Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಾರ್ಚ್‌ ಒಳಗೆ ರಾಜ್ಯದಲ್ಲಿ 16 ಲಕ್ಷ...

ಮಾರ್ಚ್‌ ಒಳಗೆ ರಾಜ್ಯದಲ್ಲಿ 16 ಲಕ್ಷ ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ: ಸಚಿವ ವಿ‌‌‌.ಸೋಮಣ್ಣ

ವಾರ್ತಾಭಾರತಿವಾರ್ತಾಭಾರತಿ27 Aug 2022 10:45 PM IST
share
ಮಾರ್ಚ್‌ ಒಳಗೆ ರಾಜ್ಯದಲ್ಲಿ 16 ಲಕ್ಷ ಮನೆಗಳು ಫಲಾನುಭವಿಗಳಿಗೆ ಹಸ್ತಾಂತರ: ಸಚಿವ ವಿ‌‌‌.ಸೋಮಣ್ಣ

ಸುಳ್ಯ: ರಾಜ್ಯದಲ್ಲಿ ವಸತಿ ಯೋಜನೆಯ ವ್ಯವಸ್ಥೆಗೆ ಒಂದೇ ವಿಷನ್ ಜಾರಿಗೆ ತರಲಾಗಿದೆ. ಇಡೀ ರಾಜ್ಯಕ್ಕೆ ಒಂದೇ ಸಾಫ್ಟ್‌ವೇರ್ ಆರಂಭಿಸಿ ನಿಜವಾದ ಬಡವರು ಯಾರಿದ್ದಾರೆ ಅವರ ಖಾತೆಗೆ ನೇರವಾಗಿ ಹಣ ಸಂದಾಯ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು‌.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸುಮಾರು 7 ಸಾವಿರ ಕೋಟಿ ಹಣವನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡುವ ವ್ಯವಸ್ಥೆಯನ್ನು ಪಾರದರ್ಶಕವಾಗಿ ಮಾಡಲಾಗಿದೆ. ಹಿಂದಿನ ಸರಕಾರದ ಅವಧಿಯಲ್ಲಿ ಹಣ ಬಿಡುಗಡೆಯಾಗದವರಿಗೆ ಹಣ ಬಿಡುಗಡೆ ಮಾಡಲು ವ್ಯವಸ್ಥೆ ಮಾಡಲಾಗಿದೆ. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾದ ಬಳಿಕ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಲಾಗಿದೆ. 5 ಲಕ್ಷ ಮನೆಗಳಲ್ಲಿ 2ಲಕ್ಷದ 34 ಸಾವಿರ ಮನೆಗಳ ನಿರ್ಮಾಣ ಕಾರ್ಯ ಆರಂಭವಾಗಿದೆ. ಅಝಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸುಮಾರು 750 ಪಂಚಾಯತ್ ಗಳನ್ನು ಆಯ್ಕೆ ಮಾಡಿ ಲಕ್ಷಾಂತರ ಮನೆಗಳನ್ನು ನೀಡಲಾಗಿದ್ದು ಈಗಾಗಲೇ ಕೆಲಸ ಆರಂಭವಾಗಿದೆ ಎಂದರು.

ಹಿಂದಿನ ಸರಕಾರದ ಕಾಲದಲ್ಲಿ ಬಾಕಿ ಉಳಿದ 10ಲಕ್ಷ ಮನೆಗಳು ನಿರ್ಮಾಣಗೊಳ್ಳಲಿದೆ. ಇದರಲ್ಲಿ 6 ಲಕ್ಷ ಮನೆಗಳ ನಿರ್ಮಾಣ ಈಗಾಗಲೇ ಪೂರ್ತಿಯಾಗಿದೆ. ಉಳಿದ ಮನೆಗಳನ್ನು ಪೂರ್ತಿ ಮಾಡಿ ಮಾರ್ಚ್‌ನ ಒಳಗೆ ಎಲ್ಲಾ 16 ಲಕ್ಷ ಮನೆಗಳನ್ನು ಫಲಾನುಭವಿಗಳಿಗೆ ನೀಡುವ ವ್ಯವಸ್ಥೆ ಮಾಡಲಾಗುವುದು. ಅಲ್ಲದೆ ಗುಣಮಟ್ಟದ ನಿವಾಸ ನಿರ್ಮಿಸಿ ನೀಡಲಾಗುವುದು ಎಂದು ಹೇಳಿದರು.

ಗ್ರಾಮೀಣ ಭಾಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಆದಾಯದ ಮಿತಿಯನ್ನು 2ಲಕ್ಷಕ್ಕೆ ಏರಿಸಲಾಗಿದೆ. ಇತರ ಹಿಂದುಳಿದ ವರ್ಗದವರಿಗೆ ಇದ್ದವರಿಗೆ ವಾರ್ಷಿಕ ಆದಾಯವನ್ನು 1ಲಕ್ಷದ 20 ಸಾವಿರಕ್ಕೆ ಏರಿಸಲಾಗಿದೆ. ಅಲ್ಲದೆ ಬಿಪಿಎಲ್ ಕಾರ್ಡ್ ಇದ್ದವರಿಗೆ ಸರಕಾರದಿಂದ ಅನುಕೂಲ ಸೃಷ್ಟಿ ಮಾಡಲಾಗಿದೆ‌ ಎಂದು ಹೇಳಿದರು.

ಇಲಾಖೆಗೆ ಹೊಸ ಸಾಫ್ಟ್‌ವೇರ್ ಸಿದ್ಧಪಡಿಸಿ ಸಾಮಾನ್ಯರಿಗೆ ಮತ್ತು ಬಡವರಿಗೆ ಪಾರದರ್ಶಕವಾಗಿ ಯೋಜನೆಗಳು ದೊರಕುವಂತೆ ಮಾಡಲಾಗಿದೆ. ನೆರೆ ಇತ್ಯಾದಿಗಳಿಂದ ಮನೆ ಹಾನಿಯಾದವರಿಗೆ ಪರಿಹಾರ ವಿತರಿಸಲು ಎ ಬಿ ಸಿ ಎಂಬ ವಿಂಗಡಣೆ ಇತ್ತು ಅದನ್ನು ತೆಗೆದುಹಾಕಿ ಸರಳೀಕರಣಗೊಳಿಸಲಾಗಿದೆ. ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ ಎಂದು ನುಡಿದರು.

ದೇವಳಕ್ಕೆ ಭೇಟಿ: ಈ ಮೊದಲು ಕುಕ್ಕೆ ದೇವಳಕ್ಕೆ ಭೇಟಿ ನೀಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಬಳಿಕ ಬೋಜನ ಪ್ರಸಾದ ಸ್ವೀಕರಿಸಿದರು. ಇವರ ಜತೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಆಗಮಿಸಿದ್ದರು. ಈ ಸಂದರ್ಭ ಶ್ರೀ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಸುಳ್ಳಿ, ಕಾರ್ಯನಿರ್ವಾಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವನಜಾ.ವಿ.ಭಟ್, ಶೋಭಾ ಗಿರಿಧರ್, ಎಇಒ ಪುಷ್ಪಲತಾ ರಾವ್, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X