Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸ್ವಾತಂತ್ರ್ಯ ಅಮೃತ ಮಹೋತ್ಸವ:...

ಸ್ವಾತಂತ್ರ್ಯ ಅಮೃತ ಮಹೋತ್ಸವ: ಪುತ್ತೂರಿನಿಂದ ವಿಟ್ಲಕ್ಕೆ ಕಾಂಗ್ರೆಸ್ ಪಾದಯಾತ್ರೆ

ಗಾಂಧೀಜಿಗೆ ಗುಂಡಿಟ್ಟವರ ಬೆಂಬಲಿಗರಿಂದ ದೇಶಪ್ರೇಮ ಕಲಿಯಬೇಕಿಲ್ಲ: ಸೊರಕೆ

ವಾರ್ತಾಭಾರತಿವಾರ್ತಾಭಾರತಿ22 Aug 2022 7:46 PM IST
share
ಸ್ವಾತಂತ್ರ್ಯ ಅಮೃತ ಮಹೋತ್ಸವ: ಪುತ್ತೂರಿನಿಂದ ವಿಟ್ಲಕ್ಕೆ ಕಾಂಗ್ರೆಸ್ ಪಾದಯಾತ್ರೆ

ಪುತ್ತೂರು: ಬ್ರಿಟಿಷ್ ಸರಕಾರಕ್ಕೆ ಕ್ಷಮಾಪಣೆ ಪತ್ರ ಬರೆದುಕೊಟ್ಟು ಜೈಲಿನಿಂದ ಹೊರಬಂದವರು, ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರನ್ನು ಕೊಂದವರ ಪೀಳಿಗೆಯವರು ಇವತ್ತು ನಮಗೆ ದೇಶಪ್ರೇಮದ ಪಾಠ ಮಾಡುತ್ತಿದ್ದಾರೆ. ನಕಲಿಗಳ ದೇಶಪ್ರೇಮದ ಮುಖವಾಡ ನಾವಿಂದು ಕಾಣುತ್ತಿದ್ದೇವೆ. ದೇಶದ ನೈಜ ಇತಿಹಾಸವನ್ನು ತಿರುಚುವ ಪ್ರಯತ್ನಗಳಾಗುತ್ತಿದೆ. ಆದರೆ ನೈಜ ಇತಿಹಾಸವನ್ನು ಎಂದಿಗೂ ತಿರುಚಿ ನಂಬಿಸಲು ಸಾಧ್ಯವಿಲ್ಲ. ಬ್ರಿಟೀಷರಿಗೆ ಕ್ಷಮಾಪನೆ ಪತ್ರ ಬರೆದವರು, ರಾಷ್ಟ್ರಪಿತ ಗಾಂಧೀಜಿಯವರಿಗೆ ಗುಂಡಿಟ್ಟವರ ಬೆಂಬಲಿಗರಿಂದ ನಾವು ದೇಶಪ್ರೇಮವನ್ನು ಕಲಿಯಬೇಕಿಲ್ಲ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು. 

ಅವರು ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಪುತ್ತೂರು ಹಾಗೂ ವಿಟ್ಲ -ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಹಮ್ಮಿಕೊಂಡ ಪುತ್ತೂರಿನಿಂದ ವಿಟ್ಲದ ತನಕ ನಡೆದ `ಸ್ವಾತಂತ್ರ್ಯದ ನಡಿಗೆ' ಪಾದಯಾತ್ರೆ ಕಾರ್ಯಕ್ರಮದಲ್ಲಿ ದರ್ಬೆಯಲ್ಲಿ ನಡೆದ  ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.  

