Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು ವಿವಿಯಲ್ಲಿ ಸಾರ್ವಕರ್ ಆಧ್ಯಯನ...

ತುಮಕೂರು ವಿವಿಯಲ್ಲಿ ಸಾರ್ವಕರ್ ಆಧ್ಯಯನ ಪೀಠಕ್ಕೆ ವಿರೋಧ: ಪ್ರಗತಿಪರ ಸಂಘಟನೆಗಳಿಂದ ಕುಲಸಚಿವರಿಗೆ ಮನವಿ

ವಾರ್ತಾಭಾರತಿವಾರ್ತಾಭಾರತಿ29 Aug 2022 6:20 PM IST
share
ತುಮಕೂರು ವಿವಿಯಲ್ಲಿ ಸಾರ್ವಕರ್ ಆಧ್ಯಯನ ಪೀಠಕ್ಕೆ ವಿರೋಧ: ಪ್ರಗತಿಪರ ಸಂಘಟನೆಗಳಿಂದ ಕುಲಸಚಿವರಿಗೆ ಮನವಿ

ತುಮಕೂರು,ಆ.29: ತುಮಕೂರು ವಿಶ್ವವಿದ್ಯಾಲಯದಲ್ಲಿ ಸಾವರ್ಕರ್ ಅಧ್ಯಯನ ಪೀಠ ಸ್ಥಾಪಿಸುವುದನ್ನು ವಿರೋಧಿಸಿ ಎಸ್‍ಎಫ್‍ಐ ಮತ್ತು ತುಮಕೂರು ಜಿಲ್ಲಾ ಪ್ರಗತಿಪರ ಸಂಘಟನೆಗಳ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಇಂದು ತುಮಕೂರು ವಿವಿ ಕುಲಸಚಿವರಿಗೆ ಮನವಿ ಪತ್ರ ಸಲ್ಲಿಸಿದ ಜಿಲ್ಲಾ ಪ್ರಗತಿಪರ ಸಂಘಟನೆಗಳ ಮುಖಂಡರು, ವಿವಿ ಮತ್ತು ವಿವಿಯ ಸಿಂಡಿಕೇಟ್ ಸದಸ್ಯರ ನಡೆಯನ್ನು ವಿರೋಧಿಸಿದರು.

ಇದನ್ನೂ ಓದಿ:  ತುಮಕೂರು ವಿವಿಯಲ್ಲಿ ಸಾವರ್ಕರ್ ಅಧ್ಯಯನ ಪೀಠ

ಈ ವೇಳೆ ಮಾತನಾಡಿದ ಮಾಜಿ ಸಿಂಡಿಕೇಟ್ ಸದಸ್ಯ ಕೊಟ್ಟ ಶಂಕರ್ ,ತುಮಕೂರು ವಿಶ್ವವಿದ್ಯಾಲಯದಲ್ಲಿ ಈಗಾಗಲೇ 14 ಅಧ್ಯಯನ ಪೀಠಗಳು ಚಾಲ್ತಿಯಲ್ಲಿವೆ. ಇವುಗಳು ಅನುದಾನದ ಕೊರತೆಯಿಂದ ಸರಿಯಾಗಿ ಕಾರ್ಯನಿರ್ವಹಿಸದೆ ಕುಂಟುತ್ತಾ ಸಾಗುತ್ತಿವೆ.ಅಧ್ಯಯನ ಪೀಠಗಳ ಮೂಲಕ ಯಾರ ಹೆಸರಿನಲ್ಲಿ ಸ್ಥಾಪಿಸಲ್ಪಟ್ಟಿವೆಯೋ ಅ ಮಹನೀಯರ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕಾದುದು ಪೀಠಗಳ ಕರ್ತವ್ಯವಾಗಿದೆ.ಆದರೆ ವರ್ಷಕ್ಕೊಮ್ಮೆ ಮಾತ್ರ ಈ ಅಧ್ಯಯನ ಪೀಠಗಳ ಕಾರ್ಯಕ್ರಮಗಳು ಜರುಗುತ್ತವೆ.ಆದರೆ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ದೃಷ್ಟಿಯಿಂದ ಈ ಪೀಠಗಳು ನಿರಂತರ ಚಟುವಟಿಕೆಯಿಂದ ಕಾರ್ಯಪ್ರವೃತ್ತ ವಾಗಬೇಕಾಗಿದೆ.ಆದರೆ ವಿವಿಯು ಇತ್ತೀಚೆಗೆ ಸಾವರ್ಕರ್ ಅಧ್ಯಯನ ಪೀಠ ಪ್ರಾರಂಭ ಮಾಡಲು ಸಿಂಡಿಕೇಟ್ ಅನುಮೋದನೆ ನೀಡಿದೆ ಎಂಬ ಹೇಳಿಕೆಯು ಅತ್ಯಂತ ಹಾಸ್ಯಾಸ್ಪದವಾಗಿದೆ ಎಂದರು. 

