Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ...

ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಿಸಲಾಗುವುದು: ಸಚಿವ ವಿ ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ27 Aug 2022 7:06 PM IST
share
ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಿಸಲಾಗುವುದು: ಸಚಿವ ವಿ ಸೋಮಣ್ಣ

ಬೆಳ್ತಂಗಡಿ; ಪ್ರವಾಸೋದ್ಯಮ ಅಭಿವೃದ್ಧಿಯ ದೃಷ್ಟಿಯಿಂದ ಹಾಗೂ ಶ್ರೀ ಕ್ಷೇತ್ರಕ್ಕೆ ಬರುವ ಯಾತ್ರಿಕರಿಗೆ ಪ್ರಯೋಜನವಾಗುವಂತೆ ಧರ್ಮಸ್ಥಳದಲ್ಲಿ ಸಣ್ಣ ವಿಮಾನ ನಿಲ್ದಾಣ ನಿರ್ಮಿಸುವುದಾಗಿ ರಾಜ್ಯ ಸರಕಾರದ ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ವಿ ಸೋಮಣ್ಣ ಹೇಳಿದರು.

ಅವರು ಬೆಳ್ತಂಗಡಿಯಲ್ಲಿ ವಸತಿ ಇಲಾಖೆಯಿಂದ ತಾಲೂಕಿನ ಫಲಾನುಭಾವಿಗಳಿಗೆ ಮಂಜೂರಾಗಿರುವ ಮನೆಗಳ ಆದೇಶ ಪತ್ರ ಶನಿವಾರ ವಿತರಿಸಿ ಮಾತನಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ನೂರು ಎಕ್ರೆ ಜಮೀನು ಅಗತ್ಯವಿದ್ದು ಸುಮಾರು ನೂರು ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದೆ. ಏಕಕಾಲದಲ್ಲಿ ನಾಲ್ಕು ವಿಮಾನಗಳಿಗೆ ಅವಕಾಶವಿರುವ ವಿಮಾನ ನಿಲ್ದಾಣ ನಿರ್ಮಿಸಲಾಗುವುದು.

ಈ ಬಗ್ಗೆ ಈಗಾಗಲೆ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು ಜಾಗ ಗುರುತಿಸುವ ಕಾರ್ಯವನ್ನು ಮಾಡಲಾಗುದು ಹಾಗೂ ಒಂದು ವಾರದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಡಿ.ಪಿ.ಆರ್ ಸಿದ್ದಪಡಿಸಲಾಗುವುದು ಎಂದು ಅವರು ತಿಳಿಸಿದರು. ಈ ಯೋಜನೆಗೆ ಮುಖ್ಯಮಂತ್ರಿಗಳೊಂದಿಗೆ ಮಾತುಕತೆ ನಡೆಸಿ ಸಚಿವ ಸಂಪುಟದಲ್ಲಿ ಅನುಮೋದನೆ ಪಡೆಯಲಾಗುವುದು ಎಂದು ತಿಳಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣ ಡಿಸೆಂಬರ್ ವೇಳೆಗೆ ಉದ್ಘಾಟನೆಗೊಳ್ಳಲಿದೆ. ರಾಯಚೂರು ವಿಮಾನ ನಿಲ್ದಣಕ್ಕೆ ಸದ್ಯದಲ್ಲಿಯೇ ಶಂಕುಸ್ಥಾಪನೆ ನೆರವೇರಿಸುವುದಾಗಿ ತಿಳಿಸಿದ ಅವರು ಹಾಸನ ವಿಮಾನ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲಾಗುವುದು ಎಂದರು.

ಬೆಳ್ತಂಗಡಿ ತಾಲೂಕಿನಲ್ಲಿ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಹತ್ತು ಕೋಟಿ ರೂ. ವಿಶೇಷ ಅನುದಾನ ಒದಗಿಸುವುದಾಗಿ ಭರವಸೆ ನೀಡಿದ ಅವರು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರ ಬೇಡಿಕೆಯಂತೆ ತಾಲೂಕಿಗೆ ಇನ್ನಷ್ಟು ಮನೆಗಳನ್ನು ಒದಗಿಸುವುದಾಗಿ ತಿಳಿಸಿದರು. ತಾಲೂಕಿನ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಕೂಡಲೇ ಸಮೀಕ್ಷೆ ನಡೆಸಿ ವಸತಿ ರಹಿತರ ಬಗ್ಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಅಗತ್ಯವಿರುವಷ್ಟು ಮನೆಗಳನ್ನು ಈ ವರ್ಷ ಮಂಜೂರು ಮಾಡುವುದಾಗಿ ಭರವಸೆ ನೀಡಿದರು.

