ತುಮಕೂರು | ಭೀಕರ ರಸ್ತೆ ಅಪಘಾತ: ಇಬ್ಬರು ಮಕ್ಕಳ ಸಹಿತ ಮೂವರು ಮೃತ್ಯು

ತುಮಕೂರು, ಆ.20: ಕಾರು ಮತ್ತು ಲಾರಿ ನಡುವೆ ಢಿಕ್ಕಿ(Accident) ಸಂಭವಿಸಿ ಇಬ್ಬರು ಮಕ್ಕಳ ಸಹಿತ ಮೂವರು ಮೃತಪಟ್ಟ ಘಟನೆ ಶಿರಾ(Sira) ತಾಲೂಕಿನ ತರೂರು ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಶಿರಾ ತಾಲೂಕಿನ ಕಡವಿಗೆರೆ ನಿವಾಸಿಗಳಾದ ಅವಿನಾಶ್ (28) ಮತ್ತು ಅವರ ಮಗಳು ಪ್ರಣಂತಿ (5), ಅವಿನಾಶ್ ಸಂಬಂಧಿಕರ ಮಗಳು ಸೌಖ್ಯ ( 4) ಮೃತಪಟ್ಟವರೆಂದು ತಿಳಿದುಬಂದಿದೆ. ಇವರು ಶಿರಾದಿಂದ ನೆಲಹಾಳ್‌ಗೆ ತೆರಳುತ್ತಿದ್ದ ವೇಳೆ ತರೂರು ಗೇಟ್ ಬಳಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮಂಗಳೂರು: ಸಮುದ್ರದಲ್ಲಿ ಸ್ನಾನಕ್ಕೆ ಇಳಿದಿದ್ದ ಯುವಕ ನೀರುಪಾಲು
ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಅವಿನಾಶ್ ಮತ್ತು ಪ್ರಣಂತಿ ಸ್ಥಳದಲ್ಲೇ ಕೊನೆಯುಸಿರೆಳದರೆ, ಸೌಖ್ಯ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Next Story







