ಗಣೇಶ ಚತುರ್ಥಿ ಹಿನ್ನೆಲೆ: ಆ.31ರಂದು ಬೆಂಗಳೂರು ನಗರದಲ್ಲಿ ಪ್ರಾಣಿವಧೆ, ಮಾಂಸ ಮಾರಾಟ ನಿಷೇಧ

ಬೆಂಗಳೂರು, ಆ.29: ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಆ.31ರಂದು ನಗರದಲ್ಲಿರುವ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.
ಇದನ್ನೂ ಓದಿ: ಮುರುಘಾ ಶರಣರ ವಿರುದ್ಧ ಪ್ರಕರಣ; ನಿಷ್ಪಕ್ಷಪಾತ ತನಿಖೆ ನಡೆಸಲು ಹೊರ ರಾಜ್ಯಕ್ಕೆ ವರ್ಗಾಯಿಸಿ: ಲೆಹರ್ ಸಿಂಗ್ ಆಗ್ರಹ
ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಮಾಂಸ ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ಅವರು, 'ಆ. 31 ರ ಬುಧವಾರದಂದು ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ' ಎಂದು ಹೇಳಿದ್ದಾರೆ.
Next Story