ಲಘು, ಭಾರಿ ವಾಹನ ಚಾಲನಾ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆಯಡಿ ಪರಿಶಿಷ್ಟ ಜಾತಿಯ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿ ಹಾಗೂ ಗಿರಿಜನ ಉಪ ಯೋಜನೆಯಡಿ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಲಘು ಹಾಗೂ ಭಾರಿ ವಾಹನ ಚಾಲನಾ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಅಟಲ್ ಬಿಹಾರಿ ವಾಜಪೇಯಿ ಸಂಕೀರ್ಣ, ಕೇಂದ್ರ ಕಛೇರಿ, ಕೆ.ಹೆಚ್.ರಸ್ತೆ, ಶಾಂತಿನಗರ, ಬೆಂಗಳೂರು ದೂರವಾಣಿ ಸಂಖ್ಯೆ: 080- 22537481ನ್ನು ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