ರಾಜ್ಯದಲ್ಲಿ ಮಂಜೂರಾಗಿರುವ ಮನೆಗಳಿಗೆ ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡುವುದಾಗಿ ತಿಳಿಸಿದ ಸಚಿವರು ಇದೀಗ ದಾಖಲೀಕರಣವನ್ನು ಸುಲಭಗೊಳಿಸಲಾಗಿದ್ದು ಫಲಾನುಭಾವಿಗಳು ಯಾವುದೇ ವಿಳಂಬವಿಲ್ಲದೆ ಸುಲಭವಾಗಿ ಹಣ ಪಡೆಯಬಹುದಾಗಿದೆ. ಹಿಂದೆ ಯಾವುದೇ ಯೋಜನೆಯಲ್ಲಿ ಮನೆ ಪಡೆದು ಹಣ ಸಿಗದಿರುವ ಫಲಾನುಭಾವಿಗಳಿಗೆ ಅದನ್ನು ಒದಗಿಸಲಾಗುವುದು ಎಂದರು.

ಮನೆಗಳನ್ನು ಪಡೆದವರು ಒಳ್ಳೆಯ ಮನೆ ಕಟ್ಟಿ ನೆಮ್ಮದಿಯ ಜೀವನ ನಡೆಸಿ ಯಾವುದೇ ಕಾರಣಕ್ಕೂ ಮನೆಗಳನ್ನು ಮಾರಾಟ ಮಾಡಲು ಮು‌ಂದಾಗಬೇಡಿ ಎಂದು ಸಚಿವರು ಫಲಾನುಭವಿಗಳಿಗೆ ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ವಹಿಸಿ ಮಾತನಾಡಿ ತಾಲೂಕಿಗೆ ಇನ್ನೂ ಐದು ಸಾವಿರ ಮನೆಗಳ ಅಗತ್ಯವಿದ್ದು ಮಂಜೂರು ಮಾಡುವಂತೆ ವಿನಂತಿಸಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ದ.ಕ ಜಿಲ್ಲಾ ಪಂಚಾಯತು ಮುಖ್ಯ ಕಾರ್ಯನಿರ್ವಹಾಧಿಕಾರಿ ಡಾ.ಕುಮಾರ್, ಪಟ್ಟಣ ಪಂಚಾಯತು ಅಧ್ಯಕ್ಷೆ ರಜನಿ ಕುಡ್ವ, ಉಪಾಧ್ಯಕ್ಷ ಜಯಾನಂದ ಗೌಡ, ರಾಜೀವ ಗಾಂಧಿ ವಸತಿ ನಿಗಮದ ವ್ಯವಸ್ಥಾಪಕ ಅರುಣ್ ಕುಮಾರ್, ಜಿ.ಪಂ ಯೋಜನಾ ನಿರ್ದೇಶಕ ಹೆಚ್. ಆರ್ ನಾಯಕ್, ಬೆಳ್ತಂಗಡಿ ತಹಶಿಲ್ದಾರ್ ಪೃಥ್ವಿ ಸಾನಿಕಮ್, ತಾಲೂಕಿನ ಗ್ರಾಮ ಪಂಚಾಯತು ಅಧ್ಯಕ್ಷರುಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ತಾಲೂಕಿನ ಗ್ರಾಮ ಪಂಚಾಯತು ಅಧ್ಯಕ್ಷರುಗಳು ಸಚಿವರಿಗೆ ಪುಸ್ತಕ ನೀಡಿ ಅಭಿನಂದಿಸಿದರು.

ಶಾಸಕರ ನೇತೃತ್ವದಲ್ಲಿ ಸಚಿವರನ್ನು ಸನ್ಮಾನಿಸಲಾಯಿತು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್ ಸ್ವಾಗತಿಸಿದರು, ಪ್ರಕಾಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ತಾಲೂಕಿನ ವಿವಿಧ ಭಾಗಗಳಿಂದ ವಸತಿ ಯೋಜನೆಯ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X