ಬೆಂಗಳೂರು: ಆ.26 ರಂದು ಬೃಹತ್ ಉದ್ಯೋಗ ಮೇಳ
ಸಾಂದರ್ಭಿಕ ಚಿತ್ರ
ಬೆಂಗಳೂರು, ಆ.22: ಕಾಲೇಜು ಶಿಕ್ಷಣ ಇಲಾಖೆ, ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ ಹಾಗೂ ರೋಟರಿ ಬೆಂಗಳೂರು ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಟಿಯಿಂದ ಆ.26ರಂದು ರೇಸ್ಕೋರ್ಸ್ ಬಳಿಯ ಸರಕಾರಿ ರಾಮನಾರಾಯಣ್ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಮಹಾವಿದ್ಯಾಲಯ ಆವರಣದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.
ಈ ಮೇಳದಲ್ಲಿ ಸಾಮಾನ್ಯ ಪದವೀಧರರು, ಇಂಜಿನಿಯರಿಂಗ್ ಪದವೀಧರರು, ಡಿಪ್ಲೊಮಾ, ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಅಥವಾ ಅಂತಿಮ ಸೆಮಿಸ್ಟರ್ನಲ್ಲಿ ಅಭ್ಯಾಸ ಮಾಡುತ್ತಿರುವ ಅಭ್ಯರ್ಥಿಗಳು ಹಾಗೂ ಉದ್ಯೋಗಾಕಾಂಕ್ಷಿಗಳು ತಮ್ಮ ವೈಯುಕ್ತಿಕ ವಿವರಗಳುಳ್ಳ ಪ್ರತಿಗಳೊಂದಿಗೆ ಮೇಳದಲ್ಲಿ ಪಾಲ್ಗೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964366993, 9632502552, 9448061225 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story