸೌಧದ ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಕಳಪೆ ಕಲ್ಲುಗಳ ಬಳಕೆ

ಜಿ.ಮಹಾಂತೇಶ್ಜಿ.ಮಹಾಂತೇಶ್20 Aug 2022 8:25 AM IST
share
ಆರೋಪಿತ ಅಧಿಕಾರಿಗಳಿಬ್ಬರನ್ನು ದೋಷಮುಕ್ತಗೊಳಿಸಲು ಲೋಕೋಪಯೋಗಿ ಇಲಾಖೆಯಿಂದ ಸರಕಾರಕ್ಕೆ ಪ್ರಸ್ತಾವ

ಬೆಂಗಳೂರು: ವಿಕಾಸಸೌಧದ ಕಲ್ಲು ಕಟ್ಟಡ ನಿರ್ಮಾಣ ಕಾಮಗಾರಿ ವೇಳೆಯಲ್ಲಿ ಕಳಪೆ ಕಲ್ಲುಗಳ ಬಳಸಿ ಕಟ್ಟಡದ ಬಾಳಿಕೆ ಮತ್ತು ಭದ್ರತೆಗೆ ಧಕ್ಕೆ, ಗುತ್ತಿಗೆದಾರರಿಗೆ ಅಧಿಕ ಮೊತ್ತ ಪಾವತಿಗೆ ಕಾರಣರಾಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಲೋಕೋಪಯೋಗಿ ಇಲಾಖೆ ಅಧೀಕ್ಷಕ ಇಂಜಿನಿಯರ್‌ಗಳಾದ ಬಿ.ಕೆ.ಪವಿತ್ರಾ ಹಾಗೂ ಎನ್.ಜೆ.ಗೌಡಯ್ಯ ಎಂಬವರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು ಎಂದು ಲೋಕಾಯುಕ್ತರು ಶಿಫಾರಸು ಮಾಡಿದ್ದರೂ ಆರೋಪಿತ ಅಧಿಕಾರಿಗಳಿಬ್ಬರನ್ನು ದೋಷಮುಕ್ತಗೊಳಿಸಲು  ಲೋಕೋಪಯೋಗಿ ಇಲಾಖೆಯು ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಎ ವೃಂದದ ಅಧಿಕಾರಿಗಳ ವಿರುದ್ಧ ಇಲಾಖೆ ವಿಚಾರಣೆ ವಹಿಸುವುದು, ದಂಡನೆ ವಿಧಿಸುವ ಸಂಬಂಧ ಲೋಕಾಯುಕ್ತ, ಉಪ ಲೋಕಾಯುಕ್ತರು ಶಿಫಾರಸುಗಳನ್ನು ತಿರಸ್ಕರಿಸುವ, ಮಾರ್ಪಡಿಸುವ ಪ್ರಸ್ತಾವನೆಗಳ ಕುರಿತು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ 2022ರ ಆಗಸ್ಟ್ 2ರಂದು ನಡೆದ ಸಚಿವ ಸಂಪುಟ ಉಪ ಸಮಿತಿ ಮುಂದೆ ಲೋಕೋಪಯೋಗಿ ಇಲಾಖೆಯು ಈ ಪ್ರಸ್ತಾವ ಸಲ್ಲಿಸಿದೆ. ಪ್ರಸ್ತಾವದ   ಪ್ರತಿ ''the-file.in''ಗೆ ಲಭ್ಯವಾಗಿದೆ.

 ವಿಶೇಷವೆಂದರೆ ವಿಕಾಸಸೌಧ ನಿರ್ಮಾಣ ಸಂದರ್ಭದಲ್ಲಿ ಕಳಪೆ ಕಲ್ಲುಗಳಿಂದಾಗಿ ಬಿರುಕು, ತೇವಾಂಶ ಕಾಣಿಸಿಕೊಂಡು ಕಟ್ಟಡದ ಬಾಳಿಕೆ ಮತ್ತು ಭದ್ರತೆಗೂ ಧಕ್ಕೆಯಾಗಲಿದೆ ಎಂದು ವಿಚಾರಣಾ ಅಧಿಕಾರಿಗಳ ಮುಂದೆ ಶಿಸ್ತು ಪ್ರಾಧಿಕಾರವೂ ಆಗಿದ್ದ  ಲೋಕೋಪಯೋಗಿ ಇಲಾಖೆ ಕಳವಳ ವ್ಯಕ್ತಪಡಿಸಿತ್ತು. ಆದರೀಗ ಆರೋಪಿತ ಅಧಿಕಾರಿಗಳು ನೀಡಿದ್ದ ಸಮಜಾಯಿಷಿಯನ್ನು ಒಪ್ಪಿಕೊಂಡಿರುವ ಲೋಕೋಪಯೋಗಿ ಇಲಾಖೆಯು ಅವರನ್ನು ದೋಷಮುಕ್ತಗೊಳಿಸಲು ಪ್ರಸ್ತಾವ ಸಲ್ಲಿಸಿರುವ ಹಿಂದೆ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.

