Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ...

ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಬೊಮ್ಮಾಯಿ

ಕ್ರೀಡಾ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ29 Aug 2022 5:36 PM IST
share
ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ.2ರಷ್ಟು ಮೀಸಲಾತಿ ಕಲ್ಪಿಸಲು ನಿರ್ಧಾರ: ಸಿಎಂ ಬೊಮ್ಮಾಯಿ

ಬೆಂಗಳೂರು, ಆ. 29: ‘ಕ್ರೀಡಾಕ್ಷೇತ್ರದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳಿಗೆ ಸರಕಾರಿ ನೌಕರಿಯಲ್ಲಿ ಶೇ. 2ರಷ್ಟು ಮೀಸಲಾತಿ ನೀಡಲು ತೀರ್ಮಾನಿಸಲಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಆಯೋಜಿಸಿದ್ದ ‘ಗ್ರಾಮೀಣ ಕ್ರೀಡೋತ್ಸವ ಹಾಗೂ ಯೋಗಾಥಾನ್'ಗೆ ಚಾಲನೆ ನೀಡಿ 2020ನೆ ಸಾಲಿನ ಏಕಲವ್ಯ, ಜೀವಮಾನ ಸಾಧನೆ, ಕ್ರೀಡಾ ರತ್ನ ಹಾಗೂ 2021-22ನೆ ಸಾಲಿನ ‘ಕ್ರೀಡಾ ಪೋಷಕ' ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡುತ್ತಿದ್ದರು.

‘ಮುಂದಿನ ಪ್ಯಾರೀಸ್ ಒಲಿಂಪಿಕ್ಸ್‍ನಲ್ಲಿ ಭಾಗವಹಿಸಲು ರಾಜ್ಯದ ಆಯ್ದ 75 ಕ್ರೀಡಾಪಟುಗಳಿಗೆ ವಿಶ್ವಮಟ್ಟದ ತರಬೇತಿ ನೀಡಲಾಗುತ್ತಿದೆ. ಇವರಲ್ಲಿ ಹಲವರು ಒಲಿಂಪಿಕ್ಸ್‍ನಲ್ಲಿ ಪದಕಗಳನ್ನು ಗೆಲ್ಲಬೇಕೆಂಬುದು ಸರಕಾರದ ಗುರಿಯಾಗಿದೆ. ಗ್ರಾಮೀಣ ಮಟ್ಟದಲ್ಲಿಯೂ ಕ್ರೀಡಾ ಸಾಧನೆಗಳಾಗಬೇಕು ಹಾಗೂ ಗ್ರಾಮೀಣ ಕ್ರೀಡೆಗಳನ್ನು ಸರಕಾರದ ವತಿಯಿಂದ ವ್ಯವಸ್ಥಿತವಾಗಿ ನಡೆಸುವ ಉದ್ದೇಶದಿಂದ ಗ್ರಾಮೀಣ ಕ್ರೀಡಾಕೂಟವನ್ನು ಪ್ರಾರಂಭಿಸಲಾಗಿದೆ' ಎಂದು ನುಡಿದರು.

‘ಕಬ್ಬಡಿ, ಕೋಕೋ, ಕಂಬಳ, ಎತ್ತಿನಗಾಡಿ ಸ್ಪರ್ಧೆ ಹೀಗೆ ಹಲವು ಕ್ರೀಡೆಗಳು ಗ್ರಾಮೀಣ ಪ್ರದೇಶದ ಸೊಗಡನ್ನು ಸೂಸುತ್ತದೆ. ಗ್ರಾಮಪಂಚಾಯತಿ, ತಾಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ಕ್ರೀಡೆಗಳು ನಡೆಯುತ್ತವೆ. ಗ್ರಾಮಮಟ್ಟದಲ್ಲಿರುವ ಪ್ರತಿಭೆಗಳನ್ನು ಗುರುತಿಸಿ  ಪ್ರೋತ್ಸಾಹಿಸುವ ಕೆಲಸವಾಗುತ್ತಿದೆ ಎಂದು ಅವರು ತಿಳಿಸಿದರು.

