ಉಡುಪಿ: 1ನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳ ದಾಳಿ
ಸಾಂದರ್ಭಿಕ ಚಿತ್ರ (Source: PTI)
ಉಡುಪಿ, ಆ.24: ನಗರದ ಖಾಸಗಿ ಶಾಲೆಯ ಒಂದನೇ ತರಗತಿ ವಿದ್ಯಾರ್ಥಿನಿ ಮೇಲೆ ಬೀದಿನಾಯಿಗಳ (Stray dogs) ಹಿಂಡೊಂದು ಬುಧವಾರ ದಾಳಿ ನಡೆಸಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಬಾಲಕಿಯನ್ನು ಅಜ್ಜರಕಾಡಿನಲ್ಲಿರುವ ಜಿಲ್ಲಾಸ್ಪತ್ರೆಗೆ ದಾಖಲಿಸಿರುವುದು ವರದಿಯಾಗಿದೆ.
ಇತೀಚಿನ ದಿನಗಳಲ್ಲಿ ನಗರದಲ್ಲಿ ಬೀದಿನಾಯಿಗಳ ಹಾವಳಿ ತೀವ್ರವಾಗಿದ್ದು, ಹಿರಿಯ ನಾಗರಿಕರು, ಚಿಕ್ಕಮಕ್ಕಳು, ಶಾಲಾ ವಿದ್ಯಾರ್ಥಿಗಳು ಭೀತಿಪಡುವಂತಾಗಿದೆ. ಬೀದಿನಾಯಿಗಳು ಸಾರ್ವಜನಿಕರ ಮೇಲೆ ದಾಳಿ ನಡೆಸಿರುವ ಪ್ರಕರಣಗಳು ಬಹಳಷ್ಟು ನಡೆದಿವೆ.
ಆದ್ದರಿಂದ ನಗರಸಭೆ ತಕ್ಷಣ ಕಾರ್ಯಪ್ರವೃತ್ತವಾಗಿ ಬೀದಿ ನಾಯಿಗಳನ್ನು ಸೆರೆ ಹಿಡಿದು, ಶ್ವಾನ ಪುರ್ನವಸತಿ ಕೇಂದ್ರಗಳಲ್ಲಿ ದಾಖಲಿಸಬೇಕು ಎಂದು ನಾಗರಿಕ ಸಮಿತಿಯ ಕಾರ್ಯಕರ್ತ ನಿತ್ಯಾನಂದ ಒಳಕಾಡು, ತಾರಾನಾಥ ಮೇಸ್ತ ಶಿರೂರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ: ಬೋವಿಕ್ಕಾನ | ಕಾಡುಹಂದಿ ದಾಳಿ: ತಂದೆ-ಮಗನಿಗೆ ಗಂಭೀರ ಗಾಯ
Next Story