ದೇವರಾಜ ಅರಸು ಜನ್ಮದಿನ: ಸಿಎಂ ಬೊಮ್ಮಾಯಿ ಪುಷ್ಪ ನಮನ

ಬೆಂಗಳೂರು, ಆ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ಬಳಿ ಆಯೋಜಿಸಿದ್ದ ಅರಸು ಅವರ ಜೀವನ - ಸಾಧನೆ ಕುರಿತು ಛಾಯಾಚಿತ್ರ ಪ್ರದರ್ಶನ ಉದ್ಘಾಟಿಸಿ ವೀಕ್ಷಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉನ್ನತ ಶಿಕ್ಷಣ, ಐಟಿ ಬಿಟಿ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಾಸಕರಾದ ಹರತಾಳು ಹಾಲಪ್ಪ, ಕುಮಾರ್ ಬಂಗಾರಪ್ಪ, ಪ್ರತಾಪ ಸಿಂಹ ನಾಯಕ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ: ಹೈಕೋರ್ಟ್ ಅಸಮಾಧಾನ






.jpeg)
.jpeg)
.jpeg)
.jpeg)

