ಮಂಗಳೂರು: ಇಲೆಕ್ಟ್ರಿಕ್ ಸ್ಕೂಟರ್‌ಗಳಿಗೆ ಬೆಂಕಿ

ಮಂಗಳೂರು : ನಗರದ ಬೋಳೂರಿನ ಅಯ್ಯಪ್ಪ ದೇವಸ್ಥಾನದ ಬಳಿಯಿರುವ ಅಂಗಡಿಯಲ್ಲಿ ಚಾರ್ಜ್‌ಗಿಟ್ಟ ಇಲೆಕ್ಟ್ರಿಕ್ ಸ್ಕೂಟರುಗಳು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ನಡೆದಿದೆ. ಪಕ್ಕದ ಹಾಲಿನ ಬೂತಿಗೂ ಭಾಗಶಃ ಹಾನಿಯಾಗಿದೆ ಎಂದು ತಿಳಿದು ಬಂದಿದೆ.
ಈ ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಅಲ್ಲದೆ ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ.
ಹಾಲಿನ ವ್ಯಾಪಾರಿ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್ ಬಳಿ ಶನಿವಾರ ಬೆಳಗ್ಗೆ 10.30ಕ್ಕೆ ಚಾರ್ಜ್‌ಗೆ ಇಡಲಾಗಿತ್ತು ಎನ್ನಲಾಗಿದೆ. ಮಧ್ಯಾಹ್ನದ ವೇಳೆ ಸ್ಕೂಟರ್‌ಗೆ ಬೆಂಕಿ ಹತ್ತಿಕೊಂಡಿದೆ. ಇದರಿಂದ ಸುಮಾರು 4 ಲ.ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ, ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದರು. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಥಳಕ್ಕೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಭೇಟಿ ನೀಡಿ ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
Next Story





