ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ
ಮಂಗಳೂರು, ಆ.22: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನವನ್ನು ಸಾಗಾಟ ಮಾಡುತ್ತಿದ್ದ ಜಾಲವನ್ನು ಸೋಮವಾರ ಪತ್ತೆ ಹಚ್ಚಲಾಗಿದೆ.
45,83,160 ರೂ. ಮೌಲ್ಯದ 24 ಕ್ಯಾರೆಟ್ನ 878 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಪತ್ತೆ ಹಚ್ಚಿ ಒಬ್ಬನನ್ನು ಬಂದಿಸಲಾಗಿದೆ.
ಬಂಟ್ವಾಳ ಮೂಲದ ಪ್ರಯಾಣಿಕನೊಬ್ಬ ದುಬೈನಿಂದ ಚಿನ್ನವನ್ನು ಪೌಡರ್ ರೂಪದಲ್ಲಿ ಅಂಡಾಕಾರದ ಪ್ಯಾಕೆಟ್ಗಳಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Next Story