ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ; ದನ ಕಳವು ಆರೋಪಿಯ ಬಂಧನ

ಮಂಗಳೂರು: ಮಂಗಳೂರು ಕಮೀಷನರೇಟ್ ವ್ಯಾಪ್ತಿ ಹಾಗೂ ದ.ಕ. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ದನ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಬಂಧಿಸಲ್ಪಟ್ಟು ನ್ಯಾಯಾಲಯದಿಂದ ಜಾಮೀನು ಪಡೆದು ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಕಸಬಾ ಬೆಂಗರೆಯ ಅಬ್ದುಲ್ ಕಬೀರ್ ಯಾನೆ ಪಾರಿವಾಳ ಕಬೀರ್ (35)ನನ್ನು ಬಂಧಿಸಲಾಗಿದೆ.
ನ್ಯಾಯಾಲಯದಲ್ಲಿ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಈತನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಲು ಮುಂದಾದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ ಈತ ಪರಾರಿಯಾಗಲು ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.
ಬಳಿಕ ಸಿಸಿಬಿ ಪೊಲೀಸರು ಆರೋಪಿ ಕಬೀರ್‌ನನ್ನು ವಶಕ್ಕೆ ಪಡೆದು ಪಣಂಬೂರು ಪೊಲೀಸರಿಗೆ ಹಸ್ತಾಂತರಿಸಿ ದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ.
ಆರೋಪಿಯ ವಿರುದ್ಧ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಕಳೆದ 7 ತಿಂಗಳಿನಿಂದ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.