Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಮನಪಾ ಸುರತ್ಕಲ್ ವಲಯ ಕಚೇರಿಯ...

ಮಂಗಳೂರು ಮನಪಾ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ20 Aug 2022 8:47 PM IST
share
ಮಂಗಳೂರು ಮನಪಾ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡ ಉದ್ಘಾಟನೆ

ಸುರತ್ಕಲ್ : ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಲಯ ಕಚೇರಿಯ ನೂತನ ಕಟ್ಟಡ ಶನಿವಾರ ಉದ್ಘಾಟನೆಗೊಂಡಿತು.

ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್, ಸುರತ್ಕಲ್‌ನಲ್ಲಿ ಹೈಟೆಕ್ ಆಗಿರುವ ವಿಭಾಗೀಯ ಕಚೇರಿ ಪ್ರಾರಂಭಗೊಂಡಿದೆ. ಇದಕ್ಕಾಗಿ ಪಾಲಿಕೆ ಮೇಯರ್ ಸಹಿತ ಇಡೀ ತಂಡಕ್ಕೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಮುಂದಿನ ದಿನಗಳಲ್ಲಿ ಜನರು ಸಕಾಲದಲ್ಲಿ ಸರಕಾರಿ ಸೇವೆಗಳನ್ನು ಬಳಸಿಕೊಳ್ಳಲು ಇದು ನೆರವಾಗಲಿದೆ ಎಂದರು.

ಮಂಗಳೂರು ಉತ್ತರ ಶಾಸಕ ವೈ ಭರತ್ ಶೆಟ್ಟಿ ಮಾತನಾಡಿ, ಸುರತ್ಕಲ್ ವಲಯ ಕಚೇರಿಯಲ್ಲಿ ಡಿಜಿಟಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಜನರು ತಮ್ಮ ಕೆಲಸ ಕಾರ್ಯಗಳಿಗಾಗಿ ಯಾರಿಗೂ ಕಾಯದೆ ಟೋಕನ್ ಪಡೆದು ಸುಗಮವಾಗಿ ಸೇವೆ ಪಡೆದುಕೊಳ್ಳಬಹುದು ಎಂದರು.

ಮೇಯರ್ ಪ್ರೇಮಾನಂದ ಶೆಟ್ಟಿ ಮಾತನಾಡಿ, ಈ ಭಾಗದ ಜನರ ಬಹುಕಾಲದ ಬೇಡಿಕೆ ಈಡೇರಿದೆ ಎಂದರು.
ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಸುಧೀರ್ ಶೆಟ್ಟಿ ಕಣ್ಣೂರು, ಕಾರ್ಪೊರೇಟರ್ ಗಳಾದ ನಯನ ಕೋಟ್ಯಾನ್, ಶ್ವೇತ ಪೂಜಾರಿ, ಭರತ್ ರಾಜ್, ಶಂಶಾದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.

ಶಾಸಕರ ಕಚೇರಿಯಲ್ಲಿ ಸಾವರ್ಕರ್ ಭಾವಚಿತ್ರಕ್ಕೆ ವಿರೋಧ

ನೂತನ ಮನಪಾ ಸುರತ್ಕಲ್ ವಲಯ ಕಚೇರಿಯಲ್ಲಿರುವ ಶಾಸಕ ಭರತ್ ಶೆಟ್ಟಿಯವರ ಕಚೇರಿಯಲ್ಲಿ ಸಾವರ್ಕರ್‌ರ ಭಾವಚಿತ್ರ ಅಳವಡಿಸಿರುವುದಕ್ಕೆ  ಸುರತ್ಕಲ್ 5ನೇ ವಾರ್ಡ್‌ನ ಎಸ್‌ಡಿಪಿಐ ಕಾರ್ಪೊರೇಟರ್ ಶಂಷಾದ್ ಅಬೂಬಕರ್ ವಿರೋಧ ವ್ಯಕ್ತಪಡಿಸಿದರು.

