ತೀಸ್ತಾ ಸೆಟಲ್ವಾಡ್ ಜಾಮೀನು ಅರ್ಜಿಯ ಕುರಿತು ಗುಜರಾತ್ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಹೊಸದಿಲ್ಲಿ: ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್(Teestha Setalvad) ಅವರ ಜಾಮೀನು ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್(Supreme Court) ಗುಜರಾತ್ ರಾಜ್ಯ ಸರ್ಕಾರದಿಂದ ಪ್ರತಿಕ್ರಿಯೆ ಕೇಳಿದೆ ಎಂದು BarandBench ವರದಿ ಮಾಡಿದೆ.
ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ಗುರುವಾರ ಆಗಸ್ಟ್ 25 ರಂದು ವಿಚಾರಣೆಗೆ ಮುಂದೂಡಿದೆ.
ತೀಸ್ತಾ ಸೆಟಲ್ವಾಡ್ ರನ್ನು 2002ರ ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಪಿತೂರಿ ಮತ್ತು ಸಾಕ್ಷ್ಯಾಧಾರಗಳನ್ನು ಸೃಷ್ಟಿಸಿದ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಅಹಮದಾಬಾದ್‌ನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ಹೆಚ್ಚುವರಿ ಪ್ರಧಾನ ಸೆಷನ್ಸ್ ನ್ಯಾಯಾಧೀಶರು ನೀಡಿದ ಜುಲೈ 30 ರ ಅಂತಿಮ ತೀರ್ಪು ಮತ್ತು ಆದೇಶದ ವಿರುದ್ಧ ತನ್ನ ಮೇಲ್ಮನವಿ ಸಲ್ಲಿಸಲಾಗುತ್ತಿದೆ ಎಂದು ಸೆಟಲ್ವಾಡ್ ಹೇಳಿದರು.
ಅಹಮದಾಬಾದ್ ಸೆಷನ್ಸ್ ನ್ಯಾಯಾಲಯವು ಜುಲೈ 30 ರಂದು ತೀಸ್ತಾ ಮತ್ತು ನಿವೃತ್ತ ಗುಜರಾತ್ ಡಿಜಿಪಿ ಆರ್ ಬಿ ಶ್ರೀಕುಮಾರ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅವರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡುವುದರಿಂದ “ಅಂದಿನ ಮುಖ್ಯಮಂತ್ರಿ ಮತ್ತು ಇತರರ ವಿರುದ್ಧ ಇಂತಹ ರೀತಿಯ ಆರೋಪಗಳನ್ನು ಮಾಡಬಹುದು ಎಂದು ತಪ್ಪಿತಸ್ಥರಿಗೆ ಉತ್ತೇಜನ ನೀಡಿದಂತಾಗುತ್ತದೆ" ಎಂದಿತ್ತು.
ಇದರ ಬಳಿಕ, ತೀಸ್ತಾ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಜಾಮೀನು ಅರ್ಜಿಗೆ ರಾಜ್ಯವು ಪ್ರತಿಕ್ರಿಯಿಸುವ ನಿರೀಕ್ಷೆಯಿರುವುದರಿಂದ ಸೆಪ್ಟೆಂಬರ್ 19ಕ್ಕೆ ವಿಚಾರಣೆ ಮುಂದೂಡಿತು.
2002 ರ ಗುಜರಾತ್ ಗಲಭೆಯಲ್ಲಿ ಅಂದಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರಿಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೀಡಿದ ಕ್ಲೀನ್ ಚಿಟ್ ಅನ್ನು ಸುಪ್ರೀಂ ಕೋರ್ಟ್ ತನ್ನ ತೀರ್ಪಿನಲ್ಲಿ ಎತ್ತಿಹಿಡಿದ ಒಂದು ದಿನದ ಬಳಿಕ, ಜೂನ್ 25 ರಂದು ಶ್ರೀಕುಮಾರ್ ಜೊತೆಗೆ ತೀಸ್ತಾ ಸೆಟಲ್ವಾಡ್ ಅವರನ್ನು ಬಂಧಿಸಲಾಯಿತು. ಝಕಿಯಾ ಜಾಫ್ರಿ, ಹತ್ಯೆಯಾದ ಕಾಂಗ್ರೆಸ್ ಸಂಸದ ಇಹ್ಸಾನ್ ಜಾಫ್ರಿ ಅವರ ಪತ್ನಿ. ಜಾಫ್ರಿ ಅವರ 2006 ರ ದೂರಿನಲ್ಲಿ ಸೆಟಲ್ವಾಡ್, ಶ್ರೀಕುಮಾರ್ ಮತ್ತು ಮೂರನೇ ಸಹ ಆರೋಪಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರನ್ನು ಸಾಕ್ಷಿಗಳಾಗಿ ತೋರಿಸಲಾಗಿದೆ.







