ಡಾ. ಎಂ.ಡಿ. ಹೆಗ್ಡೆ
ಉಡುಪಿ, ಆ.25: ಉಡುಪಿ ದೊಡ್ಡಣಗುಡ್ಡೆ ನಿವಾಸಿ ಡಾ.ಎಂ.ಡಿ.ಹೆಗ್ಡೆ ಅವರು ಗುರುವಾರ ದೊಡ್ಡಣಗುಡ್ಡೆಯಲ್ಲಿರುವ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 93 ವರ್ಷ ವಯಸ್ಸಾಗಿತ್ತು. ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.
ಆರೋಗ್ಯ ಇಲಾಖೆಯ ಪಂಜ, ಬೆಳ್ಳಾರೆ, ಸುಬ್ರಹ್ಮಣ್ಯ ಹಾಗೂ ಮಲ್ಪೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸುಮಾರು 30 ವರ್ಷಗಳಿಗೂ ಅಧಿಕ ಕಾಲ ಆರೋಗ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಇವರು, ದೊಡ್ಡಣಗುಡ್ಡೆಯ ಲ್ಲಿರುವ ಕರ್ನಾಟಕ ಗೃಹಮಂಡಳಿ ನಿವಾಸಿಗರ ಸಂಘದ ಅಧ್ಯಕ್ಷರಾಗಿದ್ದರು. ಇವರು ಜನಾನುರಾಗಿ ವೈದ್ಯರಾಗಿ ಜನಪ್ರಿಯರಾಗಿದ್ದರು.
ಡಾ.ಎಂ.ಡಿ.ಹೆಗ್ಡೆ ಅವರ ನಿಧನಕ್ಕೆ ಕರ್ನಾಟಕ ಗೃಹ ಮಂಡಳಿ ನಿವಾಸಿಗರ ಸಂಘದ ಅಧ್ಯಕ್ಷ ಕುತ್ಪಾಡಿ ವಿಠಲ ಗಾಣಿಗ, ಉಪಾಧ್ಯಕ್ಷ ಸುಬ್ರಹ್ಮಣ್ಯ ಶೇರೆಗಾರ್, ಕಾರ್ಯದರ್ಶಿ ಎನ್.ರಾಮ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Next Story