Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕುಂಟುನೆಪಗಳನ್ನು ಮುಂದಿಟ್ಟು ಆಝಾದ್ ಪಕ್ಷ...

ಕುಂಟುನೆಪಗಳನ್ನು ಮುಂದಿಟ್ಟು ಆಝಾದ್ ಪಕ್ಷ ತ್ಯಜಿಸಿ ಹೋಗಿರುವುದು ದುರದೃಷ್ಟಕರ: ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ27 Aug 2022 6:16 PM IST
share
ಕುಂಟುನೆಪಗಳನ್ನು ಮುಂದಿಟ್ಟು ಆಝಾದ್ ಪಕ್ಷ ತ್ಯಜಿಸಿ ಹೋಗಿರುವುದು ದುರದೃಷ್ಟಕರ: ಸಿದ್ದರಾಮಯ್ಯ

ಬೆಂಗಳೂರು, ಆ. 27: ‘ಹಿರಿಯ ಮುಖಂಡ ಗುಲಾಂ ನಬಿ ಆಝಾದ್ (Ghulam Nabi Azad) ಅವರು ರಾಜೀನಾಮೆ ಹಾಗೂ ಅವರ ರಾಜೀನಾಮೆ ಪತ್ರದ ಒಕ್ಕಣೆಯನ್ನು ನೋಡಿದರೆ ತಮಗೆ ಆಗಿರುವ ನೋವನ್ನು ವ್ಯಕ್ತಪಡಿಸುವ ಸದುದ್ದೇಶಕ್ಕಿಂತಲೂ, ನಮ್ಮ ಪ್ರಮುಖ ಎದುರಾಳಿ(ಬಿಜೆಪಿ) ಪಕ್ಷವನ್ನು ಖುಷಿಪಡಿಸುವ ದುರುದ್ದೇಶ ಇದ್ದಂತೆ ಕಾಣುತ್ತಿದೆ' ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah) ತಿಳಿಸಿದ್ದಾರೆ.

ಶನಿವಾರ ಈ ಸಂಬಂಧ ಪತ್ರಿಕಾ ಪ್ರಕಟನೆ ನೀಡಿರುವ ಸಿದ್ದರಾಮಯ್ಯ, ‘ಕೋಟ್ಯಂತರ ಕಾರ್ಯಕರ್ತರ ಬಲ ಹೊಂದಿರುವ ಕಾಂಗ್ರೆಸ್ ಪಕ್ಷದ ಮೇಲೆ ಒಬ್ಬ ನಾಯಕರ ನಿರ್ಗಮನ ಯಾವ ಪರಿಣಾಮವನ್ನು ಬೀರದು. ಆಡಳಿತ ಪಕ್ಷ ಸರ್ವಾಧಿಕಾರಿಯ ರೂಪಪಡೆದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನೆ ಕೆಡವಿ ಹಾಕಲು ಹೊರಟಿರುವ ಈ ದುರಿತ ಕಾಲದಲ್ಲಿ ದೇಶವನ್ನು ಉಳಿಸುವ ದೊಡ್ಡ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ' ಎಂದು ಹೇಳಿದ್ದಾರೆ.

