ಕಲಬುರಗಿ: ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಬಂಧಿತ ಆರೋಪಿ ಮೃತ್ಯು
ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನ; ಆರೋಪ
ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳಲು ಯತ್ನಿಸಿ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿಯೋರ್ವ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ.
ನಗರದ ಹಮಾಲವಾಡಿ ಬಡಾವಣೆ ನಿವಾಸಿ ಮುನ್ನಾ ಅಲಿಯಾಸ್ ಶೇಖ್ ಸುಹೇಲ್ ಮೃತ ಆರೋಪಿ ಎಂದು ತಿಳಿದುಬಂದಿದೆ. ದರೋಡೆ ಪ್ರಕರಣದಲ್ಲಿ ಈತನನ್ನು ಬ್ರಹ್ಮಪುರ ಠಾಣೆ ಪೊಲೀಸರು ಬಂಧಿಸಿದ್ದರು. ನ್ಯಾಯಾಲಯದ ಮುಂದೆ ಹಾಜರುಪಡಿಸುವ ಮುನ್ನ ಕೋವಿಡ್ ತಪಾಸಣೆಗೆ ಕರೆದುಕೊಂಡು ಹೋದ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.
Next Story