Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲದಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ಮಣಿಪಾಲದಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ27 Aug 2022 9:37 PM IST
share
ಮಣಿಪಾಲದಲ್ಲಿ ವಿಶ್ವ ಉದ್ಯಮಿಗಳ ದಿನಾಚರಣೆ

ಮಣಿಪಾಲ: ಮಹಿಳೆಯರು ಭಾರತದ ಆರ್ಥಿಕ ಬೆಳವಣಿಗೆ ದಿಕ್ಕನ್ನು ಮರು ವ್ಯಾಖ್ಯಾನಿಸುತಿದ್ದು, ಲಿಂಗ ಸಮಾನತೆ ಯನ್ನು ಸಾಧಿಸುವ ಮೂಲಕ ಐದು  ಟ್ರಿಲಿಯನ್ ಡಾಲರ್ ಆರ್ಥಿಕತೆಯ ಭಾರತದ ಕನಸನ್ನು ತ್ವರಿತವಾಗಿ ಸಾಕಾರ ಗೊಳಿಸಲು ಸಾಧ್ಯವಿದೆ ಎಂದು ಕೊಲೊಸ್ಸಾ ವೆಂಚರ್ಸ್‌ನ ಸ್ಥಾಪಕಿ ಮತ್ತು ಸಿಇಓ ಆಶು ಸುಯಶ್ ಅಭಿಪ್ರಾಯಪಟ್ಟಿದ್ದಾರೆ.

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಷನ್ (ಮಾಹೆ), ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಸಮೂಹ (ಎಂಇಎಂಜಿ), ಸಿಕ್ಕಿಂ ಮಣಿಪಾಲ ವಿವಿ, ಮಣಿಪಾಲ ವಿವಿ ಜೈಪುರ ಸೇರಿದಂತೆ ಮಣಿಪಾಲ ವಿವಿಧ  ಸಂಸ್ಥೆಗಳ ಸಹಯೋಗದೊಂದಿಗೆ ವಿಶ್ವ ಉದ್ಯಮಿಗಳ ದಿನದ ಅಂಗವಾಗಿ ಮಣಿಪಾಲದಲ್ಲಿ ನಡೆದ ‘ಮಹಿಳಾ ಉದ್ಯಮಶೀಲತೆ’ ವಿಷಯದ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡುತಿದ್ದರು.

ಪ್ರತಿ ವರ್ಷ ಆಗಸ್ಟ್ 21ನ್ನು ಉದ್ಯಮಶೀಲತೆ, ನಾವೀನ್ಯತೆ ಹಾಗೂ ನಾಯಕತ್ವದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ವಿಶ್ವ ಉದ್ಯಮಿಗಳ ದಿನವನ್ನಾಗಿ ಆಚರಿಸಲಾಗುತ್ತದೆ. ಮಹಿಳೆಯರ ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಕೊಲೊಸ್ಸಾ ವೆಂಚರ್ಸ್‌ ನಿಧಿಯೊಂದನ್ನು ಸ್ಥಾಪಿಸಿದೆ.ಈ ನಿಧಿಯನ್ನು ಮಹಿಳಾ ಸ್ಥಾಪಿತ ಕಂಪೆನಿಗಳು ಹಾಗೂ ಮಹಿಳೆಯರು ಪ್ರಮುಖ ಫಲಾನುಭವಿ ಗಳಾದ ಪುರುಷರು ಸ್ಥಾಪಿಸಿದ ಕಂಪೆನಿಗಳಲ್ಲಿ ಹೂಡಿಕೆ ಮಾಡಲಾಗುವುದು ಎಂದು ಆಶು ಸುಯಶ್ ವಿವರಿಸಿದರು. ಸಂಸ್ಥೆಯ ಇನ್ನೋರ್ವ ಸ್ಥಾಪಕಿ ಹಾಗೂ ಸಹ ಮುಖ್ಯಸ್ಥೆ ವಂದನಾ ರಾಜ್ಯಾಧ್ಯಕ್ಷ ಉಪಸ್ಥಿತರಿದ್ದರು.

ಮಾಹೆಯ ಕುಲಪತಿ ಲೆ.ಜ.(ಡಾ.) ಎಂ.ಡಿ.ವೆಂಕಟೇಶ್ ಮಾತನಾಡಿ, ಮಹಿಳೆಯರ ಸಬಲೀಕರಣಕ್ಕಾಗಿ ಕೊಲೊಸ್ಸಾ ವೆಂಚರ್ಸ್‌ನ ಪ್ರಯತ್ನಗಳನ್ನು ಶ್ಲಾಘಿಸಿದರು. ಮಣಿಪಾಲ ವಿವಿಯಲ್ಲಿರುವ ನಾಲ್ಕು ಇನ್ಯೂಬೇಟರ್‌ಗಳ ಮೂಲಕ ನಾವು ಮಹಿಳೆಯರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳಿಗೆ ಸಹಾಯ ಮಾಡುತಿದ್ದು, 150ಕ್ಕೂ ಅಧಿಕ ಸ್ಟಾರ್ಟಪ್‌ಗಳನ್ನು ಬೆಂಬಲಿಸಿದ್ದೇವೆ ಎಂದರು.

ಮಾಹೆ ಅರೋಗ್ಯವಿಜ್ಞಾನ ವಿಭಾಗದ ಸಹಕುಲಪತಿ ಡಾ. ವೆಂಕಟರಾಯ ಪ್ರಭು, ಮಣಿಪಾಲ ಶಿಕ್ಷಣ ಮತ್ತು ವೈದ್ಯಕೀಯ ಗ್ರೂಫ್‌ನ ಕ್ರಿಯೇಟಿವ್ ಡೈರೆಕ್ಟರ್ ಶ್ರುತಿ ಪೈ, ಹಿರಿಯ ಉಪಾದ್ಯಕ್ಷ ಹರಿನಾರಾಯಣ ಶರ್ಮಾ, ಉಡುಪಿ ಪವರ್ ಸಂಸ್ಥೆಯ ಅಧ್ಯಕ್ಷೆ ಪೂನಂ ಶೆಟ್ಟಿ, ರೋಟರಿಜಿಲ್ಲೆ ೩೧೮೨ರ ಸಹಾಯಕ ಗವರ್ನರ್ ರಾಮಚಂದ್ರ ಉಪಾಧ್ಯಾಯ,  ಮಾಹೆ ಕಾರ್ಪೊರೇಟ್  ಸಂಬಂಧಗಳ ನಿರ್ದೇಶಕ ಡಾ. ರವಿರಾಜ ಎನ್.ಎಸ್., ಮಣಿಪಾಲ್ ಇನ್‌ಕ್ಯೂಬೇಟರ್‌ನ ಸಿಇಓ ಡಾ.ವೈ. ಶ್ರೀಹರಿ ಉಪಾಧ್ಯಾಯ, ಡಾ.ಮನೀಶ್ ಥಾಮಸ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X