‘ಒಬ್ಬ ವ್ಯಕ್ತಿಯ ನಿರ್ಗಮನದಿಂದ ವಿಚಲಿತರಾಗದೆ ದೇಶ ಉಳಿಸುವ ಕರ್ತವ್ಯವನ್ನು ನಾವೆಲ್ಲರೂ ಜವಾಬ್ದಾರಿಯಿಂದ, ಸಂಘಟಿತರಾಗಿ ನಿಭಾಯಿಸಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಕಟಿಬದ್ಧರಾಗಬೇಕೆಂದು ಮನವಿ ಮಾಡುತ್ತೇನೆ. ಆಝಾದ್, ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ. ಐದು ದಶಕಗಳ ಕಾಲ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಪಕ್ಷವನ್ನು ಕಟ್ಟಿ ಬೆಳೆಸಲು ನೀಡಿರುವ ಕೊಡುಗೆಯನ್ನು ಸ್ಮರಿಸುತ್ತಲೇ, ಅವರ ಈ ದಿಢೀರ್ ನಿರ್ಧಾರವನ್ನು ಖಂಡಿಸಬೇಕಾಗಿದೆ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದ ಪಕ್ಷ ಕಷ್ಟದ ದಿನಗಳಲ್ಲಿದೆ. ಇದಕ್ಕಿಂತಲೂ ಮುಖ್ಯವಾಗಿ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ಸಂವಿಧಾನದ ಒಂದೊಂದು ಸ್ತಂಭಗಳೆ ನಮ್ಮ ಕಣ್ಣೆದುರಿಗೆ ಉರುಳಿ ಬೀಳುತ್ತಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳನ್ನು ಗುರಿಯಾಗಿಟ್ಟುಕೊಂಡು ಹಲ್ಲೆ-ದೌರ್ಜನ್ಯಗಳು ನಡೆಯುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಆಝಾದ್‍ರಂತಹವರ ಅಪಾರ ಅನುಭವ ಮತ್ತು ಸಂಘಟನಾ ಸಾಮಥ್ರ್ಯ ಹೊಂದಿರುವ ನಾಯಕರ ಅಗತ್ಯ ಪಕ್ಷಕ್ಕೆ ಮಾತ್ರವಲ್ಲ ದೇಶಕ್ಕೂ ಇದೆ ಎನ್ನುವುದನ್ನು ನಿರಾಕರಿಸಲಾಗದು' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಐದು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು ಕಾಂಗ್ರೆಸ್ ಪಕ್ಷದಲ್ಲಿ ಕಳೆದಿರುವ ಗುಲಾಂ ನಬೀ ಆಝಾದ್‍ರಿಗೆ ಕಾಂಗ್ರೆಸ್ ನೀಡಿರುವ ಕೊಡುಗೆ ಅಪಾರವಾದುದು, ಅದೇ ರೀತಿ ಕಾಂಗ್ರೆಸ್ ಪಕ್ಷಕ್ಕೂ ಅವರ ಕೊಡುಗೆಯನ್ನು ಅಲ್ಲಗಳೆಯಲಾಗದು. ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಸೇರಿ ನಾಲ್ವರು ಪ್ರಧಾನಿಗಳ ಸಂಪುಟದಲ್ಲಿ ದೀರ್ಘಕಾಲ ಸಚಿವರಾಗಿದ್ದ ಆಝಾದ್, ಪಕ್ಷದ ವಿವಿಧ ಘಟಕಗಳಲ್ಲಿ ಪ್ರಮುಖ ಪದಾಧಿಕಾರಿಯಾಗಿ, ನೀತಿ-ನಿರ್ಧಾರಗಳನ್ನು ಕೈಗೊಳ್ಳುವ ಸಂಸದೀಯ ಮಂಡಳಿ, ಕಾರ್ಯಕಾರಿ ಸಮಿತಿ ಮತ್ತು ಚುನಾವಣಾ ಸಮಿತಿಗಳಲ್ಲಿ ಸದಸ್ಯರಾಗಿ ಕೆಲಸ ಮಾಡುವ ಅವಕಾಶವನ್ನು ಪಡೆದಿದ್ದರು' ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

‘ಇದೇ ರೀತಿ ಜಮ್ಮು-ಕಾಶ್ಮೀರ ರಾಜ್ಯದ ಮುಖ್ಯಮಂತ್ರಿಗಳಾಗಿದ್ದವರು ಮತ್ತು 7 ವರ್ಷಗಳ ಕಾಲ ರಾಜ್ಯಸಭೆಯ ವಿಪಕ್ಷ ನಾಯಕರಾಗಿದ್ದರು. ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಝಾದ್ ಪಡೆದಿದ್ದಾರೆ. ಅವರಷ್ಟೇ ದೀರ್ಘಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಇಷ್ಟೊಂದು ಅವಕಾಶಗಳನ್ನು ಪಡೆದಿರುವುದು ಅಪರೂಪ. ಪಕ್ಷ ಖಂಡಿತ ಈಗ ಕಷ್ಟದ ಕಾಲದಲ್ಲಿದೆ. ಪಕ್ಷದ ಒಳ್ಳೆಯ ದಿನಗಳಲ್ಲಿ ಅದರ ಜೊತೆ ಗುರುತಿಸಿಕೊಂಡು ಎಲ್ಲ ಅವಕಾಶಗಳನ್ನು ಪಡೆದ ಯಾವನೇ ವ್ಯಕ್ತಿ ಪಕ್ಷದ ಕಷ್ಟದ ಕಾಲದಲ್ಲಿ ಅದರ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯ. ಆದರೆ ಆಝಾದ್ ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ಪಕ್ಷವನ್ನು ತ್ಯಜಿಸಿ ಹೋಗಿರುವುದು ಅತ್ಯಂತ ದುರದೃಷ್ಟಕರ ಬೆಳವಣಿಗೆ' ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

