Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ...

ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ, 8 ನೂತನ ವಿ.ವಿ.ಗಳ ಸ್ಥಾಪನೆಗೆ ಹಾದಿ ಸುಗಮ: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ25 Aug 2022 3:34 PM IST
share
ವಿವಿ ಕಾಯ್ದೆ ತಿದ್ದುಪಡಿಗೆ ಸಂಪುಟ ಒಪ್ಪಿಗೆ, 8 ನೂತನ ವಿ.ವಿ.ಗಳ ಸ್ಥಾಪನೆಗೆ ಹಾದಿ ಸುಗಮ: ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: ಎಂಟು ನೂತನ ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅನುವು ಮಾಡಿಕೊಡುವ ಉದ್ದೇಶದಿಂದ 'ಕರ್ನಾಟಕ ವಿವಿಗಳ ಕಾಯ್ದೆ-2000'ಕ್ಕೆ ತಿದ್ದುಪಡಿ ತರಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, 'ಇದರಿಂದಾಗಿ ಚಾಮರಾಜನಗರ, ಹಾವೇರಿ, ಹಾಸನ, ಕೊಡಗು, ಕೊಪ್ಪಳ, ಬಾಗಲಕೋಟೆ, ಬೀದರ್ ಮತ್ತು ಮಂಡ್ಯ ವಿ.ವಿ.ಗಳ ಸ್ಥಾಪನೆ ಸುಗಮವಾಗಿ ನಡೆಯಲಿದೆ. ಇದಕ್ಕಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ' ಎಂದಿದ್ದಾರೆ.

ಹೊಸ ವಿ.ವಿ.ಗಳ ಪೈಕಿ ಕ್ರಮವಾಗಿ ಚಾಮರಾಜನಗರ ವಿ.ವಿ.ಯಲ್ಲಿ 18,  ಹಾಸನ ವಿ.ವಿ.ಯಲ್ಲಿ 36, ಹಾವೇರಿ 40, ಬೀದರ್ 140,  ಕೊಡಗು 24,  ಕೊಪ್ಪಳ 40 ಮತ್ತು ಬಾಗಲಕೋಟೆ ವಿವಿಗಳು 71 ಕಾಲೇಜುಗಳನ್ನು ಹೊಂದಿರಲಿವೆ. ಇವುಗಳ ಜತೆಗೆ ಮಂಡ್ಯ ವಿ.ವಿ. ವ್ಯಾಪ್ತಿಗೆ ಆ ಜಿಲ್ಲೆಯ ಪ್ರಥಮ ದರ್ಜೆ ಕಾಲೇಜುಗಳು  ಬರಲಿವೆ ಎಂದು ಅವರು ವಿವರಿಸಿದರು.

ಮಂಡ್ಯ ವಿವಿ ಒಂದನ್ನು ಹೊರತುಪಡಿಸಿ ಮಿಕ್ಕ 7 ವಿ.ವಿ.ಗಳ ಆರಂಭವನ್ನು ಈ ವರ್ಷದ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಈಗಾಗಲೇ ತಲಾ 2 ಕೋಟಿ ರೂ.ಗಳಂತೆ ಒಟ್ಟು 14 ಕೋಟಿ ರೂಪಾಯಿ ಒದಗಿಸಲಾಗಿದೆ. ಏಕೀಕೃತ ವಿವಿಯಾಗಿದ್ದ ಮಂಡ್ಯದ ಸರಕಾರಿ ಕಾಲೇಜನ್ನು ಪೂರ್ಣ ಪ್ರಮಾಣದ ವಿ.ವಿ.ಯಾಗಿ ಮಾಡುವ ತೀರ್ಮಾನವನ್ನು ಇತ್ತೀಚೆಗೆ ಕೈಗೊಳ್ಳಲಾಗಿತ್ತು ಎಂದು ಅವರು ವಿವರಿಸಿದರು.

ಜಿಲ್ಲೆಗೊಂದು ವಿವಿ ಇರಬೇಕು ಎನ್ನುವುದು ಸರಕಾರದ ತೀರ್ಮಾನವಾಗಿದೆ. ಈ ಮೂಲಕ ಶೈಕ್ಷಣಿಕ ಅಸಮತೋಲನ ನಿವಾರಣೆ ಮಾಡಲಾಗುವುದು. ಜೊತೆಗೆ, ಯುವಜನರಿಗೆ ಮನೆ ಬಾಗಿಲಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಸದಾಶಯ ಇದರ ಹಿಂದಿದೆ ಎಂದು ಸಚಿವರು ಹೇಳಿದರು.

ನೂತನ ವಿ.ವಿ.ಗಳ ಸ್ಥಾಪನೆಗೆ ಆರ್ಥಿಕ ಮತ್ತು ಯೋಜನಾ ಇಲಾಖೆಗಳು ಒಪ್ಪಿಗೆ ನೀಡಿವೆ. ಇವು ಕಡಿಮೆ ಸ್ಥಳ, ಕಡಿಮೆ ಸಿಬ್ಬಂದಿ ಮತ್ತು ಕಡಿಮೆ ವೆಚ್ಚದೊಂದಿಗೆ ಕಾರ್ಯ ಚಟುವಟಿಕೆ ನಡೆಸಲಿವೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X