Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. 100 ಕಾಲುಸಂಕಗಳಿಗೆ 5ಕೋಟಿ ಅನುದಾನ...

100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ

ವಾರ್ತಾಭಾರತಿವಾರ್ತಾಭಾರತಿ25 Aug 2022 9:43 PM IST
share
100 ಕಾಲುಸಂಕಗಳಿಗೆ 5ಕೋಟಿ ಅನುದಾನ ಬಿಡುಗಡೆಗೆ ಅನುಮೋದನೆ: ಬಿ.ವೈ.ರಾಘವೇಂದ್ರ

ಕುಂದಾಪುರ, ಆ.25: ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ 250 ಕಾಲು ಸಂಕಗಳ ಪಟ್ಟಿ ಮಾಡಲಾಗಿದ್ದು, ಆರು ತಿಂಗಳ ಹಿಂದೆ 10 ಕೋಟಿ ರೂ. ಅನುದಾನ ಬಿಡುಗಡೆ ಮಾಡಿ ಟೆಂಡರ್ ಪ್ರಕ್ರಿಯೆ ನಡೆಸಲಾಗಿದೆ. ಇದೀಗ ಮತ್ತೆ ರಾಜ್ಯ ಲೋಕೋಪಯೋಗಿ ಇಲಾಖಾ ಸಚಿವರೊಂದಿಗೆ ಮಾತುಕತೆ ನಡೆಸಿ 100 ಕಾಲುಸಂಕಗಳಿಗೆ 5 ಕೋಟಿ ಅನುದಾನ ಬಿಡುಗಡೆಗೆ ಅನು ಮೋದನೆ ಪಡೆಯಲಾಗಿದೆ. ಕ್ಷೇತ್ರದಲ್ಲಿ ಕಾಲು ಸಂಕಗಳ ಅಭಿವೃದ್ದಿಗೆ ಇನ್ನೂ 15 ಕೋಟಿ ಅನುದಾನ ಬಿಡುಗಡೆಗೆ ಪ್ರಯತ್ನ ಮಾಡಲಾಗುವುದು ಎಂದು ಶಿವಮೊಗ್ಗ ಸಂಸದ ಬಿ.ವೈ ರಾಘವೇಂದ್ರ ತಿಳಿಸಿದ್ದಾರೆ.

ಕೊಲ್ಲೂರಿನಲ್ಲಿ ಗುರುವಾರ ಕರೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಬೈಂದೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇತ್ತೀಚೆಗೆ ಅತಿವೃಷ್ಠಿ ಯಿಂದಾಗಿ ಸಾಕಷ್ಟು ಆಸ್ತಿ-ಪಾಸ್ತಿಗಳು ಹಾನಿಯಾಗಿವೆ. ಅತಿವೃಷ್ಠಿಯಿಂದಾಗಿ ಮನೆ, ಆಸ್ತಿ, ಬೆಳೆ ಹಾನಿಯಾದವರಿಗೆ ಮತ್ತು ಮೀನುಗಾರಿಕಾ ಬೋಟು, ಬಲೆಗಳನ್ನು ಕಳೆದುಕೊಂಡವರಿಗೆ ತುರ್ತು ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ, ದೋಣಿ, ಮೀನಿನ ಬಲೆ ಹಾನಿಯಾದವರ ಸಮೀಕ್ಷೆ ನಡೆಸಿ ಕೇಂದ್ರ ಸರಕಾರದ ಪ್ರಕೃತಿ ವಿಕೋಪದ ಅಡಿಯಲ್ಲಿ ಸುಮಾರು 50 ಲಕ್ಷ ರೂ.ಗಿಂತ ಹೆಚ್ಚು ಅನುದಾನವನ್ನು ಬೈಂದೂರು ಕ್ಷೇತ್ರಕ್ಕೆ ಕೊಟ್ಟಿದ್ದೇವೆ ಎಂದರು.

ಪಿಪಿಪಿ ಮಾದರಿಯಲ್ಲಿ 228.00 ಕೋಟಿ ರೂ. ವೆಚ್ಚದಲ್ಲಿ ಅಂತರಾಷ್ಟ್ರೀಯ ಮಟ್ಟದ ಸೀ ಪ್ಲೇನ್, ಮರೀನಾ ಹಾಗೂ ಬಹುಪಯೋಗಿ ಬಂದರು ಯೋಜನೆ ಟೆಂಡರ್ ಹಂತದಲ್ಲಿದೆ. 165.00 ಕೋಟಿ ರೂ. ವೆಚ್ಚದ ಸಿದ್ದಾಪುರ ಏತ ನೀರಾವರಿ ಯೋಜನೆ ಅನುಮೋದನೆ ದೊರೆತಿದೆ. 73.71 ಕೋಟಿ ವೆಚ್ಚದಲ್ಲಿ ಸೌಕೂರು ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. 35 ಕೋಟಿ ವೆಚ್ಚದಲ್ಲಿ ಸುಬ್ಬರಾಡಿ ಕಿಂಡಿ ಅಣೆಕಟ್ಟು ಕಾಮಗಾರಿ ಪೂರ್ಣಗೊಂಡಿದ್ದು ಗೇಟ್ ಅಳವಡಿಕೆ ಕಾಮಗಾರಿ ಪ್ರಗತಿಯಲ್ಲಿದೆ. ಜೊತೆಗೆ ಮಾದರಿ ವಿದ್ಯುತ್ ಗ್ರಾಮ ಯೋಜನೆ ಅಡಿಯಲ್ಲಿ ಕಿರಿಮಂಜೇಶ್ವರ ಗ್ರಾಮದಲ್ಲಿ ಸಮಗ್ರ ವಿದ್ಯುತ್ ನಿರ್ವಹಣೆ ಯೋಜನೆ ಅಂತಿಮ ಹಂತದಲ್ಲಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಬಿಜೆಪಿ ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X