Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲೈಸನ್ಸ್‌ರಾಜ್‍ಗೆ ವಿರೋಧ; ಬೀಡಿ,...

ಲೈಸನ್ಸ್‌ರಾಜ್‍ಗೆ ವಿರೋಧ; ಬೀಡಿ, ಸಿಗರೇಟ್ ವ್ಯಾಪಾರಿಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Aug 2022 3:36 PM IST
share
ಲೈಸನ್ಸ್‌ರಾಜ್‍ಗೆ ವಿರೋಧ; ಬೀಡಿ, ಸಿಗರೇಟ್ ವ್ಯಾಪಾರಿಗಳಿಂದ ಪ್ರತಿಭಟನೆ

ಮಂಗಳೂರು: ಕರ್ನಾಟಕ ಮುನ್ಸಿಪಾಲಿಟಿ (ಸಿಗರೇಟುಗಳು ಮತ್ತಿತರ ತಂಬಾಕು ಉತ್ಪನ್ನ ಮಾರಾಟ ಸ್ಥಳಗಳ ನಿಯಂತ್ರಣಗಳು ಮತ್ತು ತನಿಖೆ) ಮಾದರಿ ಬೈಲಾಗಳು- 2020' ರ ಅನುಷ್ಠಾನವನ್ನು ವಿರೋಧಿಸಿ, ಫೆಡರೇಷನ್ ಆಫ್ ರೀಟೇಲರ್ ಅಸೋಸಿಯೇಷನ್ ಆಫ್ ಇಂಡಿಯಾ‌ (ಎಫ್‍ಆರ್‌ಎಐ) ಕರ್ನಾಟಕ ಚಾಪ್ಟರ್ ವತಿಯಿಂದ ನಗರದ ಕ್ಲಾಕ್‍ ಟವರ್ ಬಳಿ ಶನಿವಾರ ಪ್ರತಿಭಟನೆ ನಡೆಯಿತು.

ದೊಡ್ಡ ಪ್ರಮಾಣದಲ್ಲಿ ಅಂಗಡಿ ಮಾಲಕರು ಒಗ್ಗೂಡಿ ಈ ಕಾನೂನಿನ ವಿರುದ್ಧ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕೋವಿಡ್ ಲಾಕ್‍ಡೌನ್‍ಗಳು ಮತ್ತಿತರ ನಿರ್ಬಂಧಗಳಿಂದ ಕಳೆದ ಕೆಲ ವರ್ಷಗಳಿಂದ ಈಗಾಗಲೇ ಸಾಕಷ್ಟು ಆರ್ಥಿಕ ಹಿನ್ನಡೆ ಅನುಭವಿಸಿದ ಲಕ್ಷಾಂತರ ಮಂದಿ ಸಣ್ಣ ವ್ಯಾಪಾರಿಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಈ ಕಾನೂನು ವಿನಾಶಕಾರಿ. ಈ ಕಠೋರ ಕಾನೂನು ಅಧಿಕಾರಿಗಳಿಂದ ಶೋಷಣೆ ಮತ್ತು ಭ್ರಷ್ಟಾಚಾರಕ್ಕೆ ಕಾರಣವಾಗುತ್ತದೆ ಎಂದು ಪ್ರತಿಭಟನಾಕಾರರು ಹೇಳಿದರು.

ಕರ್ನಾಟಕ ರಾಜ್ಯ ಸಣ್ಣ ಬೀಡಿ- ಸಿಗರೇಟು ಮಾರಾಟಗಾರರ ಸಂಘದ ವಕ್ತಾರ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, "ಜಾಹೀರಾತು ಮತ್ತು ವ್ಯಾಪಾರ ಹಾಗೂ ವಾಣಿಜ್ಯ, ಉತ್ಪಾದನೆ, ಪೂರೈಕೆ ಮತ್ತು ವಿತರಣೆಯ ನಿಷೇಧ ಕಾಯ್ದೆ- 2003 (ಕೋಪ್ಟಾ) ಅನ್ವಯ ನಮ್ಮ ಸದಸ್ಯರು ಈಗಾಗಲೇ ಅಧಿಕಾರಿಗಳಿಂದ ಕಿರುಕುಳಕ್ಕೆ ಒಳಗಾಗುತ್ತಿದ್ದು ಅವರ ಅನಕ್ಷರತೆ ಹಾಗೂ ಅಜ್ಞಾನದ ಲಾಭ ಪಡೆಯುತ್ತಾರೆ. ಬೈಲಾದ ಕರಡಿನ ಪ್ರಕಾರ ತಂಬಾಕು ಉತ್ಪನ್ನ ಮಾರಾಟಗಾರರು ಲೈಸೆನ್ಸ್ ಪಡೆಯಬೇಕು ಮತ್ತು ಪ್ರತಿವರ್ಷ ಲೈಸನ್ಸ್ ನವೀಕರಣ ಮಾಡಿಕೊಳ್ಳಬೇಕು. ಚಿಲ್ಲರೆ ವ್ಯಾಪಾರಿಗಳಿಗೆ ಲೈಸನ್ಸ್ ಪ್ರದರ್ಶಿಸುವುದು ಮತ್ತು ಸಲಹಾ ಪುಸ್ತಕ ಇರಿಸುವುದು ಕಡ್ಡಾಯ. ತಪ್ಪಿದಲ್ಲಿ ದೊಡ್ಡ ಪ್ರಮಾಣದ ದಂಡ ವಿಧಿಸಲೂ ಅವಕಾಶವಿದೆ ಎಂದು ಹೇಳಿದರು.

