Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ಅಭಿಷೇಕ್‌ ಅಂಬರೀಷ್‌ ಅಭಿನಯದ ನೂತನ...

ಅಭಿಷೇಕ್‌ ಅಂಬರೀಷ್‌ ಅಭಿನಯದ ನೂತನ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ

ಚರಿತ್ರೆಯ ಅಂಚಿಗೆ ಸರಿಸಲ್ಪಟ್ಟ ಬರ್ಬರ ಘಟನೆಗಳನ್ನು ಆಧರಿಸಿದ ಕಾಲ್ಪನಿಕ ಕಥೆಯೇ AA04: ದಯಾನಂದ್‌ ಟಿಕೆ

ವಾರ್ತಾಭಾರತಿವಾರ್ತಾಭಾರತಿ27 Aug 2022 11:29 PM IST
share
ಅಭಿಷೇಕ್‌ ಅಂಬರೀಷ್‌ ಅಭಿನಯದ ನೂತನ ಚಿತ್ರದ ಮೋಷನ್‌ ಪೋಸ್ಟರ್‌ ಬಿಡುಗಡೆ

 ಬೆಂಗಳೂರು: ಕನ್ನಡ ಚಿತ್ರರಂಗದ ಮಟ್ಟಿಗೆ ಮತ್ತೊಂದು ಬಹು ನಿರೀಕ್ಷಿತ ಚಿತ್ರದ ಸೇರ್ಪಡೆಯಾಗಿದೆ. ಅಂಬರೀಶ್‌ ಪುತ್ರ ಅಭಿಷೇಕ್‌ ಅಂಬರೀಷ್‌ ಅವರ ನಾಲ್ಕನೆ ಚಿತ್ರ AA04 ಮುಹೂರ್ತ ನೆರವೇರಿದೆ. ಹೊಸ ಚಿತ್ರದ ಪೋಸ್ಟರ್‌ ನಲ್ಲಿ ಅಭಿಷೇಕ್‌ ಚಾರಿತ್ರಿಕ ಯೋಧನ ರೀತಿಯಲ್ಲಿ ಕಾಣಿಸಿಕೊಂಡಿದ್ದಾರೆ. ಉಕ್ಕಿನ ಕವಚಗಳನ್ನು ಧರಿಸಿರುವ ಅಭಿಷೇಕ್‌ ಅವರ ಚಿತ್ರವು ಅಭಿಮಾನಿಗಳಲ್ಲಿ ತೀವ್ರ ಕುತೂಹಲವನ್ನು ಹುಟ್ಟಿಸಿದೆ.

ಆಯೋಗ್ಯ ಹಾಗೂ ಮದಗಜ ಚಿತ್ರಕ್ಕೆ ನಿರ್ದೇಶನ ಮಾಡಿದ್ದ ಮಹೇಶ್​ ಕುಮಾರ್ (Mahesh Kumar) ಅವರು ಈ ಚಿತ್ರಕ್ಕೂ ಆಕ್ಷನ್ ಕಟ್​ ಹೇಳಲಿದ್ದಾರೆ. ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಂಬರೀಶ್​ ಅವರ ಸಮಾಧಿ ಬಳಿ ಅಭಿಷೇಕ್ ಅಂಬರೀಶ್ ಅವರ 4ನೇ ಚಿತ್ರದ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ನಿರ್ಮಾಪಕ ರಾಕ್​ಲೈನ್ ವೆಂಕಟೇಶ್ (Rockline Venkatesh) ಬಂಡವಾಳ ಹೂಡಿದ್ದಾರೆ.

ಬೆಲ್‌ ಬಾಟಂ, ACT 1978 ಚಿತ್ರಗಳಿಗೆ ಕತೆ ಬರೆದಿರುವ ಕತೆಗಾರ ದಯಾನಂದ್‌ ಟಿಕೆ ಅವರು ಈ ಚಿತ್ರಕ್ಕೂ ಕತೆ ಹಾಗೂ ಸಂಭಾಷಣೆಯನ್ನು ಬರೆದಿದ್ದು, ಚಿತ್ರಕತೆಯನ್ನು ನಿರ್ದೇಶಕ ಮಹೇಶ್‌ ಕುಮಾರ್‌ ಅವರೇ ಬರೆದಿದ್ದಾರೆ.

ದಯಾನಂದ್‌ ಟಿಕೆ ಅವರ ಪ್ರಕಾರ, ಈ ಚಿತ್ರವು ಟಿಕೆ ಅವರ ಮೊದಲ ಹೈ ಬಜೆಟ್‌ ಚಿತ್ರವಾಗಲಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ದಯಾನಂದ್‌, “ಮತ್ತೊಂದು ಹೊಸ ದೇಸಿಮೂಲದ ಕಥೆಯೊಡನೆ ಪಯಣ ಶುರುವಾಗಿದೆ.. ಅಭಿಶೇಕ್ ಅಂಬರೀಶ್ ನಾಯಕರು, ರಾಕ್'ಲೈನ್ ವೆಂಕಟೇಶರ ನಿರ್ಮಾಣದಲ್ಲಿ ಗೆಳೆಯ ಮಹೇಶ್ ಚಿತ್ರಕಥೆ-ನಿರ್ದೇಶನವಿರುವ ಈ ಚಿತ್ರದ ಕಥೆ ಮತ್ತು ಸಂಭಾಷಣೆಯ ಹೊಣೆ ನನ್ನದು. ಇದೇ ಕರ್ನಾಟಕ ನೆಲದಲ್ಲಿ ಒಂದೊಮ್ಮೆ ನಡೆದು ಚರಿತ್ರೆಯ ಅಂಚಿಗೆ ಸರಿಸಲ್ಪಟ್ಟ ಬರ್ಬರ ಘಟನೆಗಳನ್ನು ಆಧರಿಸಿದ ಕಾಲ್ಪನಿಕ ಕಥೆಯಿದು. ನನ್ನ ಮೊದಲ ಹೈಬಡ್ಜೆಟ್ ಚಿತ್ರ. ಪ್ರೀತಿಯಿರಲಿ. The Rebellion Begins..” ಎಂದು ಬರೆದಿದ್ದಾರೆ.

ಆಕ್ಟ್‌ 1978 ಮೂಲಕ ಪರಿಣಾಮಕಾರಿ ಸಂದೇಶವುಳ್ಳ ಚಿತ್ರವನ್ನು ಬರೆದಿರುವ ದಯಾನಂದ್‌ ಟಿಕೆ ಅವರ ʼಚರಿತ್ರೆಯ ಅಂಚಿಗೆ ಸರಿಸಲ್ಪಟ್ಟ ಬರ್ಬರ ಘಟನೆಗಳನ್ನು ಆಧರಿಸಿದ ಕಾಲ್ಪನಿಕ ಕಥೆʼ ಯ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಹುಟ್ಟಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X