Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿ,...

ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿ, ಶಾಲೆಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿ: ಸಚಿವ ಬಿ.ಸಿ.ನಾಗೇಶ್

ವಾರ್ತಾಭಾರತಿವಾರ್ತಾಭಾರತಿ25 Aug 2022 9:50 PM IST
share
ಮುಂದಿನ ಶೈಕ್ಷಣಿಕ ವರ್ಷದಿಂದ ಅಂಗನವಾಡಿ, ಶಾಲೆಗಳಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು, ಆ. 25: ‘ಮುಂದಿನ ಶೈಕ್ಷಣಿಕ ವರ್ಷದಿಂದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಜಾರಿಗೊಳ್ಳಲಿದ್ದು, 3 ವರ್ಷ ಮೇಲ್ಪಟ್ಟ ಮಕ್ಕಳ ‘ಪೂರ್ವ ಬಾಲ್ಯಾವಸ್ಥೆ ಆರೈಕೆ ಮತ್ತು ಶಿಕ್ಷಣ’ವನ್ನು ರಾಜ್ಯದ 20 ಸಾವಿರ ಅಂಗನವಾಡಿಗಳು, ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ' ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವ ಹಾಲಪ್ಪ ಆಚಾರ್ ಘೋಷಿಸಿದ್ದಾರೆ.

ಗುರುವಾರ ಇಲ್ಲಿನ ಕೆಆರ್ ವೃತ್ತದಲ್ಲಿನ ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉಭಯ ಸಚಿವರು, ‘ದೇಶದ ಪ್ರತಿ ಮಗುವಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಅದಕ್ಕಾಗಿ ದೇಶದ ಶೈಕ್ಷಣಿಕ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆ, ಬದಲಾವಣೆ ತರಲಿರುವ ಮಹತ್ವಾಕಾಂಕ್ಷೆಯ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳಿಸುವಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಮತ್ತೊಂದು ಮಹತ್ವದ ಹೆಜ್ಜೆ ಇರಿಸಿದ್ದು, ಮುಂದಿನ ವರ್ಷದಿಂದಲೇ ಎನ್‍ಇಪಿ-2020 ಪ್ರಕಾರ, ಬುನಾದಿ ಶಿಕ್ಷಣವನ್ನು ನೀಡಲಾಗುತ್ತದೆ'ಎಂದು ಮಾಹಿತಿ ನೀಡಿದರು.

‘ಎನ್‍ಇಪಿ ಅನ್ವಯ, ‘ಪೂರ್ವ ಬಾಲ್ಯಾವಸ್ಥೆ ಆರೈಕೆ ಮತ್ತು ಶಿಕ್ಷಣ' ಪಠ್ಯಕ್ರಮ ಚೌಕಟ್ಟು ರಚನೆಗೆ ಆರು ಸಮಿತಿಗಳನ್ನು ರಚಿಸಲಾಗಿದೆ. ‘ಪಠ್ಯಕ್ರಮ ವಿನ್ಯಾಸ’, ‘ಪಠ್ಯಕ್ರಮ ಬೋಧನಾ ಮತ್ತು ಕಲಿಕಾ ಸಾಮಗ್ರಿಗಳು ಹಾಗೂ ಮೌಲ್ಯಮಾಪನ’, ‘ಸಾಮಥ್ರ್ಯ ಅಭಿವೃದ್ಧಿ’, ‘ಸಮುದಾಯ ತಲುಪುವಿಕೆ’, ‘ಮಗುವಿಗೆ ಆರಂಭಿಕ ಉತ್ತೇಜನ’, ‘ಮೇಲ್ವಿಚಾರಣೆ ಮತ್ತು ಉಸ್ತುವಾರಿ’ ವಿಷಯ ಸೇರಿ ಒಟ್ಟು ಆರು ಸಮಿತಿಗಳು ಪಠ್ಯಕ್ರಮ ಚೌಕಟ್ಟನ್ನು ಸಿದ್ಧಪಡಿಸಿವೆ. ಕೇಂದ್ರ ಶಿಕ್ಷಣ ಇಲಾಖೆಯಿಂದ ಇದೇ ಸೆಪ್ಟಂಬರ್‍ನಲ್ಲಿ ಅಂತಿಮ ಪಠ್ಯಕ್ರಮ ಚೌಕಟ್ಟು ಲಭ್ಯವಾಗುವ ನಿರೀಕ್ಷೆ ಇದೆ. ಬಳಿಕ ರಾಜ್ಯದ ಪಠ್ಯಕ್ರಮ ಚೌಕಟ್ಟನ್ನು ಅಂತಿಮಗೊಳಿಸಲಾಗುತ್ತದೆ. ಪಠ್ಯಕ್ರಮ ಚೌಕಟ್ಟಿಗೆ ತಕ್ಕಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಅಗತ್ಯ ತರಬೇತಿಯನ್ನು ಡಿಎಸ್‍ಇಆರ್‍ಟಿ ಮೂಲಕ ಶಿಕ್ಷಣ ಇಲಾಖೆಯ ಅಧೀನದ ಸಂಸ್ಥೆಗಳಲ್ಲಿ ನೀಡಲಾಗುತ್ತದೆ’ ಎಂದು ವಿವರ ನೀಡಿದರು.