ಎಸ್‍ಎಫ್‍ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ಮಾತನಾಡಿ, 'ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಯಾವುದೇ ಕೊಡುಗೆಯನ್ನು ನೀಡದೆ ಕೋಮುವಾದಿ ಸಮಾಜವನ್ನು ವಿಭಜಿಸುವ ಜಾತ್ಯತೀತ ನಿಲುವುಗಳನ್ನು ನಾಶಪಡಿಸುವ ಧರ್ಮ-ಧರ್ಮಗಳ ಮಧ್ಯೆ ದ್ವೇಷವನ್ನು ಹರಡುವ ಮೂಲಕ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತ, ಗಾಂಧಿ ಸಾವಿಗೆ ಕಾರಣರಾದ ಸಾವರ್ಕರ್ ಅಧ್ಯಯನ ಪೀಠ ವಿದ್ಯಾರ್ಥಿಗಳಿಗೆ ಅಗತ್ಯವಿರುವುದಿಲ್ಲ.ದೇಶಕ್ಕಾಗಿ ದುಡಿದಂತಹ ಸಾವಿರಾರು ಮಂದಿ ದೇಶಪ್ರೇಮಿಗಳು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿ ಹುತಾತ್ಮರಾಗಿದ್ದಾರೆ. ಭಗತ್‍ಸಿಂಗ್,ಸುಭಾಷ್ ಚಂದ್ರಭೋಸ್, ಕಿತ್ತೂರುರಾಣಿ ಚೆನ್ನಮ್ಮ ಇಂತಹ ಮಹನೀಯರಿಂದ ವಿದ್ಯಾರ್ಥಿಗಳು ಹಲವಾರು ವಿಚಾರಗಳನ್ನು ಕಲಿಯುತ್ತಾರೆ. ವಿವಿಗಳು ಇಂತಹ ಪೀಠಗಳನ್ನು ಸ್ಥಾಪನೆ ಮಾಡುವುದರಿಂದ ವಿದ್ಯಾರ್ಥಿಗಳು ದೇಶಪ್ರೇಮ,ದೇಶದ ಅಭಿವೃದ್ಧಿಗಾಗಿ ದುಡಿಯುವುದನ್ನ ಕಲಿಯುತ್ತಾರೆ. ಆದರೆ ಬ್ರಿಟಿಷ್ ಅಧಿಕಾರಿಗಳಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟು ಜೈಲಿನಿಂದ ಬಿಡುಗಡೆಯಾದ ಸಾವರ್ಕರ್ ಅವರಿಂದ ಏನು ಕಲಿಯಲು ಸಾಧ್ಯವಿಲ್ಲ' ಎಂದು ಹೇಳಿದರು. 

ಎನ್‍ಎಸ್‍ಯುಐ ಮುಖಂಡ ರವಿಕುಮಾರ್ ರಾಯಸಂದ್ರ ಮಾತನಾಡಿ, ಸಾವರ್ಕರ್ ಸ್ವಾತಂತ್ರ್ಯ ಹೊರಾಟದಲ್ಲಿ ಭಾಗವಹಿಸಿದ್ದರು ಎಂಬುದಕ್ಕೆ ಇದುವರೆಗೂ ಯಾವುದೇ ರೀತಿಯ ದಾಖಲೆಗಳನ್ನು ಭಾರತ ಸರಕಾರಕ್ಕೆ ಲಭ್ಯವಾಗಿಲ್ಲ. ಕೋಮುವಾದಿ ಬಿಜೆಪಿ ಸರಕಾರವು ಸ್ವಾತಂತ್ರ್ಯಕ್ಕಾಗಿ ತನ್ನ ಪಕ್ಷದ ಯಾವುದೇ ಸದಸ್ಯರು ಇಲ್ಲದಿರುವುದನ್ನು ಮನಗಂಡು ಜನರ ಮಧ್ಯೆ ಕೋಮುವಾದ ಹುಟ್ಟು ಹಾಕಲು ಇಂತಹ ಪ್ರಯತ್ನಗಳನ್ನು ಮಾಡುತ್ತಿದೆ ಎಂದರು.

ಪ್ರತಿಭಟನೆಯಲ್ಲಿ ತುಮಕೂರು ಜಿಲ್ಲಾ ಪ್ರಗತಿಪರ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಹೆಚ್.ವಿ.ರಮೇಶ್, ಬಿವಿಎಸ್ ಮುಖಂಡ ರಂಗಧಾಮಯ್ಯ, ಭಾನುಪ್ರಕಾಶ್, ಎನ್‍ಎಸ್‍ಯುಐ ಅಮಾನುಲ್ಲಾ, ಎಸ್‍ಎಫ್‍ಐ ನಗರಾಧ್ಯಕ್ಷ ಶಶಿವರ್ಧನ್, ನಗರ ಕಾರ್ಯದರ್ಶಿ ಅಜಿತ್, ಮಂಜು, ವಾಲ್ಮಿಕಿ ಸೇನೆಯ ಕರಿಯ ನಿಶಾದ್, ಭಾರತೀಯ ಶರಣ ಸೇನೆಯ ಜಿಲ್ಲಾಧ್ಯಕ್ಷ ರಮೇಶ್, ದಲಿತ್ ವಿದ್ಯಾರ್ಥಿ ಸೇನೆ ಅಜಿತ್ ಕುಮಾರ್ ಬೆಳ್ಳಿಬಟ್ಲು, ಭಗತ್ ಸೇನೆ ರವಿಕುಮಾರ್ ಮೊದಲಾದವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X