ಉಡುಪಿ ಜಿಲ್ಲಾ ರಜತ ಮಹೋತ್ಸವಕ್ಕೆ ಮಾಹೆಯಿಂದ 25 ಲಕ್ಷ ರೂ. ದೇಣಿಗೆ

ಉಡುಪಿ : ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭಕ್ಕೆ ಮಣಿಪಾಲ ಮಾಹೆ ವತಿಯಿಂದ 25 ಲಕ್ಷ ರೂ. ದೇಣಿಗೆಯನ್ನು ಮಂಗಳವಾರ ನೀಡಲಾಯಿತು.
ಶಾಸಕ ಕೆ.ರಘುಪತಿ ಭಟ್ ಸಮ್ಮುಖದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅವರಿಗೆ ದೇಣಿಗೆಯ ಚೆಕ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಮಣಿಪಾಲ ವಿಶ್ವವಿದ್ಯಾಲಯದ ಕುಲಾಧಿಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ.ವೆಂಕಟೇಶ್, ಸಹ ಕುಲಾಧಿಪತಿ ಎಚ್.ಎಸ್.ಬಲ್ಲಾಲ್, ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಿತಿಯ ಸಂಘಟನಾ ಕಾರ್ಯದರ್ಶಿಗಳಾದ ಮಹೇಶ್ ಠಾಕೂರ್, ರಾಜ್ಯ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Next Story





