Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಮಿಷನ್ ಗೆ ಬೇಡಿಕೆ ವಿಚಾರ;...

ಕಮಿಷನ್ ಗೆ ಬೇಡಿಕೆ ವಿಚಾರ; ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ ಇದೆ ಎಂದ ಸಚಿವ ಡಾ.ಕೆ.ಸುಧಾಕರ್‌

ವಾರ್ತಾಭಾರತಿವಾರ್ತಾಭಾರತಿ24 Aug 2022 6:20 PM IST
share
ಕಮಿಷನ್ ಗೆ ಬೇಡಿಕೆ ವಿಚಾರ; ಗುತ್ತಿಗೆದಾರರ ಆರೋಪದ ಹಿಂದೆ ಕಾಂಗ್ರೆಸ್‌ ಇದೆ ಎಂದ ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು, ಆ. 24, :ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಕ್ಷಣದಿಂದ ಏನೇನೋ ಹೇಳಿಕೆ ನೀಡಲು ಆರಂಭಿಸಿದ್ದಾರೆ. ಭ್ರಷ್ಟಾಚಾರ ನಡೆಸಿ ಜನರಿಂದ ಕಿತ್ತೊಗೆಯಲ್ಪಟ್ಟ ಕಾಂಗ್ರೆಸ್‌, ಈ ವಿಚಾರವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಂಪಣ್ಣನವರು ವಯಸ್ಸಲ್ಲಿ ಹಾಗೂ ಅನುಭವದಲ್ಲಿ ಹಿರಿಯರು. ಅವರು ಬಯಸಿದಂತೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಸಭೆ ನಡೆಸಿ ಅವರ ಸಲಹೆ, ದೂರು, ಅಹವಾಲುಗಳನ್ನು ಆಲಿಸಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಅವರು ಕೊಟ್ಟ ಸಲಹೆಗಳನ್ನೂ ಜಾರಿ ಮಾಡಿದ್ದಾರೆ.  ಟೆಂಡರ್‌ಗಳ ಪರಿಶೀಲನೆಗೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಯಾವ ಸರ್ಕಾರವೂ ಇಂತಹ ಉತ್ತಮ ಕ್ರಮವನ್ನು ಜಾರಿ ಮಾಡಿಲ್ಲ. ಹಾಗೆಯೇ ವಿವಿಧ ಇಲಾಖೆಗಳಲ್ಲಿ ಬಾಕಿ ಇದ್ದ ಬಿಲ್‌ಗಳನ್ನು ವಿಲೇವಾರಿ ಮಾಡಲಾಗಿದೆ. ಇದುವರೆಗೆ ಕೆಂಪಣ್ಣ  ದೇವರಂತೆ ಇದ್ದರು. ಆದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ ಬಳಿಕ ಏನಾಯ್ತು ಎಂದು ಗೊತ್ತಿಲ್ಲ. ಅವರಿಬ್ಬರ ನಡುವೆ ಏನು ಚರ್ಚೆಯಾಗಿದೆ ಹಾಗೂ ಚರ್ಚೆ ಬಳಿಕ ಏಕೆ ಹೇಳಿಕೆ ನೀಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದರು.

ಕೆಂಪಣ್ಣ ಅವರಿಗೆ ಇನ್ನೂ ಏನಾದರೂ ಸಹಾಯ ಮಾಡಬೇಕೆಂದರೆ ಸರ್ಕಾರ ಆ ಕೆಲಸ ಮಾಡಲು ಸಿದ್ಧವಿದೆ. ಅವರಿಗೆ ಸಾಮಾಜಿಕ ಕಳಕಳಿ ಇದ್ದರೆ ಲೋಕಾಯುಕ್ತಕ್ಕೆ ದೂರು ನೀಡಬಹುದಿತ್ತು. ಆದರೆ ಇವೆಲ್ಲ ಕಾಂಗ್ರೆಸ್‌ ಸ್ಪಾನ್ಸರ್‌ ಆಗಿದ್ದು, ಇದನ್ನೇ ಚುನಾವಣೆಯ ಅಜೆಂಡಾ ಮಾಡಿಕೊಳ್ಳಲು ಹೊರಟಿದ್ದಾರೆ. ಕಾಂಗ್ರೆಸ್‌ ಭ್ರಷ್ಟಾಚಾರ ಮಾಡಿದ್ದಕ್ಕೆ ಜನರು ಅವರನ್ನು ಇಡೀ ದೇಶದಿಂದ ಕಿತ್ತೊಗೆದಿದ್ದಾರೆ. ಈಗ ಬಿಜೆಪಿಯ ಪ್ರಾಮಾಣಿಕತೆಗೆ ತಿರುಮಂತ್ರ ಹಾಕಲು ಕಾಂಗ್ರೆಸ್‌ ಯತ್ನಿಸುತ್ತಿದೆ. ಇದು ಕೇವಲ ರಾಜಕೀಯ ಪ್ರೇರಿತ ಯತ್ನ. ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್‌ ಈ ವಿಚಾರವನ್ನು ಹೆಚ್ಚು ಸುದ್ದಿ ಮಾಡುತ್ತದೆ. ಈ ಮೂಲಕ ಬಿಜೆಪಿಯ ಬಗ್ಗೆ ಜನರಲ್ಲಿ ನಕಾರಾತ್ಮಕ ಭಾವನೆ ಉಂಟುಮಾಡಿ ಮತ ಕೇಳಲಾಗುತ್ತದೆ ಎಂದರು.

ಕೆಂಪಣ್ಣ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳ ಬಗ್ಗೆ ಹೇಳಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಹೋರಾಟ ಮಾಡುವುದಾದರೆ, ಭ್ರಷ್ಟಾಚಾರಿಗಳಿಗೆ ಶಿಕ್ಷೆಯಾಗಬೇಕೆಂದರೆ ಲೋಕಾಯುಕ್ತಕ್ಕೆ ದೂರು ನೀಡಬಹುದು. ಆದರೆ ಮಾಧ್ಯಮದ ಮುಂದೆ ಬಂದು ಹೇಳಿಕೆ ನೀಡುವುದನ್ನು ನೋಡಿದರೆ ಅವರ ಉದ್ದೇಶ ಏನೆಂಬುದು ಸ್ಪಷ್ಟವಾಗುತ್ತದೆ. ಕಾಂಗ್ರೆಸ್‌ ಪಕ್ಷ ಕೆಂಪಣ್ಣನವರನ್ನು ಬಲಿಪಶು ಮಾಡುವ ಪ್ರಯತ್ನ ಮಾಡುತ್ತಿದೆ. ಅವರ ಹಿರಿತನ, ಅನುಭವವನ್ನು ಕಾಂಗ್ರೆಸ್‌ ಬಳಸಿಕೊಳ್ಳುತ್ತಿದೆ. ಕೆಂಪಣ್ಣನವರು ಇದಕ್ಕೆ ಬಲಿಯಾಗುವುದು ಬೇಡ ಎಂದು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X