ಮೂಡುಬೆಳ್ಳೆ ಸಂತ ಲಾರೆನ್ಸ್ ಪ.ಪೂ.ಕಾಲೇಜಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಉಡುಪಿ, ಆ.22: ಕೊಂಕಣಿ ಮಾನ್ಯತಾ ದಿವಸದ ಮಾಣಿಕ್ಯೋತ್ಸವವನ್ನು ಮೂಡುಬೆಳ್ಳೆಯ ಸಂತ ಲಾರೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಸಡಗರದಿಂದ ಆಚರಿಸಲಾಯಿತು.
ಪ್ರೌಢಶಾಲೆಯ ಮುಖ್ಯಸ್ಥೆ ಸುನೀತಾ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಮುಕುಂದ ಕಾಮತ್, ಕೊಂಕಣಿ ಭಾಷಾ ಸಂಪನ್ಮೂಲ ವ್ಯಕ್ತಿ ಅಲ್ಫೋನ್ಸ್ ಡಿ’ಕೋಸ್ಟಾ ಉಪಸ್ಥಿತರಿದ್ದರು.
ಕಾರ್ಯಕ್ರಮದ ಸಂಯೋಜಕ ರೋಬರ್ಟ್ ಮಿನೇಜಸ್ ಅತಿಥಿಗಳನ್ನು ಸ್ವಾಗತಿಸಿದರು. ಕಾಲೇಜಿನ ಉಪಪ್ರಾಂಶುಪಾಲರಾದ ಜಸಿಂತಾ ಲೋಬೊ ವಂದಿಸಿದರು. ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಪವಿತ್ರಾ ಆಚಾರ್ಯ ನಿರೂಪಿಸಿದರು.
Next Story





