Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ತುಂಬೆ ಯುನಿವರ್ಸಿಟಿ ಹಾಸ್ಪಿಟಲ್‌ನಿಂದ...

ತುಂಬೆ ಯುನಿವರ್ಸಿಟಿ ಹಾಸ್ಪಿಟಲ್‌ನಿಂದ ಉತ್ತಮ ದರ್ಜೆಯ ಕಾರ್ಡಿಯೋಲಜಿ ಕೇಂದ್ರ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ24 Aug 2022 6:22 PM IST
share
ತುಂಬೆ ಯುನಿವರ್ಸಿಟಿ ಹಾಸ್ಪಿಟಲ್‌ನಿಂದ ಉತ್ತಮ ದರ್ಜೆಯ ಕಾರ್ಡಿಯೋಲಜಿ ಕೇಂದ್ರ ಉದ್ಘಾಟನೆ

ಅಜ್ಮಾನ್, ಆ. 24: ತುಂಬೆ ಯುನಿವರ್ಸಿಟಿ ಹಾಸ್ಪಿಟಲ್ ವತಿಯಿಂದ ಆರಂಭಿಸಲಾದ ಅತ್ಯಾಧುನಿಕ ಸೌಲಭ್ಯವನ್ನು ಒಳಗೊಂಡಿರುವ ನೂತನ ಕಾರ್ಡಿಯೋಲಜಿ ಕೇಂದ್ರ ಬುಧವಾರ ಉದ್ಘಾಟನೆಗೊಂಡಿತು.

ಹಲವಾರು ನುರಿತ ತಜ್ಞರ ನೇತೃತ್ವದಲ್ಲಿ ಉತ್ತಮ ಮತ್ತು ಅತ್ಯಾಧುನಿಕ ದರ್ಜೆಯ ಹೃದ್ರೋಗ ಚಿಕಿತ್ಸಾ ಸೌಲಭ್ಯವನ್ನು ಒಳಗೊಂಡ ಕಾರ್ಡಿಯೋಲಜಿ ಕೇಂದ್ರವನ್ನು ಮಂಗಳೂರು ಶಾಸಕ, ವಿಧಾನಸಭಾ ವಿಪಕ್ಷ ಉಪನಾಯಕ ಯು.ಟಿ ಖಾದರ್ ಉದ್ಘಾಟಿಸಿದರು.

ಅಜ್ಮಾನ್ ನ ಅಲ್ ಜುರ್ಫ್ ನಲ್ಲಿರುವ ತುಂಬೆ ಮೆಡಿಸಿಟಿ ಆಸ್ಪತ್ರೆಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ತುಂಬೆ ಗ್ರೂಪ್ ನ ಸ್ಥಾಪಕ ಅಧ್ಯಕ್ಷ ಡಾ.ತುಂಬೆ ಮೊಯ್ದಿನ್ ಉಪಸ್ಥಿತರಿದ್ದರು.

ತುಂಬೆ ಗ್ರೂಪ್  ಹೆಲ್ತ್ ಕೇರ್ ವಿಭಾಗದ ಉಪಾಧ್ಯಕ್ಷ ಅಕ್ಬರ್ ಮೊಯ್ದಿನ್ ತುಂಬೆ ಮಾತನಾಡಿ, "ನೂತನ ಎದೆನೋವು ಕೇಂದ್ರವು ಸುಧಾರಿತ ತುರ್ತು ಆರೈಕೆ ಮತ್ತು ಹೃದಯ ಸಂಬಂಧಿತ ರೋಗಗಳಿಗೆ ಅನುಗುಣವಾಗಿ ಸೇವೆಗಳನ್ನು ಒದಗಿಸುತ್ತದೆ. ತುಂಬೆ ಯೂನಿವರ್ಸಿಟಿ ಹಾಸ್ಪಿಟಲ್ ನ ಬಹುದೊಡ್ಡ ಉತ್ಕೃಷ್ಟತೆಯ ಗುರಿಯಲ್ಲಿ ಇದು ಒಂದು ಸಣ್ಣ ಹೆಜ್ಜೆ ಮಾತ್ರ. ಪ್ರತಿಯೊಬ್ಬರಿಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೇವೆಗಳನ್ನು ಒದಗಿಸುವ ಅವಿಶ್ರಾಂತ ಪ್ರಯತ್ನದಲ್ಲಿ, ಪ್ರತಿಯೊಬ್ಬರೂ ಕೈಗೆಟುಕುವ ಬೆಲೆಯಲ್ಲಿ ಚಿಕಿತ್ಸೆ ಒದಗಿಸಲಾಗುವುದು" ಎಂದರು.