 ವಿಕಾಸಸೌಧ ಕಟ್ಟಡಕ್ಕೆ ಕಳಪೆ ಕಲ್ಲುಗಳನ್ನು ಬಳಸಿರುವ ಕುರಿತು 11 ವರ್ಷ ಸುದೀರ್ಘ ವಿಚಾರಣೆ ನಡೆಸಿದ್ದ  ಹಿಂದಿನ ಲೋಕಾಯುಕ್ತರಾದ ಸಂತೋಷ್ ಹೆಗ್ಡೆ ಮತ್ತು ವಿಶ್ವನಾಥ ಶೆಟ್ಟಿ ಅವರು ವರದಿ ಸಲ್ಲಿಸಿದ್ದರು.  ಕಳಪೆ ಕಲ್ಲುಗಳ ಬಳಕೆಗೆ ಅರ್ಧ ಡಝನ್ ಇಂಜಿನಿಯರ್‌ಗಳು ಹೊಣೆಗಾರರು ಎಂದು ವರದಿಯಲ್ಲಿ ವಿವರಿಸಲಾಗಿತ್ತು.

 ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ (2004) ವಿಕಾಸಸೌಧ ನಿರ್ಮಾಣವಾಗಿದ್ದು, ಟೆಂಡರ್‌ನಲ್ಲಿ ನಿರ್ದಿಷ್ಟಪಡಿಸಿದ ಗುಣಮಟ್ಟದ ಕಲ್ಲುಗಳನ್ನು ಬಳಸದೆ, ಉಬ್ಬು ತಗ್ಗುಗಳಿರುವ ಕಲ್ಲುಗಳನ್ನು ಉಪಯೋಗಿಸಲಾಗಿದೆ. ಇದರಿಂದ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟವಾಗಿದೆ ಎಂದು ಸರಕಾರಕ್ಕೆ ಕಳುಹಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

 ಕೇವಲ 15 ವರ್ಷಗಳಲ್ಲಿ ವಿಕಾಸಸೌಧದ ಗೋಡೆಗಳಲ್ಲಿ ಬಿರುಕುಗಳು ಮತ್ತು ತೇವಾಂಶ ಕಾಣಿಸಿಕೊಂಡಿದೆ. ಈ ದೋಷಪೂರಿತ ಕಾಮಗಾರಿಯಲ್ಲಿ ಆಗಿನ 14 ಇಂಜಿನಿಯರ್‌ಗಳು ಭಾಗಿಯಾಗಿದ್ದು, ಅವರಿಗೆ ನಿರ್ದಿಷ್ಟ ಅವಧಿಯವರೆಗೆ ಬಡ್ತಿ ಮತ್ತು ವೇತನ ಬಡ್ತಿಯನ್ನು ತಡೆಹಿಡಿಯುವಂತೆ ಶಿಫಾರಸು ಮಾಡಲಾಗಿದೆ. ಸೇವೆಯಿಂದ ನಿವೃತ್ತಿ ಹೊಂದಿರುವ ಕೆಲವು ಇಂಜಿನಿಯರ್‌ಗಳ ಪಿಂಚಣಿ ಹಣದಲ್ಲಿ ಭಾಗಶಃ ಕಡಿತ ಮಾಡಬೇಕು ಎಂದು ಶಿಫಾರಸು ಮಾಡಿತ್ತು.

‘ಟೆಂಡರ್‌ನಲ್ಲಿ ನಿರ್ದಿಷ್ಟಪಡಿಸಿದ್ದ ಪ್ರಕಾರ ಕಟ್ಟಡಕ್ಕೆ ಏಕರೂಪ, ಗಾತ್ರ ಮತ್ತು ಮೇಲ್ಮೈ ಹೊಂದಿದ್ದ (ಆಶ್ಲರ್) ಕಲ್ಲುಗಳನ್ನು ಬಳಸಬೇಕಿತ್ತು. ಆದರೆ, ಕಳಪೆ ಕಲ್ಲುಗಳನ್ನು ಉಪಯೋಗಿಸಲಾಗಿದೆ. ಕಲ್ಲುಗಳ ಆರು ಮುಖಗಳನ್ನು ಕೆತ್ತಿ ಸಮತಟ್ಟು ಮಾಡದೆ, ಒಂದು ಬದಿಯನ್ನು (ಕಟ್ಟಡದ ಮುಂಭಾಗ) ಮಾತ್ರ ಸಮ ಮಾಡಲಾಗಿದೆ’. ಎಂದು ಲೋಕಾಯುಕ್ತರು ವರದಿಯಲ್ಲಿ ಪ್ರಸ್ತಾಪಿಸಿದ್ದರು.