ಕರಡು ಮಾದರಿ ಬೈಲಾಗಳು ಲೈಸನ್ಸ್ ಪಡೆದ ಅಂಗಡಿಯಲ್ಲಿ ಯಾವುದೇ `ಅಹಿತಕರ ಘಟನೆ' ನಡೆದಲ್ಲಿ ಅದನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಹಾಗೂ ಈ ಸಮಸ್ಯೆ ಪರಿಹಾರವಾಗುವವರೆಗೆ ಯಾರೂ ಅಂಗಡಿಯ ಆವರಣ ಪ್ರವೇಶಿಸುವಂತಿಲ್ಲ. ಆದರೆ ಅಹಿತಕರ ಘಟನೆ ಎನ್ನುವುದನ್ನು ವ್ಯಾಖ್ಯಾನಿಸದೇ ಇರುವುದರಿಂದ ಇದರ ಉದ್ದೇಶ ಸಣ್ಣ ವ್ಯಾಪಾರಿಗಳಿಗೆ ಕಿರುಕುಳ ನೀಡುವುದೇ ಹೊರತಾಗಿ ಬೇರೇನೂ ಇಲ್ಲ. ಸಣ್ಣ ವ್ಯಾಪಾರಿಗಳು ಲೈಸನ್ಸ್ ಪಡೆಯಲು ಮತ್ತು ನವೀಕರಿಸಲು ಖರ್ಚು ಮಾಡುವುದು ಅಸಾಧ್ಯ ಎಂದು ಪ್ರತಿಪಾದಿಸಿದರು.

ಲಕ್ಷಾಂತರ ಮಂದಿಯ ಆದಾಯ ನಷ್ಟಕ್ಕೆ ಕಾರಣವಾಗುವ ಅಂತಹ ಕಾನೂನುಗಳನ್ನು ಅನುಷ್ಠಾನಕ್ಕೆ ತರುವ ಮುನ್ನ ರಾಜ್ಯ ಸರ್ಕಾರವು ಪರ್ಯಾಯ ಜೀವನೋಪಾಯಗಳನ್ನು ಪೂರೈಸಬೇಕು ಎಂದು ಒತ್ತಾಯಿಸಿದರು.

ಕೋವಿಡ್ ಲಾಕ್‍ಡೌನ್‍ನ ಅಪಾರ ಆರ್ಥಿಕ ಸಂಕಷ್ಟ ಅನುಭವಿಸಿದ ನಂತರ ಈ ಹೊಸ ಕಾನೂನು ಈ ವ್ಯಾಪಾರಿಗಳಿಗೆ ಆಘಾತ ತಂದಿದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಲೈಸನ್ಸ್ ಪಡೆಯುವ ಪ್ರಸ್ತಾವಿತ ಕಾನೂನನ್ನು ತಂಬಾಕು ವಿರೋಧಿಸುವ ಎನ್‍ಜಿಒಗಳ ಒತ್ತಡದಿಂದ ತರಲಾಗುತ್ತಿದ್ದು ಪಟ್ಟಭದ್ರ ಹಿತಾಸಕ್ತಿಗಳು ತಂಬಾಕು ಚಿಲ್ಲರೆ ವ್ಯಾಪಾರವನ್ನು ವಿದೇಶಿ ಕಂಪನಿಗಳು/ ಸೂಪರ್‍ಮಾರ್ಕೆಟ್‍ಗಳು/ ಮಾಲ್‍ಗಳಿಗೆ ವರ್ಗಾಯಿಸುವ ಮೂಲಕ ಲಕ್ಷಾಂತರ ಸಣ್ಣ ವ್ಯಾಪಾರಿಗಳ ಜೀವನೋಪಾಯಕ್ಕೆ ಕುತ್ತು ತರುತ್ತಿವೆ ಎಂಬ ಗಂಭೀರ ಆರೋಪ ಮಾಡಿದರು.

ಮುಖ್ಯಮಂತ್ರಿಗಳು ರಕ್ಷಣ ಮಧ್ಯಪ್ರವೇಶಿಸಿ, ಹೊಸ ನಿಯಮಾವಳಿ ಜಾರಿ ಮಾಡದಂತೆ ನಗರಾಭಿವೃದ್ಧಿ ಇಲಾಖೆಗೆ ಸೂಚಿಸಬೇಕು ಮತ್ತು ಕೋವಿಡ್ ಪರಿಣಾಮವಾಗಿ ಬಂದಿರುವ ಆರ್ಥಿಕ ಸಂಕಷ್ಟದಿಂದ ಹೊರಬರಲು ಸಣ್ಣ ವ್ಯಾಪಾರಿಗಳಿಗೆ ನೆರವಾಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಸಣ್ಣ ಬೀಡಿ- ಸಿಗರೇಟು ಮಾರಾಟಗಾರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎನ್.ಕೆ.ಅಬೂಬಕ್ಕರ್, ಕಾರ್ಮಿಕ ಮುಖಂಡರಾದ ಗಿರಿ ಅತ್ತಾವರ, ಅಬ್ದುಲ್ ರಹಮಾನ್, ಸತೀಶ್ ಮಲ್ಯ, ಅಶ್ವಿನಿ, ರೇಷ್ಮಾ, ಸುಕುಮಾರ್ ತೊಕ್ಕೊಟ್ಟು, ಸಂತೋಷ್, ನೌಶಾದ್, ಹನೀಫ್, ಬಿ.ಕೆ.ಇಮ್ತಿಯಾಝ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X