Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: ʼಜಿಲ್ಲಾಧಿಕಾರಿಗಳ ನಡೆ ಹಳ್ಳಿಯ...

ಭಟ್ಕಳ: ʼಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ24 Aug 2022 9:08 PM IST
share
ಭಟ್ಕಳ: ʼಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆʼ ಕಾರ್ಯಕ್ರಮ

ಭಟ್ಕಳ: ʼಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆʼ ಕಾರ್ಯಕ್ರಮ ತಾಲೂಕಿನ ಸೂಸಗಡಿ ಹೋಬಳಿಯ ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೊಮ್ಮನಕೆರೆಯ ಶ್ರೀ ದುರ್ಗಾಪರಮೇಶ್ವರಿ ಸಭಾ ಭವನದಲ್ಲಿ ಬುಧವಾರ ನಡೆಯಿತು. 

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಡಾ. ಸುಮಂತ್ ಬಿ.ಇ., ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಈ ಕಾರ್ಯಕ್ರಮವು ಒಂದು ಉತ್ತಮ ಕಾರ್ಯಕ್ರಮವಾಗಿದ್ದು ಇದರಲ್ಲಿ ನೀಡಿದ ಅರ್ಜಿಯನ್ನು ನಿರ್ಧಿಷ್ಟ ಕಾಲ ಮಿತಿಯೊಳಗೆ ಪರಿಹರಿಸಲಾಗುವುದು. ಅಲ್ಲದೇ ಹೆಚ್ಚಿನ ಅರ್ಜಿಗಳನ್ನು ನೀಡಿ ನಿಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಮೂಲಕ ಈ ಕಾರ್ಯಕ್ರಮವನ್ನು ಯಶಸ್ವೀಗೊಳಿಸಲು ಕರೆ ನೀಡಿದರು. 

ಚುನಾವಣಾ ಆಯೋಗ ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ ಲಿಂಕ್ ಮಾಡಬೇಕು ಎನ್ನುವ ಆದೇಶವನ್ನು ನೀಡಿದ್ದು ನಿರ್ಧಿಷ್ಟ ಕಾಲಮಿತಿಯೊಳಗೆ ಪ್ರತಿಯೋರ್ವರೂ ಕೂಡಾ ಓಟರ್ ಹೆಲ್ಪಲೈನ್ ಆಪ್ ಮೂಲಕ ಲಿಂಕ್ ಮಾಡಬೇಕು ಎಂದು ಕೋರಿದರು.  ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯಲ್ಲಿನ ಸೌಲಭ್ಯಗಳ ಮಾಹಿತಿಯನ್ನು ನೀಡುತ್ತಾರೆ. ಪ್ರತಿಯೋರ್ವರೂ ಕೂಡಾ ಆಯಾಯ ಇಲಾಖೆಯಲ್ಲಿ ತಮಗೆ ಅಗತ್ಯವಿರುವ ಸೌಲಭ್ಯವನ್ನು ಪಡೆದುಕೊಳ್ಳುವಂತೆ ಕರೆ ನೀಡಿದ ಅವರು ಇಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ ನಡೆಸಲಾಗುವುದು, ಕೋವಿಡ್ ವಾಕ್ಸಿನೇಷನ್ ಪಡೆಯದವರಿಗೂ ಕೂಡಾ ಇಲ್ಲಿ ಅವಕಾಶವಿದೆ. ಇಂದಿನ ಕಾರ್ಯಕ್ರಮದಲ್ಲಿ ವೃದ್ಯಾಪ್ಯ ವೇತನ, ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನ, ಬಿ.ಪಿ.ಎಲ್. ಕಾರ್ಡ ಇತ್ಯಾದಿಗಳಿಗೆ ಅರ್ಜಿ ಸಲ್ಲಿಸಿದರೆ ಸಂಜೆಯಾಗುವುದರೊಳಗೆ ಪರಿಶೀಲನೆ ಮಾಡಿ ಕಾರ್ಯಾದೇಶವನ್ನು ನೀಡಲಾಗುವುದು ಎಂದೂ ಹೇಳಿದರು.

ತಾಲೂಕಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಪ್ರಭಾಕರ ಚಿಕ್ಕನಮನೆ ಮಾತನಾಡಿದರು. 