‘ಕಾರ್ಯಪಾಲಕ ಇಂಜಿನಿಯರ್ ಎನ್.ಜಿ.ಗೌಡಯ್ಯ, ಬಿ.ಕೆ.ಪವಿತ್ರಾ ಅವರ ವಿರುದ್ಧದ ಆರೋಪಗಳು ಸಾಬೀತಾಗಿದೆ. ಎನ್.ಗೌಡಯ್ಯ ಅವರಿಗೆ ಒಂದು ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆಯೊಂದಿಗೆ ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳ ನಿಯಮ 214(1)(ಎ) ಅಡಿ ಪಿಂಚಣಿಯ ಶೇ.25ರಷ್ಟನ್ನು 4 ವರ್ಷಗಳ ಕಾಲ ತಡೆಹಿಡಿಯಬೇಕು. ಬಿ.ಕೆ.ಪವಿತ್ರಾ ಅವರಿಗೆ 5 ವಾರ್ಷಿಕ ವೇತನ ಬಡ್ತಿಯನ್ನು ಸಂಚಿತ ಪರಿಣಾಮ ಸಹಿತವಾಗಿ ತಡೆಹಿಡಿಯುವ ದಂಡನೆಯನ್ನು ವಿಧಿಸಬೇಕು’ ಎಂದು ಲೋಕಾಯುಕ್ತರು ವರದಿಯಲ್ಲಿ ಶಿಫಾರಸುಮಮಾಡಿದ್ದರು.

ಆಪಾದಿತ ಅಧಿಕಾರಿಗಳಾದ ಎನ್.ಜಿ.ಗೌಡಯ್ಯ ಮತ್ತು ಬಿ.ಕೆ.ಪವಿತ್ರಾ ಎಂಬವರು ಲೋಕಾಯುಕ್ತರ ದೋಷಾರೋಪಣೆ ಪಟ್ಟಿ, ವಿಚಾರಣೆ ವರದಿ ಹಾಗೂ ವರದಿಯಲ್ಲಿನ ಶಿಫಾರಸುಗಳನ್ನು  ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಿ ರಿಟ್ ಅರ್ಜಿ (9756/2019) (9809/2019)  ದಾಖಲಿಸಿದ್ದರು. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ಉಚ್ಛ ನ್ಯಾಯಾಲಯವು 2019ರ ಮೇ 3ರಂದು ನೀಡಿದ್ದ ಮಧ್ಯಂತರ ತೀರ್ಪಿನ್ವಯ  2020ರ ಆಗಸ್ಟ್ 4ರಂದು ಆಕ್ಷೇಪಣೆ ಸಲ್ಲಿಕೆಯಾಗಿತ್ತು.  ಆ ನಂತರ  ಲೋಕಾಯುಕ್ತರ ಶಿಫಾರಸಿನಂತೆ ಎನ್.ಜಿ.ಗೌಡಯ್ಯ ಮತ್ತು ಬಿ.ಕೆ.ಪವಿತ್ರಾ ಎಂಬವರಿಗೆ 2020ರ ಡಿಸೆಂಬರ್ 12ರಂದು ದಂಡನಾದೇಶವನ್ನು ಹೊರಡಿಸಿತ್ತು.

ಆರೋಪಿತ ಅಧಿಕಾರಿಗಳು ಉಚ್ಛ ನ್ಯಾಯಾಲಯದ ಮಧ್ಯಂತರ ಆದೇಶ ಜಾರಿಯಲ್ಲಿದ್ದಾಗ ದಂಡನಾದೇಶ ಹೊರಡಿಸಿರುವುದನ್ನು ಪ್ರಶ್ನಿಸಿದ್ದರು. ಹೀಗಾಗಿ 2020ರ ಡಿಸೆಂಬರ್ 15ರಂದು ಹೊರಡಿಸಿದ್ದ ದಂಡನಾದೇಶವನ್ನು 2021ರ ಫೆ.25ರಂದು ಹಿಂಪಡೆದಿತ್ತು.  ಈ ಎಲ್ಲ ಬೆಳವಣಿಗೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ನ್ಯಾಯಾಲಯವು ನಿರ್ದೇಶನ ನೀಡಿತ್ತು.