ಪಾದಯಾತ್ರೆ ಉದ್ಘಾಟಿಸಿದ ನಿವೃತ್ತ ಪ್ರಾಂಶುಪಾಲ ಪ್ರೊ. ಕ್ಸೇವಿಯರ್ ಡಿಸೋಜ ಮಾತನಾಡಿ ಸುಮಾರು 200 ವರ್ಷಗಳ ಹೋರಾಟದ ಬಳಿಕ ಭಾರತ ಸ್ವಾತಂತ್ರ್ಯಗೊಂಡಿದೆ. 1885 ರಲ್ಲಿ ರಾಷ್ಟ್ರೀಯ ಕಾಂಗ್ರೆಸ್ ಸ್ಥಾಪನೆಯಾದ ಬಳಿಕ ಸ್ವಾತಂತ್ರ್ಯ ಹೋರಾಟಕ್ಕೆ ನಾಯಕತ್ವ ಲಭಿಸಿತು. ಮಹಾತ್ಮ ಗಾಂಧೀಜಿಯವರು ಹೋರಾಟಕ್ಕೆ ಧುಮಿಕಿದ ಬಳಿಕ ಸ್ವಾತಂತ್ರ್ಯದ ಹೋರಾಟ ಸಾಮಾನ್ಯರ ಚಳುವಳಿಯಾಗಿ ಬೆಳೆಯಿತು. ಇದು ರಾಜಕೀಯ ಪಾದಯಾತ್ರೆಯಲ್ಲ. ದೇಶದ 75 ವರ್ಷಗಳ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುವ ಕಾರ್ಯಕ್ರಮವಾಗಿದೆ. ಇಲ್ಲಿ ಯಾವುದೇ ರಾಜಕೀಯ ಘೋಷಣೆಗಳು, ಧಿಕ್ಕಾರಗಳೂ ಇರುವುದಿಲ್ಲ. ಕೇವಲ ಭಾರತ ಮಾತೆಗೆ ಜೈಕಾರ ಇರಲಿದೆ. ಇತಿಹಾಸ ಒಂದು ಧರ್ಮ, ಬಣ್ಣಕ್ಕೆ ಸೀಮಿತವಲ್ಲ. ಹೋರಾಟವನ್ನು ನಮ್ಮ ಎಲ್ಲಾ ಹಿರಿಯರ ಶ್ರಮವನ್ನು ಅರಿತು ಗೌರವಿಸಬೇಕು ಎಂದರು.

ಮಾಜಿ ಶಾಸಕ ಜೆ.ಆರ್. ಲೋಬೋ, ಪಕ್ಷದ ಮುಖಂಡರಾದ ಕಾವು ಹೇಮನಾಥ ಶೆಟ್ಟಿ, ಕೃಪಾ ಅಮರ ಆಳ್ವಾ, ಎಂ.ಬಿ. ವಿಶ್ವನಾಥ ರೈ, ಎಚ್. ಮಹಮ್ಮದ್ ಆಲಿ, ಡಾ. ರಾಜಾರಾಂ, ಶ್ರೀಪ್ರಸಾದ್ ಪಾಣಾಜೆ, ದಿವ್ಯಪ್ರಭಾ ಚಿಲ್ತಡ್ಕ, ಅನಿತಾ ಹೇಮನಾಥ ಶೆಟ್ಟಿ, ಪ್ರವೀಣ್ ಚಂದ್ರ ಆಳ್ವಾ, ಎಂ.ಎಸ್. ಮಹಮ್ಮದ್, ಕೃಪಾ ಆಳ್ವ, ಡಾ. ರಘು, ಧನಂಜಯ ಅಡ್ಪಂಗಾಯ, ಶ್ರೀಪ್ರಸಾದ್ ಪಾಣಾಜೆ, ಹೆಚ್. ಮಹಮ್ಮದ್ ಆಲಿ, ಡಾ. ರಾಜಾರಾಮ್, ಮಲ್ಲಿಕಾ ಪಕ್ಕಳ ಸೇರಿದಂತೆ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. 

ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎನ್. ಸುಧಾಕರ ಶೆಟ್ಟಿ ತೆಂಗಿನ ಕಾಯಿ ಒಡೆದು ಹಾಗೂ ಹಿರಿಯ ಕಾಂಗ್ರೆಸ್ಸಿಗ ಮೊಯ್ದು ಕುಟ್ಟಿ ಹಾಜಿ ಪರ್ಲಡ್ಕ ತ್ರಿವರ್ಣ ಧ್ವಜವನ್ನು ಸೇವಾದಳದ ಮುಖಂಡರಿಗೆ ಹಸ್ತಾಂತರಿಸುವ ಮೂಲಕ ಸ್ವಾತಂತ್ರ್ಯದ ನಡಿಗೆಗೆ ಚಾಲನೆ ನೀಡಿದರು. ಬಳಿಕ ಜಾಥಾ ಮುಖ್ಯ ರಸ್ತೆಯಲ್ಲಿ ಸಾಗಿತು.

ಪುತ್ತೂರು ಬಸ್ ನಿಲ್ದಾಣದ ಬಳಿಯ ಗಾಂಧಿ ಕಟ್ಟೆಯಲ್ಲಿ ಗಾಂಧೀಜಿ ಪ್ರತಿಮೆಗೆ ಹಾರಾರ್ಪಣೆ ಮಾಡಲಾಯಿತು. ಬಳಿಕ ನೆಹರೂ ನಗರದಲ್ಲಿ ಮುಂದುವರಿದು ಕಬಕ ಮೂಲಕ ವಿಟ್ಲಕ್ಕೆ ಸಾಗಿತು.

ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ. ವಿಶ್ವನಾಥ ಸ್ವಾಗತಿಸಿದರು. ನಿರಂಜನ ರೈ ಮಠಂತಬೆಟ್ಟು ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X