ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ನೇಮಕಕ್ಕೆ ಮತ್ತೆ ತಡೆ

ಮಂಗಳೂರು, ಆ.20: ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿ ನೇಮಕಕ್ಕೆ ರಾಜ್ಯ ವಕ್ಫ್ ಮಂಡಳಿಯು ಮತ್ತೆ ತಡೆ ನೀಡಿದೆ.
ಈ ವರ್ಷದ ಎಪ್ರಿಲ್ 6ರಂದು ರಚಿಸಲಾದ ಸಲಹಾ ಸಮಿತಿಯನ್ನು ರಾಜ್ಯ ಹಜ್ ಮತ್ತು ವಕ್ಫ್ ಸಚಿವರ ಆಗಸ್ಟ್ 8ರ ಉಲ್ಲೇಖಿತ ಟಿಪ್ಪಣಿಯಲ್ಲಿ ಸದ್ರಿ ಸಲಹಾ ಸಮಿತಿಯ ವಿರುದ್ಧ ಸಾರ್ವಜನಿಕ ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ಈ ಸಮಿತಿಗೆ ತಕ್ಷಣದಿಂದ ಜಾರಿಗೆ ಬರುವಂತೆ ತಡೆ ನೀಡಲಾಗಿದೆ ಎಂದು ವಕ್ಫ್ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆ.19ರಂದು ಹೊರಡಿಸಿದ ಆದೇಶದಲ್ಲಿ ತಿಳಿಸಿದ್ದಾರೆ.
ಈ ಆದೇಶವನ್ನು ದ.ಕ.ಜಿಲ್ಲಾ ವಕ್ಫ್ ಅಧಿಕಾರಿ ಖಚಿತಪಡಿಸಿದ್ದು, ಸಲಹಾ ಸಮಿತಿಯ ಅಧ್ಯಕ್ಷರ ಮಾಹಿತಿಗಾಗಿ ಆದೇಶದ ಪ್ರತಿಯನ್ನು ಕಳಿಸಲಾಗಿದೆ ಎಂದು ತಿಳಿಸಿದ್ದಾರೆ.
Next Story