‘ರಾಜ್ಯದಲ್ಲಿ 66,361 ಅಂಗನವಾಡಿ ಕೇಂದ್ರಗಳಿವೆ. ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಯಕರ್ತೆಯರ ಪೈಕಿ 732 ಜನ ಸ್ನಾತಕೋತ್ತರ ಪದವೀಧರರಿದ್ದಾರೆ. 6,017 ಪದವೀಧರರು, 14,303 ಪಿಯುಸಿ ಮತ್ತು 40,786 ಅಂಗನವಾಡಿ ಕಾರ್ಯಕರ್ತೆಯರು ಎಸ್‍ಎಸ್‍ಎಲ್‍ಸಿ ವಿದ್ಯಾರ್ಹತೆಯನ್ನು ಹೊಂದಿದ್ದಾರೆ. ಹೀಗಾಗಿ, ಎನ್‍ಇಪಿ-2020 ಪಠ್ಯಕ್ರಮದ ಕುರಿತು ತರಬೇತಿ ನೀಡಬಹುದು' ಎಂದು ಸಚಿವ ಹಾಲಪ್ಪ ಆಚಾರ್ ತಿಳಿಸಿದರು.

ಎನ್‍ಇಪಿ ಆಶಯದಂತೆ ಕಲ್ಯಾಣ ಕರ್ನಾಟಕ ಭಾಗದ 14 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ಟಾಟಾ ಫೌಂಡೇಶನ್ ಮೂಲಕ ಈಗಾಗಲೇ ತರಬೇತಿ ನೀಡಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ವಿದ್ಯಾರ್ಹತೆ ಅನುಸಾರ ಮೂರು ವಿಧದ ತರಬೇತಿ ನೀಡುವ ಗುರಿ ಹೊಂದಲಾಗಿದೆ. ಶೈಕ್ಷಣಿಕ ವರ್ಷ ಆರಂಭದ ವೇಳೆಗೆ ತರಬೇತಿಯನ್ನು ಮುಕ್ತಾಯಗೊಳಿಸಲಾಗುತ್ತದೆ. ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರ, ಆರೋಗ್ಯ, ಆರೈಕೆ ಮತ್ತು ಶಿಕ್ಷಣವನ್ನು ನೀಡಲಾಗುತ್ತಿದೆ. ಚಿಲಿಪಿಲಿ, ಚಿಲಿಪಿಲಿ ಪ್ಲಸ್ ಪಠ್ಯಕ್ರಮವನ್ನು ಅನುಷ್ಠಾನಗೊಳಿಸಲಾಗಿದೆ' ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X