Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವೆಂಬರ್- ಡಿಸೆಂಬರ್ ನಲ್ಲಿ ಆಕಾಶಕ್ಕೆ...

ನವೆಂಬರ್- ಡಿಸೆಂಬರ್ ನಲ್ಲಿ ಆಕಾಶಕ್ಕೆ ನೆಗೆಯಲಿರುವ 'ಪುನೀತ್' ಉಪಗ್ರಹ

ಉಡಾವಣೆಗೆ ರಾಜ್ಯದದಿಂದ ಶ್ರೀಹರಿಕೋಟಕ್ಕೆ ತೆರಳಲಿರುವ ಸರಕಾರಿ ಶಾಲೆಯ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ25 Aug 2022 8:00 PM IST
share
ನವೆಂಬರ್- ಡಿಸೆಂಬರ್ ನಲ್ಲಿ ಆಕಾಶಕ್ಕೆ ನೆಗೆಯಲಿರುವ ಪುನೀತ್ ಉಪಗ್ರಹ

ಬೆಂಗಳೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರಕಾರಿ ಶಾಲಾ ವಿದ್ಯಾರ್ಥಿಗಳೇ ನಿರ್ಮಿಸುತ್ತಿರುವ `ಪುನೀತ್' (Puneeth Rajkumar) ಉಪಗ್ರಹವನ್ನು ನ.15ರಿಂದ ಡಿ.31ರ ನಡುವೆ ಶ್ರೀಹರಿಕೋಟಾದಿಂದ ಉಡಾವಣೆ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಗುರುವಾರ ಹೇಳಿದ್ದಾರೆ.

ಈ ಉಪಗ್ರಹ ಯೋಜನೆಯ ಪ್ರಗತಿ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, "ಇದರ ಅಂಗವಾಗಿ ಶಾಲಾ ಮಕ್ಕಳಲ್ಲಿ ವೈಜ್ಞಾನಿಕ ಕುತೂಹಲ ಮತ್ತು ಆಸಕ್ತಿ ಬೆಳೆಸಲು ಪ್ರೌಢಶಾಲಾ ಮತ್ತು ಪದವಿಪೂರ್ವ ವಿದ್ಯಾರ್ಥಿಗಳಿಗೆ ಜಿಲ್ಲೆ, ವಿಭಾಗೀಯ ಮತ್ತು ರಾಜ್ಯ ಮಟ್ಟದ ಸ್ಪರ್ಧೆಗಳನ್ನು ನಡೆಸಲಾಗುತ್ತಿದೆ. ಇದರಲ್ಲಿ ಅಂತಿಮವಾಗಿ 1 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಉಪಗ್ರಹ ಉಡಾವಣೆ ಕಾರ್ಯಕ್ರಮಕ್ಕೆ ಆಂಧ್ರಪ್ರದೇಶದ ಶ್ರೀಹರಿಕೋಟಾಕ್ಕೆ ಕರೆದುಕೊಂಡು ಹೋಗಲಾಗುವುದು'' ಎಂದರು.

ಸ್ಪರ್ಧೆಯ ಭಾಗವಾಗಿ ಪ್ರೌಢಶಾಲಾ ಮಕ್ಕಳಿಗೆ ಆನ್‌ಲೈನ್‌ ರಸಪ್ರಶ್ನೆ, ಸ್ಥಳದಲ್ಲೇ  ಚಿತ್ರ ಬಿಡಿಸುವ ಸ್ಪರ್ಧೆ, ಪಿಯುಸಿ ವಿದ್ಯಾರ್ಥಿಗಳಿಗೆ ಪ್ರಬಂಧ ರಚನೆ, ಖಗೋಳ ವಿಜ್ಞಾನಕ್ಕೆ ಸಂಬಂಧಿಸಿದ ಪೋಸ್ಟರ್ ರಚನೆ ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಎಲ್ಲಾ 31 ಜಿಲ್ಲೆಗಳ ಡಿಡಿಪಿಐಗಳಿಗೆ ಈಗಾಗಲೇ ಸೂಚನೆ ಕೊಡಲಾಗಿದೆ ಎಂದು ಅವರು ತಿಳಿಸಿದರು.

