Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೋದಿ ಸರಕಾರದಿಂದ ಸಿಬಿಐ ದುರ್ಬಳಕೆ: ಆಪ್...

ಮೋದಿ ಸರಕಾರದಿಂದ ಸಿಬಿಐ ದುರ್ಬಳಕೆ: ಆಪ್ ಖಂಡನೆ

ವಾರ್ತಾಭಾರತಿವಾರ್ತಾಭಾರತಿ20 Aug 2022 11:42 PM IST
share
ಮೋದಿ ಸರಕಾರದಿಂದ ಸಿಬಿಐ ದುರ್ಬಳಕೆ: ಆಪ್ ಖಂಡನೆ

ಬೆಂಗಳೂರು, ಆ.20: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಆಮ್ ಆದ್ಮಿ ಪಾರ್ಟಿ ನಾಯಕರಿಗೆ ಕಿರುಕುಳ ನೀಡುತ್ತಿರುವುದಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಖಂಡನೆ ವ್ಯಕ್ತಪಡಿಸಿದರು.

ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ದೆಹಲಿಯಲ್ಲಿ ತಂದಿರುವ ಕ್ರಾಂತಿಕಾರಿ ಬದಲಾವಣೆಗಳು ಜನರಿಗೆ ತಿಳಿದಿದೆ. ಅವರು ಪ್ರಾಮಾಣಿಕವಾಗಿ ಜನರ ಸೇವೆಯಲ್ಲಿ ನಿರತರಾಗಿದ್ದಾರೆ. ಆದರೆ ಬಿಜೆಪಿ ರಾಜಕೀಯ ಲಾಭಕ್ಕಾಗಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ದಾಳಿ ನಡೆಸಿದೆ’ ಎಂದು ಆರೋಪಿಸಿದರು

‘ಕರ್ನಾಟಕ ಹಾಗೂ ಆಂಧ್ರಪ್ರದೇಶದ ಗಡಿಯನ್ನು ಬಿಜೆಪಿ ಸಚಿವರು ಅಕ್ರಮ ಗಣಿಗಾರಿಕೆಗಾಗಿಯೇ ಮೀಸಲಿಟ್ಟಿದ್ದಾರೆ. ಬಿಜೆಪಿಯು 25 ವರ್ಷಗಳಿಂದ ಆಳುತ್ತಿರುವ ಗುಜರಾತ್‍ನಲ್ಲಿ ಮೂರು ಬೃಹತ್ ಡ್ರಗ್ಸ್ ಜಾಲ ಪತ್ತೆಯಾಗಿದೆ. ಅಲ್ಲಿ ಮದ್ಯಪಾನವನ್ನು ನಿಷೇಧಿಸಿ, ಕಳ್ಳಭಟ್ಟಿಗೆ ಅವಕಾಶ ನೀಡಿ ಜನರು ಸಾಯುವಂತೆ ಬಿಜೆಪಿ ಸರಕಾರ ಮಾಡುತ್ತಿದೆ. ಜನರು ಇದನ್ನೆಲ್ಲ ಗಮನಿಸುವುದಿಲ್ಲ ಎಂಬ ಭ್ರಮೆಯಲ್ಲಿರುವ ಬಿಜೆಪಿಯು ಆಮ್ ಆದ್ಮಿ ಪಾರ್ಟಿಯ ಮೇಲೆ ಕೆಸರು ಎರಚುತ್ತಿದೆ’ ಎಂದು ಅವರು ಕಿಡಿಕಾರಿದರು.

