Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. BBMP ಚುನಾವಣೆಗೆ ಮತದಾರರ ಪಟ್ಟಿ ಸಿದ್ಧ:...

BBMP ಚುನಾವಣೆಗೆ ಮತದಾರರ ಪಟ್ಟಿ ಸಿದ್ಧ: 243 ವಾರ್ಡ್‍ಗಳಿಗೆ 79 ಲಕ್ಷ ಮತದಾರರು

ವಾರ್ತಾಭಾರತಿವಾರ್ತಾಭಾರತಿ25 Aug 2022 7:05 PM IST
share
BBMP ಚುನಾವಣೆಗೆ ಮತದಾರರ ಪಟ್ಟಿ ಸಿದ್ಧ: 243 ವಾರ್ಡ್‍ಗಳಿಗೆ 79 ಲಕ್ಷ ಮತದಾರರು

ಬೆಂಗಳೂರ, ಆ.25: ಬಿಬಿಎಂಪಿ ಸಾರ್ವತ್ರಿಕ ಚುನಾವಣೆ ಈ ವಾರ್ಷಿಕ ಸಾಲಿನ ಅಂತ್ಯದೊಳಗೆ ನಡೆಯಲಿದ್ದು, ಈ ಸಂಬಂಧ ಮತದಾರರ ಕರಡು ಪ್ರತಿ ಅನ್ವಯ 243 ವಾರ್ಡ್‍ಗಳಿಗೆ ಒಟ್ಟು 79,08,394 ಮತದಾರರಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜ್ ತಿಳಿಸಿದರು.

ಗುರುವಾರ ಬಿಬಿಎಂಪಿ ಸಾರ್ವತ್ರಿಕ ಚುನಾವಣೆ-2022ರ ಸಂಬಂಧ 243 ವಾರ್ಡ್‍ವಾರು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 198 ವಾರ್ಡ್‍ಗಳಿಂದ2 43 ವಾರ್ಡ್‍ಗಳಿಗೆ ಬಿಬಿಎಂಪಿ ವ್ಯಾಪ್ತಿ ಹೆಚ್ಚಳವಾಗಿದೆ. ಒಟ್ಟು 79,08,394 ಮತದಾರರಿದ್ದು, 41,09,496 ಪುರುಷರು, 37,97,497 ಮಹಿಳೆಯರು, 1401 ತೃತೀಯ ಲಿಂಗಿಗಳು ಇದ್ದಾರೆ. ಒಂದು ವಾರ್ಡ್‍ನಲ್ಲಿ ಕನಿಷ್ಠ 18,604 ಗರಿಷ್ಠ 51,653 ಮತದಾರರಿದ್ದಾರೆ ಎಂದು ಮಾಹಿತಿ ನೀಡಿದರು.

ಸೆ.3 ರಿಂದ ಸೆ. 9ರವರೆಗೆ ಮತದಾರರ ಕರಡು ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಸೆ.16ರ ಒಳಗೆ ಅಂತಿಮ ಮತದಾರರ ಪಟ್ಟಿ ಪ್ರಕಟಿಸಲಾಗುವುದು. ಪಟ್ಟಿಯಲ್ಲಿ ಯಾವುದೇ ಲೋಪದೋಷ ಇದ್ದರೆ ಈಗಲೇ ಸರಿಪಡಿಸಿಕೊಳ್ಳಿ ಎಂದು ಹೇಳಿದರು.

2022ರೊಳಗೆ ಚುನಾವಣೆ ನಡೆಸುವ ಪ್ರಕ್ರಿಯೆ ಮಾಡಲಾಗುತ್ತದೆ, ಹಲವರು ಕೋರ್ಟ್ ಮೊರೆ ಹೋಗಿರುವುದು ಚುನಾವಣೆ ನಡೆಸಲು ಅಡ್ಡಿಯಿಲ್ಲ. ಒಂದು ವೇಳೆ ಕೋರ್ಟ್‍ನಿಂದ ಬೇರೆ ನಿರ್ದೇಶನ ಬಂದರೆ ಅದನ್ನು ಪಾಲನೆ ಮಾಡುಲಾಗುತ್ತದೆ ಎಂದು ಬಸವರಾಜ್ ತಿಳಿಸಿದರು.

ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿ, ಚುನಾವಣೆ ನಡೆಸುವ ದಿಕ್ಕಿನಲ್ಲಿ ಮತದಾರರ ಪಟ್ಟಿ ತಯಾರು ಮಾಡಲಾಗಿದೆ. ಇಂದು ಬಿಬಿಎಂಪಿ ಕರಡು ಮತದಾರರ ಪಟ್ಟಿಯನ್ನು ಬಿಬಿಎಂಪಿ ವೆಬ್‍ಸೈಟ್‍ನಲ್ಲಿ ಬಿಡುಗಡೆ ಮಾಡಲಾಗಿದೆ. ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಉಲ್ಲೇಖ ಇದೆಯಾ, ಇಲ್ವಾ? ಎಂಬುವುದರ ಬಗ್ಗೆ ಪರಿಶೀಲನೆ ಮಾಡಿಕೊಳ್ಳಬಹುದು. ಬದಲಾವಣೆ ಇದ್ದಲ್ಲಿ, ಹೆಸರು ಇಲ್ಲದೆ ಇದ್ದಲ್ಲಿ, ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ ಎಂದು ಹೇಳಿದರು.

ನಗರದಲ್ಲಿ ಮತದಾನದ ಪ್ರಮಾಣ ತುಂಬಾ ಕಡಿಮೆ ಇದೆ. ಶೇ 42 ಪರ್ಸಂಟೇಜ್‍ನಷ್ಟು ಮಾತ್ರವೇ ಮತದಾನ ಆಗುತ್ತಿದೆ. ಒಟ್ಟು ನಾಲ್ಕು ಚುನಾವಣಾ ಅಧಿಕಾರಿಯನ್ನ ನೇಮಕ ಮಾಡಲಾಗಿದೆ ಎಂದ ಅವರು, 2015ರ ಚುನಾವಣೆಯಲ್ಲಿ 71 ಲಕ್ಷದ 22 ಸಾವಿರ ಮತದಾರರು ಇದ್ದರು. ಈ ಬಾರಿ ಸಂಖ್ಯೆಯಲ್ಲಿ ಹೆಚ್ಚಳ ಆಗಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X