ಸ್ವಾತಂತ್ರದ 75ನೇ ವರ್ಷಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಶಾಲಾ ವಿದ್ಯಾರ್ಥಿಗಳಿಂದಲೇ 75 ಉಪಗ್ರಹಗಳನ್ನು ಅಭಿವೃದ್ಧಿ ಪಡಿಸುವ ಯೋಜನೆಯನ್ನು ಘೋಷಿಸಿದ್ದರು. ಈ ಪೈಕಿ, ಬೆಂಗಳೂರು ವಲಯದ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು 'ಕೆಜಿಎಸ್3ಸ್ಯಾಟ್' ಉಪಗ್ರಹವನ್ನು 1.90 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುತ್ತಿದ್ದು, ಮಲ್ಲೇಶ್ವರಂನಲ್ಲಿರುವ ಸರಕಾರಿ ಪ್ರೌಢಶಾಲೆಯಲ್ಲಿ ಇವರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ದಿವಂಗತ ನಟ ಪುನೀತ್ ಅವರ ಸ್ಮರಣಾರ್ಥ ಈ ಉಪಗ್ರಹಕ್ಕೆ ಅವರ ಹೆಸರನ್ನಿಡಲಾಗಿದೆ. ಪ್ರಧಾನಿಯವರ ಕಾರ್ಯಕ್ರಮದಡಿ ಉಡಾವಣೆಗೊಳ್ಳುತ್ತಿರುವ ದೇಶದ ಪ್ರಥಮ ಉಪಗ್ರಹ ಇದಾಗಿದೆ'' ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಉಪಗ್ರಹ ಅಭಿವೃದ್ಧಿ ಯೋಜನೆಯಲ್ಲಿ ಪಾಲ್ಗೊಂಡರೆ ಸಾಲದು. ಬದಲಿಗೆ ಬಾಹ್ಯಾಕಾಶ, ಖಗೋಳ ವಿಜ್ಞಾನ, ಅಂತರಿಕ್ಷ ಇತ್ಯಾದಿಗಳ ಬಗ್ಗೆ ತಿಳಿದುಕೊಂಡು, ಸಂಭ್ರಮಿಸಬೇಕು ಎನ್ನುವುದು ಸರಕಾರದ ಆಶಯವಾಗಿದೆ. ಹೀಗಾಗಿ ಸ್ಪರ್ಧೆ ಮತ್ತು ವಿಜೇತರಿಗೆ ಪ್ರವಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಅವರು ನುಡಿದರು.

ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿ ವ್ಯವಸ್ಥಾಪಕ ನಿರ್ದೇಶಕ ಬಸವರಾಜ ಸೇರಿದಂತೆ ಇತರ ಹಿರಿಯ ವಿಜ್ಞಾನಿಗಳು ಸಭೆಯಲ್ಲಿ ಹಾಜರಿದ್ದರು.


ಸ್ಪರ್ಧೆಯ ವಿವರ ಹೀಗಿದೆ...

ನೋಂದಣಿಗೆ ಕೊನೆ ದಿನ: ಸೆ.10

ಜಿಲ್ಲಾ ಮಟ್ಟದ ಕ್ವಿಜ್ ಸ್ಪರ್ಧೆ: ಸೆ.19ರಿಂದ 23

ಪ್ರಬಂಧಗಳನ್ನು ಅಪ್‌ಲೋಡ್‌ ಮಾಡಲು ಕೊನೆ ದಿನ: ಸೆ.20

ಜಿಲ್ಲಾ ಮಟ್ಟದ ವಿಜ್ಞಾನ ಚಿತ್ರಕಲೆ ಸ್ಪರ್ಧೆ: ಸೆ.26ರಿಂದ 30

ವಿಭಾಗ ಮಟ್ಟದ ಪೋಸ್ಟರ್ ಸ್ಪರ್ಧೆ: ಅಕ್ಟೋಬರ್ 3ರಿಂದ  7

ಜಿಲ್ಲಾ ಮಟ್ಟದ ಫಲಿತಾಂಶ ಪ್ರಕಟಣೆ: ಅಕ್ಟೋಬರ್ ಮಧ್ಯ ಭಾಗ

ರಾಜ್ಯ ಮಟ್ಟದ ಕ್ವಿಜ್‌: ಅ.17ರಿಂದ 19

ರಾಜ್ಯ ಮಟ್ಟದ ಪೋಸ್ಟರ್ ಸ್ಪರ್ಧೆ (ಆನ್‌ಲೈನ್‌): ಅ.18ರಿಂದ 20

ರಾಜ್ಯ ಮಟ್ಟದ ಫಲಿತಾಂಶ ಘೋಷಣೆ: ಅಕ್ಟೋಬರ್ ಕೊನೆಯ ವಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X