ವಿವೇಕಾನಂದ ಯುವಶಕ್ತಿ ಯೋಜನೆ: ‘ಯುವಜನ ಸಬಲೀಕರಣಕ್ಕಾಗಿ ಶಿಕ್ಷಣ, ಉದ್ಯೋಗ ಮತ್ತು ಸಬಲೀಕರಣ ಬಹಳ ಮುಖ್ಯ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಆ.15ರಂದು ಚಾಲನೆ ನೀಡಲಾಗಿದೆ. ಪ್ರತಿ ಗ್ರಾಮದಲ್ಲಿ 30 ಜನರ ಯುವಜನರ ಸಂಘವನ್ನು ಗುರುತಿಸಿ, 7.5ಲಕ್ಷ ರೂ.ನಿಂದ 10 ಲಕ್ಷ ರೂ.ವರೆಗೆ ಯೋಜನೆಗಳನ್ನು ನೀಡಿ, ಸಂಘಕ್ಕೆ 1.5 ಲಕ್ಷ ರೂ.ಅನುದಾನವನ್ನು ಸರಕಾರವೇ ಭರಿಸಿ, ಉತ್ಪನ್ನಗಳ ತಯಾರಿಕೆಗೆ ತರಬೇತಿ, ತಯಾರಿಕೆ ಹಾಗೂ ಮಾರುಕಟ್ಟೆ ಜೋಡಣೆಯನ್ನು ಕಲ್ಪಿಸುವ ಯೋಜನೆಯಾಗಿದೆ' ಎಂದು ಮಾಹಿತಿ ನೀಡಿದರು.

‘ಸ್ವಯಂಉದ್ಯೋಗ ಮಾಡಿ ಇತರರಿಗೆ ಉದ್ಯೋಗ ನೀಡುವ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಿಂದ ಒಂದು ವರ್ಷಕ್ಕೆ ಸುಮಾರು 5ಲಕ್ಷ ಯುವಕರಿಗೆ ಉದ್ಯೋಗ ಸೃಷ್ಟಿಸಿದಂತಾಗುತ್ತದೆ. ಇದು ವಿನೂತನವಾದ ಯೋಜನೆ. ಆರ್ಥಿಕವಾಗಿ, ಸಾಮಾಜಿಕವಾಗಿ ಯುವಕರ ಸಾಮಥ್ರ್ಯವನ್ನು ಹೆಚ್ಚಿಸುವಂತಹ ಕೆಲಸವನ್ನು ಸರಕಾರ ನಿರಂತರವಾಗಿ ಮಾಡುತ್ತದೆ' ಎಂದು ಅವರು ತಿಳಿಸಿದರು.

ಕ್ರೀಡಾ ಕರ್ನಾಟಕವನ್ನಾಗಿಸುವ ಗುರಿ: ‘ಕರಾವಳಿಯ ಕಂಬಳ, ಉತ್ತರ ಕರ್ನಾಟಕದ ಚಕ್ಕಡಿ ಹೊಡೆಯುವ ಸ್ಪರ್ಧೆ, ಕುಸ್ತಿ, ಸೈಕಲ್, ಮೋಟರ್ ಸೈಕಲ್, ಕಾರ್ ರ್ಯಾಲಿಗಳು, ಗಾಲ್ಫ್, ವಾಲಿಬಾಲ್ ಕ್ರೀಡೆಗಳನ್ನು  ಪ್ರೋತ್ಸಾಹಿಸಲಾಗುತ್ತಿದೆ. ಕನ್ನಡದ ಯುವಕರು ಯಶಸ್ಸಿನ ಉತ್ತುಂಗಕ್ಕೆ ಏರಬೇಕು. ಸೀನಿಯರ್ ಒಲಿಂಪಿಕ್ಸ್ ಏರ್ಪಡಿಸಲು ರಾಜ್ಯ ಸರಕಾರ 8 ಕೋಟಿ ರೂ.ನೀಡಿದೆ. ಕರ್ನಾಟಕವನ್ನು ಕ್ರೀಡಾ ಕರ್ನಾಟಕವನ್ನಾಗಿ ಮಾಡುವ ಗುರಿ ಸರಕಾರಕ್ಕಿದೆ. ಕ್ರೀಡೆಯ ತರಬೇತುದಾರರಿಗೆ ಎಲ್ಲ ಸಹಕಾರವನ್ನು ನೀಡಲಾಗುವುದು' ಎಂದು ಅವರು ಘೋಷಿಸಿದರು.