ಜೀವಕ್ಕೆ ಅಪಾಯಕಾರಿಯಾಗುವ ರೀತಿಯ ಎದೆನೋವಿವನ್ನು ಎದುರಿಸುವ ವೇಳೆ ಈ ಕೇಂದ್ರ ರೋಗಿಗಳಿಗೆ ನೆರವಾಗಲಿದೆ. ಎದೆನೋವು ಕೇಂದ್ರವು ಆಸ್ಪತ್ರೆಯ ತುರ್ತು ಮತ್ತು ಆಘಾತ ಸೇವೆಗಳ ವಿಭಾಗದಲ್ಲಿದ್ದು, ಇದು ಹೃದಯ ವಿಜ್ಞಾನದ ಕೇಂದ್ರದ ಒಂದು ಭಾಗವಾಗಿದೆ. ತಂತ್ರಜ್ಞಾನ-ಚಾಲಿತ ಆರೋಗ್ಯ ಉದ್ಯಮವನ್ನು ನಿರ್ಮಿಸುವಲ್ಲಿ ದೇಶದ ಪ್ರಯತ್ನಗಳಿಗೆ ತುಂಬೆ ಹೆಲ್ತ್ ಕೇರ್ ವಿಭಾಗದ ಕೊಡುಗೆಗಳನ್ನು ಬಲಪಡಿಸುವ ಗುರಿಯನ್ನು ಈ ಕೇಂದ್ರ ಹೊಂದಿದೆ.

ಸುಧಾರಿತ ಸೌಲಭ್ಯಗಳು, ಪರಿಣಿತ ಹೃದ್ರೋಗ ತಜ್ಞರು ಮತ್ತು ವೃತ್ತಿಪರ ವೈದ್ಯಕೀಯ ಸಿಬ್ಬಂದಿಯನ್ನು ಹೊಂದಿರುವ ಕೇಂದ್ರವು ವಾರದ ಏಳು ದಿನಗಳಲ್ಲಿ ಒಳರೋಗಿಗಳಿಗೆ ಮತ್ತು ಹೊರರೋಗಿಗಳಿಗೆ ಸಮಗ್ರ ತುರ್ತು ಸೇವೆಗಳನ್ನು ನೀಡುತ್ತದೆ. ಹೆಚ್ಚುವರಿಯಾಗಿ, ಅತ್ಯಾಧುನಿಕ ಕ್ಯಾಥರೈಸೇಶನ್ ಪ್ರಯೋಗಾಲಯ, ತೀವ್ರ ನಿಗಾ ಘಟಕ (ICU) ಮತ್ತು ಹೃದಯ ನಿಗಾ ಘಟಕ (CCU)ವೂ ಇದೆ.

ತುಂಬೆ ಯೂನಿವರ್ಸಿಟಿ ಆಸ್ಪತ್ರೆಯ ಹೃದಯ ವಿಜ್ಞಾನದ ಕೇಂದ್ರವು ಅಪಾಯಕಾರಿ ಮತ್ತು ಅಪಾಯಕಾರಿಯಲ್ಲದ ಹೃದ್ರೋಗ ವಿಭಾಗಕ್ಕೆ ಸಂಬಂಧಿಸಿ ಅತ್ಯುತ್ತಮ ವೈದ್ಯಕೀಯ ಸೌಲಭ್ಯಗಳನ್ನು ಹೊಂದಿದೆ. 

ಕೇಂದ್ರದ ಇತರ ಸೇವೆಗಳೆಂದರೆ, ಮೇಲ್ವಿಚಾರಣೆ ಮಾಡಲಾದ ಉತ್ತಮ ಹಾಸಿಗೆಗಳು, ವೆಂಟಿಲೇಟರ್ ಗಳು, ಡಿಫಿಬ್ರಿಲೇಟರ್ಗಳು, ಎಕೋಕಾರ್ಡಿಯೋಗ್ರಫಿ, ಸ್ಟ್ರೆಸ್ ಇಸಿಜಿ, ಪೇಸ್ಮೇಕರ್ ಇಂಪ್ಲಾಂಟೇಶನ್ ಮತ್ತು ಪ್ರೈಮರಿ ಆಂಜಿಯೋಪ್ಲ್ಯಾಸ್ಟಿಗಳನ್ನು ಒಳಗೊಂಡಿರುತ್ತದೆ. ಇದು ಬಲೂನ್ ಆಂಜಿಯೋಪ್ಲ್ಯಾಸ್ಟಿ ಮತ್ತು ಸ್ಟೆಂಟಿಂಗ್ ನಂತಹ ಸುಧಾರಿತ ಹೃದ್ರೋಗ ಚಿಕಿತ್ಸೆಗಳನ್ನು ನಿರ್ವಹಿಸುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X