Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಿಷೇದಾಜ್ಞೆ ಜಾರಿ; ಕೊಡಗಿನ ಪೊಲೀಸ್...

ನಿಷೇದಾಜ್ಞೆ ಜಾರಿ; ಕೊಡಗಿನ ಪೊಲೀಸ್ ಬಂದೋಬಸ್ತ್ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

15 ಕೆಎಸ್‍ಆರ್ ಪಿ ತುಕಡಿ ನಿಯೋಜನೆ

ವಾರ್ತಾಭಾರತಿವಾರ್ತಾಭಾರತಿ24 Aug 2022 6:45 PM IST
share
ನಿಷೇದಾಜ್ಞೆ ಜಾರಿ; ಕೊಡಗಿನ ಪೊಲೀಸ್ ಬಂದೋಬಸ್ತ್ ಪರಿಶೀಲಿಸಿದ ಎಡಿಜಿಪಿ ಅಲೋಕ್ ಕುಮಾರ್

ಮಡಿಕೇರಿ ಆ.24: ಕೊಡಗು ಜಿಲ್ಲೆಯಲ್ಲಿ ಸೆಕ್ಷನ್ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿಯಲ್ಲಿದ್ದು, ಪೊಲೀಸ್ ಭದ್ರತಾ ವ್ಯವಸ್ಥೆಗಳ ಕುರಿತು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಪರಿಶೀಲನೆ ನಡೆಸಿದರು. 

ನಗರದ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಎಲ್ಲಾ ಪೊಲೀಸ್ ಠಾಣೆಗಳ ವೃತ್ತ ನಿರೀಕ್ಷಕರು, ಡಿವೈಎಸ್‍ಪಿ ಮತ್ತು ಅಧಿಕಾರಿಗಳ ಸಭೆ ನಡೆಸಿದ ಅಲೋಕ್ ಕುಮಾರ್, ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಚನೆಗಳನ್ನು ನೀಡಿದರು. ಚೆಕ್‍ಪೋಸ್ಟ್‍ಗಳಲ್ಲಿ ಬಿಗಿ ತಪಾಸಣೆ ನಡೆಸಬೇಕು. ಪ್ರವಾಸಿಗರಿಗೆ ತೊಂದರೆಯಾಗದ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಆ.26ರಂದು ‘ಮಡಿಕೇರಿ ಚಲೋ’ ಹಾಗೂ ‘ಜನ ಜಾಗೃತಿ ಸಮಾವೇಶ’ ಆಯೋಜನೆಗೆ ಕರೆ ನೀಡಲಾಗಿತ್ತು. ಕಾನೂನು ಮತ್ತು ಸುವ್ಯವಸ್ಥೆಯನ್ನು ದೃಷ್ಟಿಯಲ್ಲಿರಿಸಿಕೊಂಡು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಕ್ಷನ್ 144 ಜಾರಿಗೊಳಿಸಲಾಗಿದೆ ಎಂದು ಹೇಳಿದರು. ಕೊಡಗು ಜಿಲ್ಲೆ ಕೇರಳದೊಂದಿಗೆ ಗಡಿ ಹಂಚಿಕೊಂಡಿದ್ದು, ಸೂಕ್ಷ್ಮ ಪ್ರದೇಶವೂ ಆಗಿದೆ. ಈ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. 

::: 15 ಕೆಎಸ್‍ಆರ್‍ಪಿ ತುಕಡಿ 

ಜಿಲ್ಲೆಯಲ್ಲಿ ಶಾಂತಿ ಕಾಪಾಡಲು 15 ಕೆಎಸ್‍ಆರ್‍ಪಿ ತುಕಡಿಗಳ ಸಾವಿರ ಮಂದಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಐಜಿಪಿ ಪ್ರವೀಣ್ ಮಧುಕರ್ ಪವಾರ್, ಚಾಮರಾಜಪೇಟೆ ಅಡಿಷನಲ್ ಎಸ್.ಪಿ. ಸುಂದರ್ ರಾಜ್ ಅವರುಗಳು ಮಡಿಕೇರಿಯಲ್ಲಿ ಮೊಕಾಂ ಹೂಡಿದ್ದಾರೆ. ಸಾರ್ವಜನಿಕ ಆಸ್ತಿಪಾಸ್ತಿ ಸಹಿತ ಜೀವ ರಕ್ಷಣೆಗೂ ಪೊಲೀಸ್ ಇಲಾಖೆ ಬದ್ಧವಾಗಿದೆ. ಸಾರ್ವಜನಿಕರು ಯಾರು ಕೂಡ ಆತಂಕಪಡುವ ಅಗತ್ಯ ಇಲ್ಲ ಎಂದು ಅಲೋಕ್ ಕುಮಾರ್ ಅಭಯ ನೀಡಿದರು. 