‘ಮನೀಷ್ ಸಿಸೋಡಿಯಾರವರು ದೇಶದಲ್ಲೇ ಅತ್ಯುತ್ತಮ ಶಿಕ್ಷಣ ಸಚಿವರಾಗಿದ್ದಾರೆ. ದೆಹಲಿಯ ಸರಕಾರಿ ಶಾಲೆಗಳನ್ನು ಅವರು ಬದಲಿಸಿದ ರೀತಿ ಇಡೀ ದೇಶಕ್ಕೆ ತಿಳಿದಿದೆ. ಶಿಕ್ಷಣ ವ್ಯವಸ್ಥೆಯ ಬಗ್ಗೆ ತೀವ್ರ ನಿರ್ಲಕ್ಷ್ಯ ಹೊಂದಿರುವ ಬಿಜೆಪಿಗೆ ಇದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಬಿಜೆಪಿ ಆಡಳಿತವಿರುವ ಕರ್ನಾಟಕದಲ್ಲಿ ಮೂರನೇ ಒಂದರಷ್ಟು ಮಕ್ಕಳು ಮಾತ್ರ 12ನೇ ತರಗತಿವರೆಗಿನ ಶಿಕ್ಷಣ ಪಡೆಯುತ್ತಿದ್ದಾರೆ. ಇಂತಹ ದೊಡ್ಡ ವೈಫಲ್ಯಗಳನ್ನು ಮುಚ್ಚಿ ಹಾಕಲು ಬಿಜೆಪಿಯು ಮನೀಷ್ ಸಿಸೋಡಿಯಾರವರ ಜನಪ್ರಿಯತೆ ತಗ್ಗಿಸಲು ಯತ್ನಿಸುತ್ತಿದೆ’ ಎಂದು ಟೀಕಿದರು.

‘ಬಿಜೆಪಿಗೆ ಮುಂಬರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳಲ್ಲಿ ಎಎಪಿ ವಿರುದ್ಧ ಸೋಲುವ ಭಯ ಕಾಡುತ್ತಿದೆ. ಆದ್ದರಿಂದಲೇ ಆಮ್ ಆದ್ಮಿ ಪಾರ್ಟಿಗೆ ಕಿರುಕುಳ ನೀಡಲು ಆರಂಭಿಸಿದೆ. ಆಮ್ ಆದ್ಮಿ ಪಾರ್ಟಿಯು ಇದಕ್ಕೆಲ್ಲ ಹೆದರದೇ ಸೂಕ್ತ ರೀತಿಯಲ್ಲಿ ಚುನಾವಣೆಯನ್ನು ಎದುರಿಸಿ ಜಯ ಗಳಿಸಲಿದೆ. ಬಿಜೆಪಿಯ ದುರಾಡಳಿತದ ಬಂಧನದಿಂದ ಜನರನ್ನು ಮುಕ್ತಗೊಳಿಸುವ ಕೆಲಸವನ್ನು ಆಮ್ ಆದ್ಮಿ ಪಾರ್ಟಿ ಮಾಡಲಿದೆ’ ಎಂದು ಭರವಸೆ ನೀಡಿದರು.

ಎಲ್ಲೆಲ್ಲಿ ಬಿಜೆಪಿಯ ಆಡಳಿತವಿದೆಯೋ ಅಲ್ಲೆಲ್ಲ ದೊಡ್ಡ ಹಗರಣಗಳು ನಡೆಯುತ್ತಿವೆ. ಕರ್ನಾಟಕವೂ ಸೇರಿ ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಚಿವರ ಸಾಧನೆ ಕಳಪೆಯಾಗಿದೆ. ಎಎಪಿ ಆಡಳಿತವಿರುವ ದೆಹಲಿ ಹಾಗೂ ಪಂಜಾಬ್‍ನಲ್ಲಿ ಸಚಿವರು ಅದ್ಭುತವಾಗಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯು ತನ್ನ ಸಚಿವರು ಉತ್ತಮ ಕೆಲಸ ಮಾಡುವಂತೆ ತಿಳಿಸುವ ಬದಲು, ಎಎಪಿ ಸಚಿವರು ಕೆಲಸ ಮಾಡುವುದನ್ನು ತಡೆಯುವುದರಲ್ಲಿ ನಿರತವಾಗಿದೆ. ಬಿಜೆಪಿಯ ಈ ಕುತಂತ್ರಕ್ಕೆ ಜನರು ಮುಂದಿನ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಬೇಕಿದೆ.

-ಪೃಥ್ವಿ ರೆಡ್ಡಿ, ಆಮ್ ಆದ್ಮಿ ಪಾರ್ಟಿಯ ರಾಜ್ಯಾಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X