Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಗ್ರಾಮವಾಸ್ತವ್ಯದಿಂದ ಒಂದೇ ಸೂರಿನಡಿ...

ಗ್ರಾಮವಾಸ್ತವ್ಯದಿಂದ ಒಂದೇ ಸೂರಿನಡಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ: ಉಡುಪಿ ಡಿಸಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ20 Aug 2022 8:24 PM IST
share
ಗ್ರಾಮವಾಸ್ತವ್ಯದಿಂದ ಒಂದೇ ಸೂರಿನಡಿ ಗ್ರಾಮಸ್ಥರ ಸಮಸ್ಯೆಗೆ ಪರಿಹಾರ: ಉಡುಪಿ ಡಿಸಿ ಕೂರ್ಮಾರಾವ್

ಉಡುಪಿ : ಗ್ರಾಮೀಣ ಭಾಗದ ಜನರ ಆಶೋತ್ತರಗಳನ್ನು ಅವರ ಬಳಿಯೇ ಬಂದು ಕೇಳಿ, ಬಗೆಹರಿಸಬೇಕೆಂಬ ಆಶಯದೊಂದಿಗೆ ಸರಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮದಡಿ ಹಿರ್ಗಾನ ಗ್ರಾಮಕ್ಕೆ ಬಂದು ಇಲ್ಲಿಯ ಜನರ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ. 

ಶನಿವಾರ ಕಾರ್ಕಳ ತಾಲೂಕು ಅಜೆಕಾರು ಹೋಬಳಿಯ ಹಿರ್ಗಾನ ಗ್ರಾಮದ ವ್ಯವಸಾಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಂದಾಯ ಸಚಿವರ ಆಶಯದಂತೆ ಜನರು ತಮ್ಮ ಕೆಲಸ ಕಾರ್ಯಗಳಿಗೆ ಕಚೇರಿಯನ್ನು ಹುಡುಕಿ ಹೋಗದೇ ತಮ್ಮ ಮನೆಯ ಬಾಗಿಲ ಬಳಿಯೇ ಕೆಲಸ ಕಾರ್ಯಗಳನ್ನು ಮುಗಿಸಿಕೊಳ್ಳಬೇಕೆಂಬ ಧ್ಯೇಯದೊಂದಿಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಇದರ ಪ್ರಯೋಜನ ವನ್ನು ಪ್ರತಿಯೊಬ್ಬರೂ ಪಡೆಯಬೇಕು ಎಂದರು.

ಕಂದಾಯ ಇಲಾಖೆಯ ದಾಖಲೆಗಳನ್ನು ಸರಿಪಡಿಸುವುದು, ರಸ್ತೆಗೆ ಸಂಬಂಧಿಸಿದ ದೂರುಗಳು ಸೇರಿದಂತೆ ಅರಣ್ಯ ಇಲಾಖೆಗೆ ಮರಗಳನ್ನು ತೆರವು ಗೊಳಿಸುವುದು ಮತ್ತಿತರ ಅರ್ಜಿಗಳು ಬಂದಿದ್ದು, ಅವುಗಳನ್ನು ನಿಯಮಾನುಸಾರ ವಿಲೇವಾರಿ ಮಾಡಲಾಗುವುದು ಎಂದ ಅವರು, ಸಾಮಾಜಿಕ ಭದ್ರತೆ ಕೋರಿ ಬಂದ ಅರ್ಜಿಗಳನ್ನು ಅರ್ಹರಿಗೆ ಸ್ಥಳದಲ್ಲಿ ಮಂಜೂರಾತಿ ಆದೇಶ ನೀಡಲಾಗುವುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರ್ಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಸಂತೋಷ್ ಶೆಟ್ಟಿ ಮಾತನಾಡಿ, ಈ ಹಿಂದೆ ಸಾರ್ವಜನಿಕರು ಇಲಾಖೆಗೆ ಸಂಬಂಧಪಟ್ಟ ಕೆಲಸಗಳಿಗೆ ಅಲೆಯುವ ಪರಿಸ್ಥಿತಿ ಇದ್ದು, ಇತ್ತೀಚೆಗೆ ಆ ಕ್ರಮ ಬದಲಾಗಿ ಆಡಳಿತ ವರ್ಗಗಳೇ ನೇರವಾಗಿ ಜನರನ್ನು ತಲುಪಿ, ಸಮಸ್ಯೆಗಳನ್ನು ಆಲಿಸಿ, ಸೂಕ್ತ ಪರಿಹಾರ ನೀಡಿ, ಬಗೆಹರಿಸುತ್ತಿರುವುದು ಸರಕಾರದ ಉತ್ತಮ  ಕೆಲಸವಾಗಿದೆ. ಪ್ರಸ್ತುತ ಗ್ರಾಮದಲ್ಲಿ ಉತ್ತಮ ಅಧಿಕಾರಿ ವರ್ಗವಿದ್ದು, ಗ್ರಾಮಸ್ಥರು ಹಾಗೂ ಅಧಿಕಾರಿಗಳ ಸಹಕಾರದಿಂದ ಉನ್ನತ ಮಟ್ಟದಲ್ಲಿ ಅಭಿವೃದ್ಧಿ ಕೆಲಸ ಪ್ರಗತಿಯತ್ತ ಸಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪಿಂಚಣಿ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ, ವಿಧವಾ ವೇತನ ಹಾಗೂ ಇತರೆ ಫಲಾನುಭವಿಗಳಿಗೆ ಸರಕಾರದಿಂದ ನೀಡಬೇಕಾದಯೋಜನೆಗಳನ್ನು ಜಿಲ್ಲಾಧಿಕಾರಿಗಳ ಮೂಲಕ ತಲುಪಿಸಲಾ ಯಿತು. ಹಿರ್ಗಾನ ಗ್ರಾಪಂ ವ್ಯಾಪ್ತಿಗೆ ಬರುವ ಜನರು ತಮ್ಮ ವಿವಿಧ ಸಮಸ್ಯೆಗಳ ೨೦ ಅರ್ಜಿಗಳನ್ನು ಸಲ್ಲಿಸಿದ್ದರು.
ಕಾರ್ಯಕ್ರಮದಲ್ಲಿ ಆರೋಗ್ಯ ಇಲಾಖೆಯ ವತಿಯಿಂದ ಮಳೆಗಾಲದಲ್ಲಿ ಹರಡುವ ಕಾಯಿಲೆಗಳ ಬಗ್ಗೆ ಅರಿವು ಕಾರ್ಯಕ್ರಮದ ಮೂಲಕ ಮಾಹಿತಿ ನೀಡಲಾಯಿತು. 

ಕುಂದಾಪುರದ ಸಹಾಯಕ ಕಮಿಷನರ್ ರಾಜು ಕೆ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಕೆಂಪೇಗೌಡ, ಆಹಾರ ಇಲಾಖೆಯ ಉಪ ನಿರ್ದೇಶಕ ಇಸಾಕ್ ಮೊಹಮ್ಮದ್, ಭೂದಾಖಲೆಗಳ ಉಪನಿರ್ದೇಶಕ ರವೀಂದ್ರ, ತಾಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗುರುದತ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು. 

ಕಾರ್ಕಳ ತಾಲೂಕು ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಸ್ವಾಗತಿಸಿದರು. ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಸಂಜೀವ ಪೂಜಾರಿ ಕಾರ್ಯಕ್ರಮ ನಿರೂಪಿಸಿ, ಸಂಧ್ಯಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X