ಕಚೇರಿ ಉದ್ಘಾಟನೆಯ ಬಳಿಕ ಸಚಿವ ಸುನೀಲ್ ಕುಮಾರ್, ಶಾಸಕ ಭರತ್ ಶೆಟ್ಟಿಯವರು ಸಾವರ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ಸಾವರ್ಕರ್  ಪರ ಘೋಷಣೆಗಳನ್ನು ಕೂಗಿದರು.

ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಂಷಾದ್ ಅಬೂಬಕರ್ ವಿರೋಧ ವ್ಯಕ್ತಪಡಿಸಿದರು. ಸರಕಾರಿ ಕಚೇರಿಯಲ್ಲಿ ಸಾವರ್ಕರ್‌ರ ಭಾವಚಿತ್ರ ಹಾಕಲು ಅನುಮತಿ ನೀಡಿದವರು ಯಾರು ಎಂದು ಪ್ರಶ್ನಿಸಿ ವಿರೋಧ ವ್ಯಕ್ತಪಡಿಸಿದರು.

ಸಾವರ್ಕರ್ ಭಾವಚಿತ್ರ ಹಾಕಲು ಯಾರ ಅನುಮತಿಯೂ ಬೇಕಿಲ್ಲ: ಶಾಸಕ ಭರತ್ ಶೆಟ್ಟಿ 

ಕಾರ್ಯಕ್ರಮದ ಬಳಿಕ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಶಾಸಕ ವೈ.ಭರತ್ ಶೆಟ್ಟಿ, ಸಂಸತ್‌ನಲ್ಲೇ ಸಾವರ್ಕರ್‌ರ ಭಾವಚಿತ್ರವಿದೆ. ಆದ್ದರಿಂದ ಶಾಸಕರ ಕಚೇರಿಯಲ್ಲಿ ಭಾವಚಿತ್ರ ಅಳವಡಿಕೆಗೆ ಯಾರ ಅನುಮತಿಯೂ ಬೇಕಿಲ್ಲ. ಅಷ್ಟಕ್ಕೂ ನಾವು ದೇಶದ್ರೋಹಿಯ ಫೋಟೊ ಅಳವಡಿಸಿಲ್ಲ ಎಂದು ಹೇಳಿದರು.

ಮಾಜಿ ಶಾಸಕ, ಕಾಂಗ್ರೆಸ್ ಮುಖಂಡರಿಗಿಲ್ಲ ಆಹ್ವಾನ

ಮಂಗಳೂರು ಮನಪಾ ಸುರತ್ಕಲ್ ವಲಯ ಕಚೇರಿ ಉದ್ಘಾಟನೆಗೆ ಮಾಜಿ ಶಾಸಕರ ಸಹಿತ, ಯಾವುದೇ ಪಕ್ಷಗಳ ಅಧಿಕೃತರಿಗೆ ಆಹ್ವಾನ ನೀಡಿಲ್ಲ ಎಂಬ ಆರೋಪಗಳು ಕೇಳಿ ಬಂದಿದೆ.

ವಲಯ ಕಚೇರಿ ನಿರ್ಮಾಣಕ್ಕೆ ಸುಮಾರು 4.2 ಕೋ.ರೂ. ವೆಚ್ಚ ತಗುಲಿದ್ದು, ಅಂದಿನ ಸಿದ್ದರಾಮಯ್ಯರ ಸರಕಾರ ವಿಶೇಷ ಅನುದಾನದಡಿ 2.25 ಕೋ. ರೂ. ಅನುದಾನ ಒದಗಿಸಿಕೊಟ್ಟಿದೆ. ಆದರೆ ಉದ್ಘಾಟನಾ ಸಮಾರಂಭಕ್ಕೆ ಮಾಜಿ ಶಾಸಕ ಸಹಿತ ಕಾಂಗ್ರೆಸ್ ನಾಯಕರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X