Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪ್ರಧಾನಿ ಮೋದಿ ಕಾರ್ಯಕ್ರಮ; ಸ್ತ್ರೀಶಕ್ತಿ...

ಪ್ರಧಾನಿ ಮೋದಿ ಕಾರ್ಯಕ್ರಮ; ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರ ಕಡ್ಡಾಯ ಹಾಜರಾತಿ

ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಖಂಡನೆ

ವಾರ್ತಾಭಾರತಿವಾರ್ತಾಭಾರತಿ29 Aug 2022 5:37 PM IST
share
ಪ್ರಧಾನಿ ಮೋದಿ ಕಾರ್ಯಕ್ರಮ; ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರ ಕಡ್ಡಾಯ ಹಾಜರಾತಿ

ಮಂಗಳೂರು, ಆ.29: ಬಂಗ್ರ ಕೂಳೂರಿನಲ್ಲಿ ಸೆ.2ರಂದು ನಡೆಯುವ ಪ್ರಧಾನಿ ನರೇಂದ್ರ ಮೋದಿಯ ಕಾರ್ಯ ಕ್ರಮಕ್ಕೆ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರ ರಾಜಕೀಯ ದುರ್ಬಳಕೆಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮಿತಿ ಖಂಡಿಸಿದೆ.

ಪ್ರಧಾನಿ ಭಾಗವಹಿಸುವ ಕಾರ್ಯಕ್ರಮಕ್ಕೆ ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರು ಕಡ್ಡಾಯವಾಗಿ ಭಾಗವಹಿಸಬೇಕು. ಮಹಿಳೆಯರನ್ನು ಕರೆತರಲು ಗ್ರಾಪಂ ವ್ಯಾಪ್ತಿಯಲ್ಲಿ ಬಸ್ ವ್ಯವಸ್ಥೆಯನ್ನು ಮಾಡಲಾಗುವುದೆಂದು ಜಿಲ್ಲಾಧಿಕಾರಿ ಆದೇಶ ಹೊರಡಿಸಿರುವುದು ಸ್ತ್ರೀಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರನ್ನು ಬಿಜೆಪಿ ಪಕ್ಷದ ಮತಬ್ಯಾಂಕ್ ರಾಜಕಾರಣಕ್ಕೆ ಬಳಸುವ ಹುನ್ನಾರವಾಗಿದೆ ಎಂದು ಸಂಘಟನೆ ಆರೋಪಿಸಿದೆ.

ಕೋವಿಡ್ ಸಂಕಷ್ಟ ಕಾಲದಲ್ಲಿ ಸಾಲದ ಕಂತು ಪಾವತಿಸಲಾಗದ ನೋವಿನಿಂದ ಸಾಲ ಮನ್ನಾ ಮಾಡಲು ಒತ್ತಾಯಿಸಿದರೂ ಕೂಡ ಲೆಕ್ಕಿಸದೆ ಕಾರ್ಪೊರೇಟ್ ವಲಯಕ್ಕೆ ಕೋಟ್ಯಂತರ ತೆರಿಗೆಯನ್ನು ಕೇಂದ್ರ ಸರಕಾರ ಮನ್ನಾ ಮಾಡಿತು. ಮಹಿಳೆಯರು ಈಗಲೂ ಎಂಎಫ್‌ಐಗಳ ಅಪಮಾನ, ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರಕಾರ ಇಂದು ಅದೇ ಮಹಿಳೆಯರನ್ನು ರಾಜಕೀಯವಾಗಿ ದುರ್ಬಳಕೆ ಮಾಡಲು ಹೊರಟಿದೆ ಎಂದು ಆಪಾದಿಸಿದೆ.

ನರೇಂದ್ರ ಮೋದಿಯ ಕಾರ್ಯಕ್ರಮಕ್ಕೆ ಬಿಜೆಪಿಯ ಏಜೆಂಟರಂತೆ ಮಹಿಳೆಯರನ್ನು ಕರೆತರಲು ಜಿಲ್ಲಾಧಿಕಾರಿ ಹೊರಡಿಸಿದ ರಾಜಕೀಯ ಪ್ರೇರಿತ ಆದೇಶವನ್ನು ವಾಪಸ್ ಪಡೆಯಬೇಕು. ಜಿಲ್ಲಾಧಿಕಾರಿಯು ಈ ದೇಶದ ಸಂವಿಧಾನ ಮತ್ತು ಕಾನೂನಿಗೆ ಬದ್ಧರಾಗಿರಬೇಕೇ ವಿನಃ ಸರಕಾರಗಳಿಗಲ್ಲ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಅಧ್ಯಕ್ಷೆ ಜಯಂತಿ ಶೆಟ್ಟಿ ಮತ್ತು ಪ್ರಧಾನ ಕಾರ್ಯದರ್ಶಿ ಭಾರತಿ ಬೋಳಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X