ಇದೆಲ್ಲವನ್ನೂ ಪರಿಶೀಲಿಸಿರುವ ಲೋಕೋಪಯೋಗಿ ಇಲಾಖೆಯು ಇದೀಗ ‘ಎಲ್ಲ ಅಧಿಕಾರಿಗಳ ವಿರುದ್ಧ ಹೊರಿಸಲಾದ ಆರೋಪಗಳಲ್ಲಿ ನಿರ್ದಿಷ್ಟವಾಗಿ ಸರಕಾರಕ್ಕೆ ಕೋಟ್ಯಂತರ ರೂ. ನಷ್ಟ ಉಂಟಾಗಿದೆಯೆಂದು ಆರೋಪಿಸಲಾಗಿತ್ತು. ಆದರೆ ವಿಚಾರಣೆ ವರದಿಯಲ್ಲಿ ಪ್ರಕರಣದಲ್ಲಿ ಆಪಾದಿತ ಅಧಿಕಾರಿಗಳು ಕೈಗೊಂಡ ಕ್ರಮದಿಂದ ನಿಖರವಾಗಿ ಎಷ್ಟು ಅಧಿಕ ಮೊತ್ತವನ್ನು ಗುತ್ತಿಗೆದಾರರಿಗೆ ಪಾವತಿ ಮಾಡಿದ್ದಾರೆಂಬುದಾಗಲಿ ಅಥವಾ ನಿಖರವಾಗಿ ಇಂತಿಷ್ಟು ಮೊತ್ತವು ಸರಕಾರಕ್ಕೆ ನಷ್ಟವುಂಟಾಗಿದೆ ಎಂದು ತೀರ್ಮಾನಕ್ಕೆ ಬರುವುಲ್ಲಿ ಅಥವಾ ನಿರ್ಧರಿಸುವಲ್ಲಿ ವಿಚಾರಣಾಧಿಕಾರಿಗಳು ವಿಫಲರಾಗಿರುತ್ತಾರೆ’ ಎಂದು ಪ್ರಸ್ತಾವದಲ್ಲಿ ವಿವರಿಸಿದೆ.

 ಅದೇ ರೀತಿ ‘ಒಟ್ಟಾರೆಯಾಗಿ ಪ್ರಕರಣದಲ್ಲಿನ ಸಂದರ್ಭ/ಸನ್ನಿವೇಶಗಳನ್ನು ಗಮನಿಸಿದಾಗ ವಿಚಾರಣಾ ವರದಿಯಲ್ಲಿ ಆರೋಪಗಳ ರುಜುವಾತನ್ನು ಸ್ಪಷ್ಟವಾಗಿ ನಿರೂಪಿಸಲು ಸಾಧ್ಯವಾಗಿಲ್ಲವೆಂಬುದು ಗಮನಾರ್ಹ ಅಂಶವಾಗಿದೆ. ವಿಚಾರಣಾ ವರದಿಯಲ್ಲಿ ಸಂಶಯದ ಬೊಟ್ಟು ಮಾಡಿ ತೋರಿಸಿರುವುದಾಗಿಯೇ ವಿನಃ ನಿರ್ದಿಷ್ಟ ಸಾಕ್ಷ್ಯಾಧಾರಗಳಿಂದ ಕೂಡಿದ ಸ್ಪಷ್ಟ ತೀರ್ಮಾನಗಳಾಗಿಲ್ಲ’ ಎಂದು ಹೇಳಿದೆ.

 ಹೀಗಾಗಿ ಎನ್.ಜಿ.ಗೌಡಯ್ಯ, ಬಿ.ಕೆ.ಪವಿತ್ರಾ ಇವರ ವಿರುದ್ಧದ ಸಾಕ್ಷ್ಯವು ಅವರುಗಳ ವಿರುದ್ಧ ಹೊರಿಸಿದ ಆರೋಪಗಳಿಗೆ ತಪ್ಪಿತಸ್ಥರನ್ನಾಗಿ ಮಾಡುವಷ್ಟು ಸಮರ್ಥವಾಗಿಲ್ಲವೆಂಬುದು ಕಂಡುಬಂದಿದೆ. ಲೋಕಾಯುಕ್ತರು ಮಾಡಿರುವ ಶಿಫಾರಸನ್ನು ಕೈಬಿಟ್ಟು ಅವರು ನೀಡಿರುವ ಎರಡನೇ ಕಾರಣ ಕೇಳವ ನೋಟೀಸ್‌ಗೆ ನೀಡಿರುವ ಸಮಜಾಯಿಷಿಯನ್ನು ಒಪ್ಪಿಕೊಂಡು ದೋಷಮುಕ್ತಗೊಳಿಸುವ ಬಗ್ಗೆ ಅಥವಾ ಲೋಕಾಯುಕ್ತರ ಶಿಫಾರಸನ್ನು ಒಪ್ಪುವ ಬಗ್ಗೆ ನಿರ್ಣಯ ಕೈಗೊಳ್ಳಬಹುದು ಎಂದೂ ಇಲಾಖೆಯು ಸಂಪುಟ ಉಪ ಸಮಿತಿಗೆ ಸಲ್ಲಿಸಿರುವ ಪ್ರಸ್ತಾವದಲ್ಲಿ ಉಲ್ಲೇಖಿಸಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X