ಸಿದ್ದರಾಮಯ್ಯ ನಡೆಗೆ ಕಾಂಗ್ರೆಸ್ ಪಕ್ಷದಲ್ಲೇ ವಿರೋಧ: ನಳಿನ್ ಕುಮಾರ್ ಕಟೀಲ್

ಬೆಂಗಳೂರು, ಆ. 20: ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹಿಂದೂಧರ್ಮದ ವಿರುದ್ಧ ಅವಹೇಳನ ಮಾಡಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಅವರನ್ನು ಅಪಮಾನಿಸಿದ್ದಾರೆ. ಇವೆರಡನ್ನು ಕಾಂಗ್ರೆಸ್‍ನಲ್ಲೇ ವಿರೋಧಿಸುತ್ತಿರುವುದು ಸ್ಪಷ್ಟವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಎಂದು ತಿಳಿಸಿದ್ದಾರೆ.
ಶನಿವಾರ ಇಲ್ಲಿನ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯನ್ನು ಗಮನಿಸಿ ಆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ತೊರೆಯುತ್ತಿದ್ದಾರೆ. ಅದರ ಪರಿಣಾಮವಾಗಿ ಮೊಟ್ಟೆ ಎಸೆದುದಾಗಿ ಕಾಂಗ್ರೆಸ್ ಕಾರ್ಯಕರ್ತ ಉಲ್ಲೇಖ ಮಾಡಿದ್ದಾನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಇದೀಗ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಮಡಿಕೇರಿಗೆ ಪಾದಯಾತ್ರೆ ಮಾಡಲಿದ್ದಾರಾ? ಕಾಂಗ್ರೆಸ್ ಜೋಡೋ ಮಾಡ್ತಾರಾ? ತೋಡೋ ಮಾಡ್ತಾರಾ? ಹಿಂದಿನಿಂದ ಡಿ.ಕೆ.ಶಿವಕುಮಾರ್ ಅವರು ಮೊಟ್ಟೆ ಎಸೆಯುವಂತೆ ಮಾಡಿದ್ದಾರಾ ಎಂಬುದೂ ತನಿಖೆಗೆ ಒಳಪಡಬೇಕಿದೆ ಎಂದು ಕಟೀಲ್ ನುಡಿದರು.
Next Story





