ತ್ರೋಬಾಲ್ ಪಂದ್ಯಾಟ; ಸುರತ್ಕಲ್ ಅಲ್ ಬದ್ರಿಯಾ ಸ್ಕೂಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸುರತ್ಕಲ್, ಆ.25: ಇಲ್ಲಿನ ಅಲ್ ಬದ್ರಿಯಾ ಶಾಲೆಯ ವಿದ್ಯಾರ್ಥಿಗಳು ತ್ರೋಬಾಲ್ ಪಂದ್ಯಾಕೂಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದರೆ.
ಮಹಾಲಿಂಗೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಕೂಟದಲ್ಲಿ ಚಾಂಪಿಯನ್ ಶಿಪ್ ಗೆದ್ದುಕೊಂಡ ಅಲ್ ಬದ್ರಿಯಾ ಶಾಲೆ, ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಈ ಸಾಧನೆಗೈದ ಅಲ್ ಬದ್ರಿಯಾ ಶಾಲೆಯ ತ್ರೋಬಾಲ್ ತಂಡಕ್ಕೆ ಸಂಸ್ಥೆಯ ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ದೈಹಿಕ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.