‘2004ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿದಾಗ ಸೋನಿಯಾಗಾಂಧಿಯವರು ಮನಸ್ಸು ಮಾಡಿದ್ದರೆ ಸುಲಭದಲ್ಲಿ ಪ್ರಧಾನಿಯಾಗಬಹುದಿತ್ತು. ಆದರೆ, ಅವರು ಮನೆ ಬಾಗಿಲಿಗೆ ಬಂದಿದ್ದ ಅವಕಾಶವನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಮಾತ್ರವಲ್ಲ ವಿಶ್ವದ ಇತಿಹಾಸದಲ್ಲಿಯೇ ಅಪರೂಪದ ಘಟನೆ' ಎಂದು ಸಿದ್ದರಾಮಯ್ಯ ಸ್ಮರಿಸಿದ್ದಾರೆ.

ಇದನ್ನೂ ಓದಿ... ಆರೆಸ್ಸೆಸ್, ಬಿಜೆಪಿಗೆ ಹೆದರಿ ಗುಲಾಂ ನಬಿ ಆಝಾದ್ ರಾಜೀನಾಮೆ: ಮಲ್ಲಿಕಾರ್ಜುನ ಖರ್ಗೆ

‘2004ರಲ್ಲಿಯೇ ಮೊದಲ ಬಾರಿ ಲೋಕಸಭೆ ಪ್ರವೇಶಿಸಿದ್ದ ರಾಹುಲ್ ಗಾಂಧಿಯವರು ಇಚ್ಛೆ ಪಟ್ಟಿದ್ದರೆ ಕೇಂದ್ರದಲ್ಲಿ ಸಚಿವರಾಗಬಹುದಿತ್ತು. ಅವರನ್ನು ಯಾರೂ ಬೇಡ ಎಂದು ಹೇಳುತ್ತಿರಲಿಲ್ಲ. ಆದರೆ, ಅಧಿಕಾರಕ್ಕಾಗಿ ಆಸೆ ಪಡದೆ ಪಕ್ಷಕ್ಕಾಗಿ ದುಡಿಯುವ ನಿರ್ಧಾರ ಕೈಗೊಂಡ ರಾಹುಲ್ ಅವರು ಹತ್ತು ವರ್ಷಗಳ ಯುಪಿಎ ಸರಕಾರದ ಕಾಲದಲ್ಲಿ ಸಚಿವರಾಗದೆ ಪಕ್ಷದ ಬಲವರ್ಧನೆಗೆ ದುಡಿದದ್ದನ್ನು ದೇಶ ನೋಡಿದೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ರಾಹುಲ್ ಗಾಂಧಿಯವರು ತಾವು ಸಚಿವರಾಗದೆ, ಹಿರಿಯರಾದ ಗುಲಾಂ ನಬಿ ಆಝಾದ್ ಅವರಂತಹವರಿಗೆ ಅವಕಾಶವನ್ನು ಮಾಡಿಕೊಟ್ಟಿದ್ದರು. ಈಗ ಇದೇ ಆಜಾದ್ ಅವರು ರಾಹುಲ್ ಗಾಂಧಿಯವರ ಮೇಲೆ ವೈಯಕ್ತಿಕ ಮಟ್ಟದ ದಾಳಿಗಿಳಿದಿರುವುದು ಖಂಡನೀಯ. ಗೆಲುವಿಗೆ ಹಲವಾರು ತಂದೆಗಳಿರುತ್ತಾರೆ, ಸೋಲು ಅನಾಥ. ಕಾಂಗ್ರೆಸ್ ಪಕ್ಷ ಗೆಲುವಿನ ಹಾದಿಯಲ್ಲಿರುವಾಗ ಸರಕಾರ ಮತ್ತು ಪಕ್ಷದಲ್ಲಿ ಅಧಿಕಾರವನ್ನು ಅನುಭವಿಸಿದ್ದ ಗುಲಾಂ ನಬಿ ಆಝಾದ್ ಅವರು ಈಗ ಪಕ್ಷ ಕಷ್ಟದಲ್ಲಿರುವಾಗ ಅದರ ದೂಷಣೆಗೆ ಇಳಿದಿರುವುದು ಅವರ ವಯಸ್ಸು ಮತ್ತು ಅನುಭವಕ್ಕೆ ತಕ್ಕುದಾದ ನಡೆ ಅಲ್ಲ' ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಅಜ್ಜ ಪಂಡಿತ ಜವಾಹರಲಾಲ್ ನೆಹರೂ ಅವರಂತೆ ಕಟ್ಟಾ ಪ್ರಜಾಪ್ರಭುತ್ವವಾದಿಯಾಗಿರುವ ರಾಹುಲ್ ಗಾಂಧಿಯವರು ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇರಬೇಕೆಂದು ಪ್ರತಿಪಾದಿಸುತ್ತಾ ಬಂದಿದ್ದಾರೆ. ಪಕ್ಷಕ್ಕೆ ಸಂಬಂಧಿಸಿದ ನಿರ್ಧಾರವನ್ನು ಚರ್ಚೆ-ಮಾತುಕತೆಯ ಮೂಲಕ ಅವರು ಎಲ್ಲರ ಅಭಿಪ್ರಾಯವನ್ನು ಪಡೆದು ಕೈಗೊಳ್ಳುತ್ತಾ ಬಂದಿದ್ದಾರೆ. ಯುವಕಾಂಗ್ರೆಸ್ ಪಕ್ಷದ ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ನಿರ್ಧಾರವೇ ಅವರ ಪ್ರಜಾತಾಂತ್ರಿಕ ನಡವಳಿಕೆಗೆ ಸಾಕ್ಷಿ' ಎಂದು ಅವರು ಟೀಕಿಸಿದ್ದಾರೆ.