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ದೇವಿದಾಸ ಮೊಗೇರ, ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ, ಗ್ರಾಮೀಣ ಠಾಣೆಯ ಸಬ್ ಇನ್ಸಪೆಕ್ಟರ್ ಗಣೇಶ ನಾಯ್ಕ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 

ಕಾರ್ಯಕ್ರಮದಲ್ಲಿ ರಸ್ತೆಯ ಕುರಿತೇ ಹೆಚ್ಚು ಅರ್ಜಿಗಳು ಸಲ್ಲಿಕೆಯಾಗಿದ್ದು ಗ್ರಾಮೀಣ ಭಾಗದಲ್ಲಿ ಇನ್ನು ಕೂಡಾ ರಸ್ತೆ ಸಂಪರ್ಕಕ್ಕೆ ಪರದಾಡುವ ಪರಿಸ್ಥಿತಿ ಇದೆ ಎನ್ನುವುದನ್ನು ಬಿಂಬಿಸುವಂತಿದೆ. ಬೆಳಕೆ ಕಂಚಿಕೇರಿ ರೈಲ್ವೇ ಕ್ರಾಸಿಂಗ್‍ನಲ್ಲಿ ಮೇಲ್‍ಸೇತುವೆ ನಿರ್ಮಿಸಿಕೊಡುವಂತೆ ಆ ಭಾಗದ ನಾಗರೀಕರು ಮನವಿ ಸಲ್ಲಿಸಿದರು. ಬೆಳಕೆ-ಕಂಚಿಕೇರಿ-ಕಾನ್‍ಮದ್ಲು ರಸ್ತೆ ಅಗಲೀಕರಣ,  ಕಂಚಿಕೇರಿಯಲ್ಲಿರುವ ಕಚ್ಚಾ ರಸ್ತೆಗಳನ್ನು ರಿಪೇರಿ ಮಾಡುವುದು, ಕಂಚಿಕೇರಿ ಕಾನ್‍ಮದ್ಲು ರಸ್ತೆಗೆ ಚರಂಡಿ ಮಾಡುವುದು, ಕಂಚಿಕೇರಿ-ಕಾನ್‍ಮದ್ಲು ತನಕ ಕುಡಿಯುವ ನೀರಿನ ವ್ಯವಸ್ಥೆ, ಪಿನ್ನುಪಾಲು ಹೊಳೆಯಲ್ಲಿ ಗಿಡಗಳನ್ನು ಕಡಿದು ಹೂಳೆತ್ತುವುದು, ಕಾನ್‍ಮದ್ಲುವಿನಲ್ಲಿ 3 ಕಿ.ಮಿ. ರಸ್ತೆ ನಿರ್ಮಾಣ ಮಾಡುವುದು, ಮದ್ಗಾರ್‍ಕೇರಿ ರಸ್ತೆ, ಗರಡಿಹಿತ್ಲ ರಸ್ತೆ ರಿಪೇರಿ, ಕೃಷಿ ಭೂಮಿಗೆ ನೀರು ನುಗ್ಗದಂತೆ ತಡೆಗೋಡೆ ನಿರ್ಮಿಸುವುದು, ಅರಣ್ಯಭೂಮಿ ಸಕ್ರಮ ಮಾಡುವುದು ಸೇರಿದಂತೆ ಹಲವು ಸಮಸ್ಯೆಗಳ ಕುರಿತು ಸಾರ್ವಜನಿಕರು ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.ಸವಿತಾ ಗೊಂಡ ಮತ್ತಿತರರು ತಮಗೆ ಕಳೆದ ಕೆಲವು ವರ್ಷಗಳಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲವಾಗಿದ್ದು ಶೀಘ್ರ ಸಮಸ್ಯೆ ಬಗೆಹರಿಸಿ ಜಾತಿ ಪ್ರಮಾಣ ಪತ್ರ ನೀಡುವಂತಾಗಬೇಕು ಎಂದು ಮನವಿ ಸಲ್ಲಿಸಿದರು. 

ತಮಗೆ ಅರಣ್ಯ ಇಲಾಖೆಯಿಂದ ಜಾಗಾ ಮಂಜೂರಿಯಾಗಿದೆ. ಮಂಜೂರಿ ಆದೇಶದಲ್ಲಿ ಕೊಟ್ಟ ಸರ್ವೆ ನಂಬ್ರ ಹಾಗೂ ನಾವು ಉಳಿದುಕೊಂಡಿರುವ ಸರ್ವೆ ನಂಬ್ರ ನಕಾಶೆಯ ಪ್ರಕಾರ ಅದಲು ಬದಲಾಗಿದೆ ಸರಿಪಡಿಸಿಕೊಡಿ ಎಂದು ಅಮ್ಮ ಗೊಂಡ ಮನವಿ ಸಲ್ಲಿಸಿದರು. ಸ್ಥಳದಲ್ಲಿಯೇ ಹಾಜರಿದ್ದ ವಲಯ ಅರಣ್ಯಾಧಿಕಾರಿ ಶರತ್ ಶೆಟ್ಟಿ ಅವರು ಪರಿಶೀಲಿಸಿ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಅರ್ಹರಿಗೆ ವಿಧವಾ ವೇತನ, ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ, ಬಿ.ಪಿ.ಎಲ್. ಕಾರ್ಡ ಇತ್ಯಾದಿಗಳನ್ನು ವಿತರಿಸಲಾಯಿತು. ನಂತರ ಸಂಜೆ ಸಭೆಗೆ ಆಗಮಿಸಿದ ಶಾಸಕ ಸುನಿಲ್ ನಾಯ್ಕ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಕಾರ್ಯಾದೇಶವನ್ನು ವಿತರಿಸಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X