Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಜ್ಯದಲ್ಲಿ 10 ಲಕ್ಷ ಯುವಜನರಿಗೆ ಕೌಶಲ್ಯ...

ರಾಜ್ಯದಲ್ಲಿ 10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ: ಡಾ.ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ26 Aug 2022 2:52 PM IST
share
ರಾಜ್ಯದಲ್ಲಿ 10 ಲಕ್ಷ ಯುವಜನರಿಗೆ ಕೌಶಲ್ಯ ತರಬೇತಿ: ಡಾ.ಅಶ್ವತ್ಥನಾರಾಯಣ

ಬೆಂಗಳೂರು, ಆ.26: ರಾಜ್ಯದ ಯುವಜನರಿಗೆ ಸೂಕ್ತ ಉದ್ಯೋಗಾವಕಾಶಗಳು ಸಿಗುವಂತಾಗಬೇಕು ಎನ್ನುವ ಗುರಿಯೊಂದಿಗೆ ಈವರಗೆ 10 ಲಕ್ಷಕ್ಕೂ ಹೆಚ್ಚು ಯುವಜನರಿಗೆ ಕೌಶಲ್ಯ ತರಬೇತಿ ನೀಡಲಾಗಿದೆ ಎಂದು ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಶುಕ್ರವಾರ ಹೇಳಿದ್ದಾರೆ.

ಇಲ್ಲಿನ ಸರಕಾರಿ ರಾಮನಾರಾಯಣ ಚೆಲ್ಲಾರಾಂ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಏರ್ಪಡಿಸಿದ್ದ ಉದ್ಯೋಗ ಮೇಳ 'ಪ್ರಗತಿ ಪಥ' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಈ ಉದ್ಯೋಗ ಮೇಳದಲ್ಲಿ 200ಕ್ಕೂ ಹೆಚ್ಚು ಕಂಪೆನಿಗಳು ಭಾಗವಹಿಸಿವೆ. ಇದರಲ್ಲಿ 5 ಸಾವಿರಕ್ಕೂ ಹೆಚ್ಚು ಮಂದಿ ಆನ್ ಲೈನ್ ನೋಂದಣಿ ಮಾಡಿಕೊಂಡಿದ್ದು ಪಾಲ್ಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಯುವಜನರನ್ನು ಉದ್ಯೋಗಗಳಿಗೆ ಅರ್ಹರನ್ನಾಗಿ ಮಾಡಲು ಸರಕಾರ ಸಿದ್ಧವಾಗಿದೆ. ಹೀಗಾಗಿ ಪದವಿ ಕೋರ್ಸುಗಳಲ್ಲಿ ಡಿಜಿಟಲ್, ಹಣಕಾಸು ಮತ್ತು ತಂತ್ರಜ್ಞಾನ ಸಾಕ್ಷರತೆಗಳನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅವರು ವಿವರಿಸಿದರು.

ಸೂಕ್ತ ವಿದ್ಯಾಭ್ಯಾಸ, ತಕ್ಕ ಅರ್ಹತೆ ಮತ್ತು ಆಧುನಿಕ ಕೌಶಲ್ಯಗಳು ಇದ್ದರೆ ಅವಕಾಶಗಳಿಗೆ ಬರವಿಲ್ಲ. ವಾಸ್ತವವಾಗಿ ಉದ್ಯಮರಂಗವು ಬಯಸುತ್ತಿರುವಷ್ಟು ನುರಿತ ಮಾನವ ಸಂಪನ್ಮೂಲವನ್ನು ಪೂರೈಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ನುಡಿದರು.

ನೆಪಮಾತ್ರದ ಪದವಿಗಳನ್ನು ಬಿಟ್ಟು ಸಮಕಾಲೀನ ಅಗತ್ಯಕ್ಕೆ ತಕ್ಕಂತೆ ಉನ್ನತ ಶಿಕ್ಷಣ ಪಠ್ಯಕ್ರಮವನ್ನು ಪರಿಷ್ಕರಿಸಲಾಗಿದೆ. ಈಗಾಗಲೇ ವಿನೂತನ ಮತ್ತು ವೈಜ್ಞಾನಿಕ ಮೌಲ್ಯಮಾಪನ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ಅವರು ಹೇಳಿದರು.

ಬೆಂಗಳೂರು ಮತ್ತು ಕರ್ನಾಟಕ ಇಂದು ಜಗತ್ತಿನಲ್ಲಿ ಮುಂಚೂಣಿಯಲ್ಲಿವೆ. ಇದಕ್ಕೆ ಇಲ್ಲಿರುವ ರಚನಾತ್ಮಕ ವಾತಾವರಣವೇ ಕಾರಣ ಎಂದು ಸಚಿವರು ಅಭಿಪ್ರಾಯ ಪಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ರಿಝ್ವಾನ್ ಅರ್ಷದ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು.

ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಡಿ.ಎಲ್.ಕೃಷ್ಣಮೂರ್ತಿ, ಕಾಲೇಜು ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕಿ ಡಾ.ಎಸ್.ಶೈಲಜಾ, ರೋಟರಿ ಕ್ಲಬ್ ಆಫ್ ಬೆಂಗಳೂರು ಅಧ್ಯಕ್ಷ ಸಂಜಯ್ ಉದಾನಿ ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಚಂದ್ರಶೇಖರ್ ಸ್ವಾಗತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X