ಚಾಮರಾಜಪೇಟೆ ಆಟದ ಮೈದಾನ ವಿಚಾರ: ಸರಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ

ಬೆಂಗಳೂರು, ಆ.24: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಆಟದ ಮೈದಾನದ ಮಾಲೀಕತ್ವ ಕಂದಾಯ ಇಲಾಖೆಗೆ ಸೇರಿದೆ ಎಂಬ ಸರಕಾರದ ಆದೇಶವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ.
ಈ ಸಂಬಂಧ ವಕ್ಫ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್ ಸಲಹಾ ಸಮಿತಿ ಸಲ್ಲಿಸಿರುವ ರಿಟ್ ಅರ್ಜಿ ಗುರುವಾರ (ಆ.25) ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ನಿಗದಿಯಾಗಿದೆ.
ಇದನ್ನೂ ಓದಿ: ಸಂತೋಷ್ ಸಾವಿನ ಪ್ರಕರಣ | ಈಶ್ವರಪ್ಪ ಪರ 'ಬಿ' ರಿಪೋರ್ಟ್: ದಾಖಲೆ ಸಲ್ಲಿಸಲು ಕೋರ್ಟ್ ನಿರ್ದೇಶನ
ಪ್ರಕರಣದಲ್ಲಿ ರಾಜ್ಯ ಸರಕಾರ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಮತ್ತು ‘ದಿ ಸೆಂಟ್ರಲ್ ಮುಸ್ಲಿಮ್ ಅಸೋಸಿಯೇಷನ್ ಆಫ್ ಕರ್ನಾಟಕ‘ದ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಖಾನ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
Next Story