‘ಬದಲಾಗಿರುವ ಕಾಲ ಮತ್ತು ತಲೆಮಾರಿಗೆ ಪ್ರಸ್ತುತವಾಗುವ ರೀತಿಯಲ್ಲಿ ಪಕ್ಷವನ್ನು ಕಟ್ಟುವ ಪ್ರಯತ್ನವನ್ನು ರಾಹುಲ್ ಮಾಡುತ್ತಾ ಬಂದಿದ್ದಾರೆ. ಪಕ್ಷಕ್ಕೆ ಹೊಸರಕ್ತ ತುಂಬುವ ಪ್ರಯತ್ನದಲ್ಲಿ ಅನಿವಾರ್ಯವಾಗಿ ಹಳೆಯ ತಲೆಗಳನ್ನು ಬದಲಾವಣೆ ಮಾಡುವುದು ಅನಿವಾರ್ಯವಾಗಿತ್ತು. ಈ ಬದಲಾವಣೆ ಅವರ ವೈಯಕ್ತಿಕ ನಿರ್ಧಾರವಾಗದೆ ಪಕ್ಷದ ಒಟ್ಟು ನಿರ್ಧಾರವಾಗಿತ್ತು ಎನ್ನುವುದನ್ನು ಪಕ್ಷದೊಳಗಿನ ನಾಯಕರೆಲ್ಲರೂ ಬಲ್ಲರು' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

‘ಕಾಂಗ್ರೆಸ್ ಪಕ್ಷವನ್ನು ತೊರೆದು ಅವರ ಪಾಡಿಗೆ ಅವರು ಹೋಗಿ ಬಿಟ್ಟಿದ್ದರೆ ಅವರಿಗೆ ಶುಭಕೋರಿ ಬೀಳ್ಕೊಡಬಹುದಿತ್ತೇನೋ? ಆದರೆ, ಅವರು ತಮ್ಮ ನಿರ್ಗಮನದ ಜೊತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ ವಿರುದ್ದ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ, ಇದನ್ನು ಕಾಂಗ್ರೆಸ್ ಪಕ್ಷದಲ್ಲಿರುವ ಯಾರೂ ಒಪ್ಪಲು ಸಾಧ್ಯವೇ ಇಲ್ಲ' 

-ಸಿದ್ದರಾಮಯ್ಯ ವಿರೋಧ ಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X