Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 48 ಸಾವಿರ ಸರಕಾರಿ ಶಾಲೆಗಳ ಪೈಕಿ ಸುಮಾರು...

48 ಸಾವಿರ ಸರಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕ: ಸಚಿವ ಬಿ.ಸಿ.ನಾಗೇಶ್

ಉಳಿದ 19 ಸಾವಿರ ಸರಕಾರಿ ಶಾಲೆಗಳ ಆಸ್ತಿ ನೋಂದಣಿಗೆ ಕ್ರಮ

ವಾರ್ತಾಭಾರತಿವಾರ್ತಾಭಾರತಿ24 Aug 2022 10:25 PM IST
share
48 ಸಾವಿರ ಸರಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಆ.24: ರಾಜ್ಯದಲ್ಲಿರುವ 48 ಸಾವಿರ ಸರಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಸರಕಾರಿ ಶಾಲೆಗಳ ಆಸ್ತಿ ದಾಖಲೆಗಳು ಸಮರ್ಪಕವಾಗಿದ್ದು, ಉಳಿದ ಶಾಲೆಗಳ ಆಸ್ತಿ ನೋಂದಣಿ ಮಾಡುವುದಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸಚಿವರು ಮಾತನಾಡಿದರು. ಆಗಸ್ಟ್ ನಿಂದ ಅಕ್ಟೋಬರ್ ವರೆಗೆ ಸರಕಾರಿ ಶಾಲಾ, ಕಾಲೇಜುಗಳ ಆಸ್ತಿ ಸಂರಕ್ಷಣಾ ಅಭಿಯಾನ ನಡೆಸಲಾಗುತ್ತಿದೆ. ಶಾಲೆಯ ಆಸ್ತಿ ದಾಖಲೆಗಳನ್ನು ಶಿಸ್ತುಬದ್ಧಗೊಳಿಸಿ ನೋಂದಣಿ ಮಾಡಿಸಬೇಕು ಎಂದು ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.

ಕಂದಾಯ ಇಲಾಖೆ ಹಾಗೂ ಇನ್ನುಳಿದ ಸಂಬಂಧಪಟ್ಟ ಇಲಾಖೆಗಳ ಸಂಯೋಜನೆಯಲ್ಲಿ ಈ ಕಾರ್ಯ ನಡೆಯಲಿದೆ. ರಾಜ್ಯದ 48 ಸಾವಿರ ಸರಕಾರಿ ಶಾಲೆಗಳ ಪೈಕಿ ಸುಮಾರು 29 ಸಾವಿರ ಶಾಲೆಗಳ ದಾಖಲೆಗಳು ನೋಂದಣಿಯಾಗಿವೆ. ಇನ್ನುಳಿದ ಶಾಲೆಗಳ ದಾಖಲೆಗಳನ್ನು ಶಿಸ್ತುಬದ್ಧಗೊಳಿಸಲು ನಿರ್ದೇಶನ ನೀಡಲಾಗಿದೆ ಎಂದು ಸಚಿವರು ಹೇಳಿದರು.

ಕಾನೂನಾತ್ಮಕ ಸಮಸ್ಯೆಗಳು, ಶಿಕ್ಷಣ ಇಲಾಖೆಯ ಆಸ್ತಿಯಾಗಿದ್ದರೂ ನೋಂದಣಿಯಾಗದೇ ಇರುವುದು, ಇತರ ಇಲಾಖೆಗಳಿಂದ ಶಿಕ್ಷಣ ಇಲಾಖೆಗೆ ನೀಡಿರುವುದು, ಖಾಸಗಿ ಸಂಸ್ಥೆ, ವ್ಯಕ್ತಿಗಳಿಂದ ದಾನ ಪಡೆದಿರುವುದು ಸೇರಿದಂತೆ ಎಲ್ಲ ರೀತಿಯ ಶಾಲೆಗಳ ಆಸ್ತಿಯನ್ನು ನೋಂದಣಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ನುಡಿದರು.

‘ಚಿಕ್ಕಪೇಟೆಯಲ್ಲಿ 1945ರಿಂದ ನಡೆಯುತ್ತಿರುವ ಸರಕಾರಿ ಶಾಲೆಯ ಆಸ್ತಿ ದಾಖಲೆಗಳನ್ನು ಶಿಕ್ಷಣ ಇಲಾಖೆಗೆ ವರ್ಗಾಯಿಸುವಂತೆ ಕಂದಾಯ ಇಲಾಖೆಗೆ ಕೋರಲಾಗಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಕಂದಾಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ’ ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ಸಚಿವ ನಾಗೇಶ್ ಉತ್ತರಿಸಿದರು.

ಸರಕಾರಿ ಶಾಲೆಗಳ ಆಸ್ತಿ ಸಂರಕ್ಷಣೆಗೆ ವಿಶೇಷ ಕ್ರಮ ವಹಿಸಿದ ಪರಿಣಾಮ ಕಳೆದ ಕೆಲವೇ ತಿಂಗಳಲ್ಲಿ ಸುಮಾರು 2,500ಕ್ಕೂ ಹೆಚ್ಚು ಸರಕಾರಿ ಶಾಲೆಗಳ ಆಸ್ತಿಗಳು ನೋಂದಣಿಯಾಗಿವೆ ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X