ಟಾಪ್ ಸ್ಕೂಲ್ ವಿದ್ಯಾರ್ಥಿವೇತನ: ಅರ್ಜಿ ಆಹ್ವಾನ

ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಟಾಪ್ ಸ್ಕೂಲ್ ವಿದ್ಯಾರ್ಥಿವೇತನ ಸೌಲಭ್ಯಕ್ಕಾಗಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಮೂಲಕ ಸೆಪ್ಟಂಬರ್ 11ರಂದು ಪರೀಕ್ಷೆ ನಡೆಯಲಿದ್ದು, ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 26 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ -https://yet.nta.ac.in-ಅನ್ನು ಸಂಪರ್ಕಿ ಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story