ದೇಶದ ಭವಿಷ್ಯ ಯುವಜನತೆಯ ಮೇಲಿದೆ: ಧ್ಯಾನ್‍ಚಂದ್ ಅವರು ಒಲಿಂಪಿಕ್ಸ್‍ನಲ್ಲಿ ಮೂರು ಬಾರಿ ಚಿನ್ನದ ಪದಕ ಗೆದ್ದು, ಭಾರತಕ್ಕೆ ಕೀರ್ತಿ ತಂದವರು. ಹಾಕಿಯ ಜಾದೂಗಾರರಾಗಿದ್ದ ಅವರು ಹಾಕಿಯನ್ನು ಅಗ್ರಮಾನ್ಯ ಸ್ಥಾನಕ್ಕೆ ತಂದವರು. ಧ್ಯಾನ್‍ಚಂದ್ ಅವರ ಹೆಸರಿನಲ್ಲಿ ‘ಖೇಲ್ ರತ್ನ' ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಕರ್ನಾಟಕದಲ್ಲಿ ನೀಡಲಾಗುವ ಏಕಲವ್ಯ ಪ್ರಶಸ್ತಿ, ಕ್ರೀಡಾರತ್ನ ಪ್ರಶಸ್ತಿ, ನಗದು ಪ್ರಶಸ್ತಿ ನೀಡಲಾಗುತ್ತಿದೆ. ಕ್ರೀಡಾಕ್ಷೇತ್ರದಲ್ಲಿನ ತಮ್ಮ ಶ್ರಮ, ಸಾಧನೆಯನ್ನು ಗುರುತಿಸಿ ರಾಜ್ಯ ಸರಕಾರ ನಿಮ್ಮ ಬೆನ್ನುತಟ್ಟಿ ಪ್ರೋತ್ಸಾಹಿಸುವ ಕೆಲಸವನ್ನು ಮಾಡುತ್ತಿದೆ. ಭಾರತದಲ್ಲಿ ಶೇ.46ರಷ್ಟು ಜನಸಂಖ್ಯೆ ಯುವಜನರಿದ್ದಾರೆ. ಮುಂದಿನ 25 ವರ್ಷಗಳು ಭಾರತದ ಭವಿಷ್ಯ ಈ ಯುವಜನತೆಯ ಮೇಲಿದೆ ಎಂದು ತಿಳಿಸಿದರು.

ಸಾಧಿಸಲು ಧೃಡ ನಿಶ್ಚಯಬೇಕು:‘ಯುವಕರಲ್ಲಿ ಶಿಸ್ತು, ವ್ಯಕ್ತಿತ್ವದಿಂದ ಯಶಸ್ಸು ಬರುತ್ತದೆ. ಕಠಿಣ ಪರಿಶ್ರಮಗಳಿಂದ ಹೆಚ್ಚಿನ ಗುರಿಗಳನ್ನು ಸಾಧಿಸುತ್ತಿರಬೇಕು. ಗೆಲ್ಲಬೇಕೆಂದು ಆಡಬೇಕೇ ಹೊರತು ಸೋಲಬಾರದು ಎಂದು ಆಟವಾಡಬಾರದು. ಗೆಲ್ಲಬೇಕೆಂಬ ಹುರುಪಿನಿಂದ ಸಕಾರಾತ್ಮಕವಾಗಿ ಆಡಬೇಕು, ಆತ್ಮವಿಶ್ವಾಸದಿಂದ ನಿಮ್ಮ ಮೇಲೆ ನಂಬಿಕೆಯಿರಿಸಿ. ಯುವಕರು ಸಾಧನೆಗಳನ್ನು ಮಾಡಿದಾಗ ಹುರಿದುಂಬಿಸಿದರೆ, ಇನ್ನಷ್ಟು ಸಾಧನೆಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಕ್ರೀಡಾ ಸಚಿವ ನಾರಾಯಣಗೌಡ, ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಒಲಿಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದ ರಾಜು, ಕ್ರೀಡಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X