ಅಂಗನವಾಡಿ ನೌಕರರ ಉಡುಪಿ ಜಿಲ್ಲಾ ಸಮ್ಮೇಳನ

ಉಡುಪಿ, ಆ.21: ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ(ಸಿಐ ಟಿಯು) ಉಡುಪಿ ಜಿಲ್ಲಾ ಸಮಿತಿ ಇದರ 3ನೇ ಉಡುಪಿ ಜಿಲ್ಲಾ ಸಮ್ಮೇಳನ ಇಂದು ಉಡುಪಿಯ ಹೋಟೆಲ್ ಸಾಯಿ ರೆಸಿಡೆನ್ಸಿಯಲ್ಲಿ ನಡೆಯಿತು.
ಸಮ್ಮೇಳನವನ್ನು ಅಂಗನವಾಡಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷೆ ಯಮುನಾ ಗಾಂವ್ಕಂರ್ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಕಾರ್ಯಕರ್ತರು ಮತ್ತು ಸಹಾಯಕಿ ಯರು ಹಾಗೂ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಗರಿಷ್ಠ ಅಂಕ ಪಡೆದ ನೌಕರರ ಮಕ್ಕಳನ್ನು ಗೌರವಿಸಲಾಯಿತು.
ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ.ಶಂಕರ್, ಜಿಲ್ಲಾ ಖಜಾಂಚಿ ಯಾದ ಶಶಿಧರ್ ಗೊಲ್ಲ, ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಕವಿರಾಜ್ ಎಸ್. ಹಾಗೂ ಉಡುಪಿ ಜಿಲ್ಲಾ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ಭಾರತಿ ಎಸ್., ಜಿಲ್ಲಾ ಕಾರ್ಯದರ್ಶಿ ಸುಶೀಲಾ ನಾಡ, ಖಜಾಂಚಿ ಯಶೋಧ, ಮುಖಂಡರಾದ ಪುಷ್ಷ, ಗೀತಾ ಪಂಗಾಳ, ಅಂಬಿಕಾ, ಲಲಿತ, ಜಯಲಕ್ಷ್ಮಿ, ಆಶಾ ಲತಾ, ಶಾಂತ ಮೊದಲಾದವರು ಉಪಸ್ಥಿತರಿದ್ದರು.
Next Story