::: ಚೆಕ್‍ಪೋಸ್ಟ್ ತಪಾಸಣೆ 

ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೊಪ್ಪ, ಕೊಡ್ಲಿಪೇಟೆ, ಕುಟ್ಟ, ಮಾಕುಟ್ಟ, ಸಂಪಾಜೆ, ಕರಿಕೆ ಮತ್ತಿತ್ತರ ಕಡೆಗಳಲ್ಲಿ ಈಗಾಗಲೇ ಚೆಕ್ ಪೋಸ್ಟ್‍ಗಳನ್ನು ತೆರೆಯಲಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ಬಿಗಿಯಾಗಿ ತಪಾಸಣೆ ನಡೆಸಲಾಗುತ್ತಿದೆ. ಅದರಲ್ಲೂ ಯಾರಿಗೂ ತೊಂದರೆ ಆಗದ ರೀತಿಯಲ್ಲಿ ತಪಾಸಣೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದೆ. ಮುಖ್ಯವಾಗಿ ಕೊಡಗು ಜಿಲ್ಲೆ ಪ್ರವಾಸೋದ್ಯಮದ ಪಟ್ಟಿಯಲ್ಲಿರುವ ಕಾರಣ ಸ್ಥಳೀಯರು ಹಾಗು ಪ್ರವಾಸಿಗರಿಗೂ ತೊಂದರೆಯಾಗದಂತೆ ವಿಶೇಷ ಗಮನ ಹರಿಸಲು ಸೂಚನೆ ನೀಡಲಾಗಿದೆ. ಎಲ್ಲಿಯೂ ವ್ಯತಿರಿಕ್ತ ಪರಿಣಾಮ ಬೀರಬಾರದೆನ್ನುವ ದೃಷ್ಟಿಯಿಂದ ಕೆಲವು ಸೂಚನೆಗಳನ್ನು ನೀಡಲಾಗಿದೆ ಎಂದು ಅಲೋಕ್ ಕುಮಾರ್ ಹೇಳಿದರು.

ಆ.18ರಂದು ನಡೆದ ಘಟನೆಗಳ ಕುರಿತು ಮಾಹಿತಿ ಪಡೆಯಲಾಗುತ್ತದೆ. ಅಂದಿನ ಎಲ್ಲಾ ಘಟನೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಉನ್ನತ ಅಧಿಕಾರಿಗಳು ಜಿಲ್ಲೆಗೆ ಬಾರದೆ ಬೆಂಗಳೂರಿನಲ್ಲಿ ಕುಳಿತ್ತಿದ್ದಾರೆ ಎಂಬ ಭಾವನೆ ಜನರಿಗೆ ಬರಬಾರದೆನ್ನುವ ಉದ್ದೇಶದಿಂದ ಖುದ್ದಾಗಿ ಇಲ್ಲಿಗೆ ಬಂದಿದ್ದೇನೆ.   ಎಲ್ಲದರ ಕುರಿತು ಮಾಹಿತಿ ಪಡೆಯುತ್ತೇನೆ. ಪೊಲೀಸ್ ಇಲಾಖೆ ಸದಾ ಕಾಲ ಜನರೊಂದಿಗೆ ಇರುತ್ತದೆ. ನಿಷೇದಾಜ್ಞೆ ಜಾರಿಯಲ್ಲಿರುವ ಸಮಯದವರೆಗೆ ಪೊಲೀಸ್ ಬಂದೋಬಸ್ತ್ ಜಿಲ್ಲೆಯಲ್ಲಿ ಇರಲಿದೆ ಎಂದು ಹೇಳಿದರು. ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಬದಲಾವಣೆಗೆ ಒತ್ತಡವಿರುವ ಕುರಿತು ತಮಗೆ ಯಾವುದೇ ಮಾಹಿತಿ ಇಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಅಲೋಕ್ ಕುಮಾರ್ ಉತ್ತರಿಸಿದರು. 

ಈ ಸಂದರ್ಭ ದಕ್ಷಿಣ ವಲಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಮಧುಕರ್ ಪವಾರ್, ಕೊಡಗು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕ್ಯಾಪ್ಟನ್ ಮಲ್ಚೀರ ಎ.ಅಯ್ಯಪ್ಪ, ಚಾಮರಾಜನಗರ ಅಡಿಷನಲ್ ಎಸ್.ಪಿ. ಸುಂದರ್ ರಾಜ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X